Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ | ಬೆಂಕಿಗೆ ಆಹುತಿಯಾದ 100...

ಜೇವರ್ಗಿ | ಬೆಂಕಿಗೆ ಆಹುತಿಯಾದ 100 ಕ್ವಿಂಟಾಲ್ ಹತ್ತಿ: ರೈತನಿಗೆ 10 ಲಕ್ಷ ರೂ. ನಷ್ಟ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ17 Nov 2026 7:39 PM IST
share
ಜೇವರ್ಗಿ | ಬೆಂಕಿಗೆ ಆಹುತಿಯಾದ 100 ಕ್ವಿಂಟಾಲ್ ಹತ್ತಿ: ರೈತನಿಗೆ 10 ಲಕ್ಷ ರೂ. ನಷ್ಟ

ಜೇವರ್ಗಿ: ತಾಲೂಕಿನ ಕಸರಭೋಸಗ ಗ್ರಾಮದಲ್ಲಿ ರೈತರೊಬ್ಬರು ವರ್ಷವಿಡೀ ಹಗಲಿರುಳು ಶ್ರಮಿಸಿ ಬೆಳೆದಿದ್ದ ಹತ್ತಿ ಬೆಳೆ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಬೂದಿಯಾದ ಘಟನೆ ನಡೆದಿದೆ. ಸುಮಾರು 10 ಲಕ್ಷ ರೂ. ಮೌಲ್ಯದ 100 ಕ್ವಿಂಟಾಲ್ ಹತ್ತಿ ನಾಶವಾಗಿದ್ದು, ರೈತ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.

ರೈತ ಶಿವಶರಣಪ್ಪ ಗುರುಬಸಪ್ಪ ಅವರ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಿಗೆ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ. ಸಾಲಸೋಲ ಮಾಡಿ ಕೃಷಿ ನಡೆಸಿದ್ದ ರೈತ, ಬೆಳೆದ ಹತ್ತಿಯನ್ನು ಮಾರಾಟ ಮಾಡಿ ಕುಟುಂಬದ ಆರ್ಥಿಕ ಸಂಕಷ್ಟ ನಿವಾರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರು. ಆದರೆ, ಕಣ್ಣೆದುರೇ ಬೆಳೆ ಬೆಂಕಿಗೆ ಆಹುತಿಯಾಗಿರುವುದರಿಂದ ರೈತ ಕುಟುಂಬದ ಕನಸು ನುಚ್ಚುನೂರಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಜೇವರ್ಗಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೆ, ಅಷ್ಟರಲ್ಲಾಗಲೇ ಅಪಾರ ಪ್ರಮಾಣದ ಹತ್ತಿ ಸುಟ್ಟು ಕರಕಲಾಗಿತ್ತು. ಇದರಿಂದ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಇದು ಆಕಸ್ಮಿಕವಾಗಿ ಸಂಭವಿಸಿದ ಘಟನೆಯೇ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಲ ಮಾಡಿ ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ಬೆಂಕಿಗೆ ಆಹುತಿಯಾಗಿರುವುದು ರೈತನ ಬದುಕಿಗೆ ದೊಡ್ಡ ಆಘಾತ ನೀಡಿದೆ. ಸಂಬಂಧಪಟ್ಟ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ನಷ್ಟದ ಸಮರ್ಪಕ ಸಮೀಕ್ಷೆ ನಡೆಸಿ, ಸಂತ್ರಸ್ತ ರೈತನಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

Tags

FarmerFirecottonJewargi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X