Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ | ಅಕ್ರಮ-ಸಕ್ರಮ ಅರ್ಜಿಗಳನ್ನು...

ಜೇವರ್ಗಿ | ಅಕ್ರಮ-ಸಕ್ರಮ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ: ಚಂದ್ರಶೇಖರ ಹರನಾಳ

"ಉಳುವವನೇ ಭೂ ಒಡೆಯ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ"

ವಾರ್ತಾಭಾರತಿವಾರ್ತಾಭಾರತಿ29 Sept 2026 8:33 PM IST
share
ಜೇವರ್ಗಿ | ಅಕ್ರಮ-ಸಕ್ರಮ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ: ಚಂದ್ರಶೇಖರ ಹರನಾಳ

ಜೇವರ್ಗಿ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದ ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆ ಲಕ್ಷಾಂತರ ಬಡ ಕುಟುಂಬಗಳಿಗೆ ಭೂಮಿಯ ಒಡೆತನ ಕಲ್ಪಿಸಿ ಬದುಕಿಗೆ ಆಧಾರವಾಗಿದೆ. ಈ ಮಹತ್ವದ ಯೋಜನೆಯನ್ನು ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಜಿಪಂ ಸದಸ್ಯ ಹಾಗೂ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಚಂದ್ರಶೇಖರ ಹರನಾಳ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. ದೇವರಾಜ ಅರಸು ಅವರು ದೀನದಲಿತರು, ಹಿಂದುಳಿದ ವರ್ಗಗಳು ಹಾಗೂ ಬಡವರ ಪರವಾಗಿ ಸಮಾಜಮುಖಿ ಆಡಳಿತ ನಡೆಸಿದ್ದರು. ಅವರ ಅವಧಿಯಲ್ಲಿ ಜಾರಿಗೆ ಬಂದ ‘ಉಳುವವನೇ ಭೂಮಿಯ ಒಡೆಯ’ ಕಾಯ್ದೆಯಿಂದ ರಾಜ್ಯದಾದ್ಯಂತ ಲಕ್ಷಾಂತರ ಬಡ ರೈತರು ಭೂಮಿಯ ಮಾಲೀಕರಾಗಲು ಸಾಧ್ಯವಾಯಿತು ಎಂದು ಹೇಳಿದರು.

ಜೇವರ್ಗಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಇಂತಹ ಅರ್ಜಿಗಳನ್ನು ಅಕ್ರಮ-ಸಕ್ರಮ ಸಮಿತಿ ಮೂಲಕ ಶೀಘ್ರ ಪರಿಶೀಲನೆ ನಡೆಸಿ, ಅರ್ಹ ಹಾಗೂ ನೈಜ ಫಲಾನುಭವಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.

ಈ ಹಿಂದೆ ತಾಲೂಕು ಆಡಳಿತದ ವತಿಯಿಂದ ಫಾರಂ ನಂ. 50, 53 ಹಾಗೂ 57ರಡಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸದ ಕಾರಣ ಅನೇಕ ಬಡ ಅರ್ಜಿದಾರರಿಗೆ ಸಾಗುವಳಿ ಚೀಟಿ ನೀಡಲಾಗಿಲ್ಲ. ಅಲ್ಲದೆ, ಅರ್ಹರಿಗೆ ಪಹಣಿ ಮಾಡಿಸಿಕೊಡುವಲ್ಲಿಯೂ ವಿಳಂಬವಾಗಿದೆ. ಈ ಸಮಸ್ಯೆಯನ್ನು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಬಡವರು ಹಾಗೂ ಭೂಹೀನರು ಹಲವು ವರ್ಷಗಳಿಂದ ತಮ್ಮ ಹಕ್ಕಿಗಾಗಿ ಕಾಯುತ್ತಿದ್ದಾರೆ. ಅವರ ಅರ್ಜಿಗಳನ್ನು ವಿಳಂಬ ಮಾಡದೆ ನಿಯಮಾನುಸಾರ ವಿಲೇವಾರಿ ಮಾಡುವ ಮೂಲಕ ಸರ್ಕಾರದ ಯೋಜನೆಯ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುಭಾಷ ಚನ್ನೂರ, ಭೀಮರಾಯ ನಗನೂರ, ವಿಶ್ವರಾಧ್ಯ ಗಂವ್ಹಾರ, ರವಿ ಕುಳಗೇರಿ, ಶ್ರೀಹರಿ ಕರಕಳ್ಳಿ, ಮಹೇಶ ಕೊಕಿಲೆ, ಸಿದ್ದು ಕೇರೂರ, ಮಲ್ಲಿಕಾರ್ಜುನ ಸಾತಖೇಡ, ಮರೆಪ್ಪ ಜನಿವಾರ, ರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Jevargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X