ಕೆಪಿಸಿಸಿ ಸಂಯೋಜಕರಾಗಿ ಇರ್ಫಾನುಲ್ಲಾ ಶರೀಫ್ ನೇಮಕ
ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇರ್ಫಾನುಲ್ಲಾ ಶರೀಫ್ ಅವರು ಕೆಪಿಸಿಸಿ ಸಂಯೋಜಕರಾಗಿ ನೇಮಕಗೊಂಡಿದ್ದಾರೆ.
ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲು ಇರ್ಫಾನುಲ್ಲಾ ಶರೀಫ್ ಅವರನ್ನು ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯೊಂದಿಗೆ ಸಂಯೋಜಕರನ್ನಾಗಿ ನೇಮಿಸಲಾಗಿದೆ.
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.
Next Story