ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕಲಬುರಗಿ ಆರ್ಟ್ ಆಫ್ ಲಿವೀಂಗ್ ಸಂಸ್ಥೆಯ ಯೋಗ ಶಿಕ್ಷಕರಾದ ಎಲ್.ವಿ.ಕುಲಕರ್ಣಿ ಅವರು ಶನಿವಾರ ಅವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಯೋಗದಿಂದ ಆರೋಗ್ಯಕರ ಜೀವನ ಸಾಧ್ಯವಾಗಲಿದ್ದು, ಯೋಗ ನಮ್ಮ ಒಳಗಿನ ಆತ್ಮ ಶಕ್ತಿಯನ್ನು ಪ್ರಜ್ವಲಿಸುವಂತೆ ಮಾಡುತ್ತದೆ. ದೇಹ, ಮನಸ್ಸು, ಆತ್ಮದ ವಿಕಸನಕ್ಕೆ ಯೋಗ ಸಹಾಯಕವಾಗಿದೆ ಎಂದು ಹೇಳಿದರು.
ಆರ್ಟ್ ಆಫ್ ಲಿವೀಂಗ್ ಸಂಸ್ಥೆಯ ಯೋಗ ಗುರುಗಳಾದ ಎಲ್.ವಿ ಕುಲಕರ್ಣಿ ಹಾಗೂ ಶ್ರೀನಿವಾಸ ಅವರು 110 ಅಧಿಕಾರಿ/ಸಿಬ್ಬಂದಿಗಳು ಹಾಗೂ 250 ಜನ ಬಂಧಿಗಳು ಸೇರಿದಂತೆ ಒಟ್ಟು 360 ಜನರಿಗೆ ಯೋಗವನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ಈ ಸಂಸ್ಥೆಯ ಸಹಾಯಕ ಅಧೀಕ್ಷಕ ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿ ಭೀಮಾಶಂಕರ ಡಾಂಗೆ, ಜೈಲರ್ ಗಳಾದ ಸುನಂದ ವಿ., ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್, ಶಾಮರಾವ ಬಿದ್ರಿ ಸೇರಿದಂತೆ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂಸ್ಥೆ ಶಿಕ್ಷಕರಾದ ನಾಗರಾಜ ಮೂಲಗೆ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಸಂಸ್ಥೆಯ ಅಧೀಕ್ಷಕ ಎಂ.ಹೆಚ್. ಆಶೇಖಾನ್ ಅವರು ವಂದಿಸಿದರು.





