Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು...

ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಶ್ಲಾಘನೀಯ : ಶರಣಪ್ಪ ಸಲದಾಪುರ

ವಾರ್ತಾಭಾರತಿವಾರ್ತಾಭಾರತಿ15 Oct 2025 11:27 PM IST
share
ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಶ್ಲಾಘನೀಯ : ಶರಣಪ್ಪ ಸಲದಾಪುರ

ಕಲಬುರಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಸಹಯೋಗದಲ್ಲಿ ಮದ್ಯ ವರ್ಜನ ಶಿಬಿರ ಹಮ್ಮಿಕೊಂಡು ರಾಜ್ಯದಲ್ಲಿ 1 ಲಕ್ಷ 40 ಸಾವಿರ ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಿರುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ.ವೀರೇಂದ್ರ ಹೆಗ್ಗಡೆಯವರ ದೊಡ್ಡ ಸಾಧನೆಯಾಗಿದ್ದು, ಅಭಿನಂದನೆಯ ಕಾರ್ಯಕ್ರಮ ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲದಾಪುರ ಅಭಿಪ್ರಾಯಪಟ್ಟರು.

ಕಲಬುರಗಿಯ ರಾಮತೀರ್ಥದ ಮಂದಾರ ಪುಷ್ಪ ಕಲ್ಯಾಣ ಮಂಟಪದಲ್ಲಿ ಅ.15ರಂದು ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಕಲಬುರಗಿ ಜಿಲ್ಲೆಯ ವತಿಯಿಂದ ನಡೆದ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದಲ್ಲಿ ಗ್ರಾಮಗಳ ಅಭಿವೃದ್ಧಿ, ಮಹಿಳೆಯರ ಸಬಲೀಕರಣ, ಪುರುಷರ ಬದುಕು ಹಸನ ಮಾಡುವಂತಹ ಕಾರ್ಯಗಳನ್ನು ನಡೆಸುತ್ತಿದ್ದು, 6.50 ಲಕ್ಷ ಸ್ವಸಹಾಯ ಸಂಘಗಳ ಮೂಲಕ ಸುಮಾರು 55 ಲಕ್ಷ ಸದಸ್ಯರು ಸಮಾಜ ಪರಿವರ್ತನೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮದ್ಯವರ್ಜನ ಶಿಬಿರ, ಕೆರೆಗಳ ಪುನರ್ ನಿರ್ಮಾಣ, ಶಿಕ್ಷಣಕ್ಕೆ ನೆರವು, ಆರ್ಥಿಕ ಸಬಲೀಕರಣ ಕ್ರಮಗಳು ಸಮಾಜದಲ್ಲಿ ಪ್ರಗತಿಗೆ ಕಾರಣವಾಗಿದೆ. ಬೀದರ್ ಜಿಲ್ಲೆಯಲ್ಲಿ ನಡೆಸಿದ ಕ್ಷೀರಕ್ರಾಂತಿಯಿಂದ ಗಮನಾರ್ಹ ಸಾಧನೆ ಮಾಡಲಾಗಿದೆ. ಧರ್ಮಸ್ಥಳ ಸಂಸ್ಥೆಗೆ ಅಂತರರಾಷ್ಟ್ರೀಯ ಮಟ್ಟದ ಮಾನ್ಯತೆ ಲಭಿಸಿರುವುದು ಹೆಮ್ಮೆಯ ಸಂಗತಿ. ಮದ್ಯದ ವ್ಯಸನದಿಂದ ಮುಕ್ತಿಗೊಳಿಸಿ ನವ ಜೀವನ ಕಲ್ಪಿಸುವ ಪ್ರಯತ್ನ ಶ್ಲಾಘನೀಯವಾದುದು. ಈ ಎಲ್ಲ ಕಾರ್ಯಕ್ರಮಗಳು ಪ್ರಗತಿಗೆ ಶಕ್ತಿ ತುಂಬಿದೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜಾರಿ ಮಾಡಿದ ಕಾರ್ಯಕ್ರಮಗಳಿಂದ ಗ್ರಾಮಾಂತರ ಪ್ರದೇಶಗಳ ಮಹಿಳೆಯರ ಬಾಳಿನಲ್ಲಿ ನೆಮ್ಮದಿಯ ಬೆಳಕು ಮೂಡುವಂತಾಗಿದೆ ಎಂದು ಮಹಾನಗರ ಪಾಲಿಕೆಯ ಮೇಯರ್ ವರ್ಷಾ ಜಾನೆ ಹೇಳಿದರು.

ಗಾಂಧಿ ಜಯಂತಿ ಆಚರಣೆಯ ಸಂದರ್ಭದಲ್ಲಿ ಪಾನಮುಕ್ತರ ಸಮಾವೇಶ ಮಾಡುವುದರ ಮೂಲಕ ಅರ್ಥಪೂರ್ಣ ಕಾರ್ಯಕ್ರಮ ಇದಾಗಿದ್ದು, ಪುರುಷರು ಕುಡಿತದಿಂದ ಮುಕ್ತರಾದರೆ ಕುಟುಂಬವು ಆರೋಗ್ಯ ಪೂರ್ಣವಾಗಿ ಮಹಿಳೆಯರ ಬಾಳು ನೆಮ್ಮದಿಯಿಂದ ಕೂಡಿರುತ್ತದೆ. ಒಳ್ಳೆಯ ಜೀವನ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಶಂಶಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಿಂದ ಸಮಾಜ ಪ್ರಗತಿಯ ದಾಪುಗಾಲು ಹಾಕುತ್ತಿದ್ದು. ಗ್ರಾಮೀಣ ಅಭಿವೃದ್ಧಿಯಲ್ಲಿ ದೊಡ್ಡ ಸಾಧನೆ ಮಾಡಲಾಗಿದೆ. ದೀಪದಿಂದ ದೀಪ ಬೆಳಗುವಂತೆ ಧರ್ಮಸ್ಥಳದ ಕಾರ್ಯಕ್ರಮಗಳಿಂದ ಬದುಕು ಹಸನಾಗುತ್ತಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣದಿಂದ ಶಕ್ತಿ ಸಾಮರ್ಥ್ಯ ವರ್ಧ ನೆಯಾಗಿ ಮೌನ ಕ್ರಾಂತಿ ನಡೆಯುತ್ತಿದೆ. ಧರ್ಮಸ್ಥಳದ ಸೇವಾ ಕಾರ್ಯಗಳಿಂದ ನಮ್ಮ ಮಠ.ಪ್ರಭಾವಿತವಾಗಿದ್ದು "ಜನ ಸೇವಾ ಟ್ರಸ್ಟ್" ಆರಂಭ ಮಾಡಲು ಪ್ರೇರಣೆ ಸಿಕ್ಕಿದೆ. ಶೀಘ್ರದಲ್ಲೇ ಗ್ರಾಮಾಂತರ ಪ್ರದೇಶಕ್ಕೆ ನಮ್ಮ ಟ್ರಸ್ಟ್ ಮೂಲಕ ಸೇವೆ ಪ್ರಾರಂಭಿಸಲಾಗುವುದು ಎಂದು ಶ್ರೀನಿವಾಸ ಸರಡಗಿ ಶಕ್ತಿ ಪೀಠದ ಡಾ.ಅಪ್ಪಾರಾವ್ ದೇವಿ ಮುತ್ಯಾ ಹೇಳಿದರು.

ಜಯಶ್ರೀ ಮತ್ತಿಮಡು ಮಾತನಾಡಿದರು.

ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ಸಿ ಎನ್ ಬಾಬಳಗಾಂವ ಮಹಾತ್ಮ ಗಾಂಧೀಜಿಯವರ ಬದುಕು ಮತ್ತು ಸಾಧನೆ ನಮಗೆಲ್ಲಾ ಆದರ್ಶವಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಡಾ.ಸದಾನಂದ ಪೆರ್ಲ, ಉಪಾಧ್ಯಕ್ಷರಾದ ಅನಿಲ್ ಕುಮಾರ್ ಡಾಂಗೆ, ಸದಸ್ಯರಾದ ಮಾಲತಿ ರೇಷ್ಮೆ, ಎಸ್. ಎಸ್.ಹಿರೇಮಠ, ಗಂಗಪ್ಪ ಹರಸೂರಕರ್, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ದಿನೇಶ್ ಪೂಜಾರಿ ಪ್ರಾಸ್ತಾವಿಕ ಭಾಷಣ ಮಾಡಿದರು. ನವಜೀವನ ಸಮಿತಿಯ ಸದಸ್ಯ ಆದಪ್ಪ ಭೀಮನಹಳ್ಳಿ ತಮ್ಮ ಅನಿಸಿಕೆ ಹಂಚಿಕೊಂಡರು. ಯೋಜನೆಯ ಜಿಲ್ಲಾ ನಿರ್ದೇಶಕರಾದ ಗಣಪತಿ ಮಾಳಿಂಜೆ ಸ್ವಾಗತ ಕೋರಿದರು.

ಕಾರ್ಯಕ್ರಮದಲ್ಲಿ ರವಿಕುಮಾರ್ ನೀಲೂರು, ಸೂರ್ಯಕಾಂತಿ ಅವರಾದ, ಶಾಂತಪ್ಪ ಕೋರೆ, ಪ್ರಭಾವತಿ ಮೇತ್ರೆ ಮಲ್ಲಿನಾಥ ಮೈಂದರ್ಗಿ, ರಾಜಕುಮಾರ್ ರಿಯಾಜ್ ಅಕ್ತಾರ್ , ಕಲ್ಲನಗೌಡ,ರಾಜೇಶ್, ಕೃಷ್ಣಪ್ಪ, ಮಹಾಂತೇಶ ಚಿದಂಬರ ಕೊಲ್ಲಾಪುರ, ಮಮತಾ ಮತ್ತಿತರು ಉಪಸ್ಥಿತರಿದ್ದರು.

ಪ್ರಶಾಂತ್ ನಿರೂಪಿಸಿದರು. ಮಂದಾರ ಪುಷ್ಪ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು.

ಕಾರ್ಯಕ್ರಮದ ಪೂರ್ವಭಾವಿಯಾಗಿ ಅಳಂದ ಚೆಕ್ ಪೋಸ್ಟ್ ದೇವಿ ಮಹಾದ್ವಾರದಿಂದ ನವ ಜೀವನ ಸಮಿತಿ ಸದಸ್ಯರ ಹಾಗೂ ನಾಗರಿಕರ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ, ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸ್ವಾಮಿ ವಿವೇಕಾನಂದ ಮುಂತಾದ ಮಹಾತ್ಮರ ವೇಷಭೂಷಣ ಧರಿಸಿದ ಮಕ್ಕಳು ಎಲ್ಲರ ಗಮನ ಸೆಳೆದರು. ಅಳಂದ ಕಮಲಾಪುರ, ಅಫಜಲ್ಪುರ ಹಾಗೂ ಕಲಬುರಗಿ ಯೋಜನಾ ಕಚೇರಿಗಳ ವ್ಯಾಪ್ತಿಯ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X