Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Jewargi | ತತ್ವಪದಕಾರರ ಪ್ರಾಧಿಕಾರ...

Jewargi | ತತ್ವಪದಕಾರರ ಪ್ರಾಧಿಕಾರ ರಚನೆಯಾಗಲಿ: ಪ್ರಕಾಶ ಅಂಗಡಿ

ವಾರ್ತಾಭಾರತಿವಾರ್ತಾಭಾರತಿ4 Oct 2026 7:08 PM IST
share
Jewargi | ತತ್ವಪದಕಾರರ ಪ್ರಾಧಿಕಾರ ರಚನೆಯಾಗಲಿ: ಪ್ರಕಾಶ ಅಂಗಡಿ

ಜೇವರ್ಗಿ: ರಾಜ್ಯ ಸರ್ಕಾರ ಈಗಾಗಲೇ ರಚಿಸಿರುವ ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಮಾದರಿಯಲ್ಲಿ ತತ್ವಪದಕಾರರ ಪ್ರಾಧಿಕಾರವನ್ನು ರಚಿಸಬೇಕು ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯ ಪ್ರಕಾಶ ಅಂಗಡಿ ಕನ್ನೆಳ್ಳಿ ಆಗ್ರಹಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಹಾಗೂ ಸ್ಪಂದನ ಮಹಿಳಾ ಮತ್ತು ಮಕ್ಕಳ ಸೇವಾ ಸಂಸ್ಥೆ, ಮಂದೇವಾಲ ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಜೇವರ್ಗಿ ತಾಲೂಕಿನ ತತ್ವಪದಕಾರರು’ ಕುರಿತ ಒಂದು ದಿನದ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಜೇವರ್ಗಿ ತಾಲೂಕು ತತ್ವಪದ ಪರಂಪರೆಯ ಶ್ರೀಮಂತ ನೆಲವಾಗಿದ್ದು, ನಾಡಿನ ತತ್ವಪದ ಸಾಹಿತ್ಯಕ್ಕೆ ಈ ಭಾಗದ ಕೊಡುಗೆ ಅನನ್ಯವಾಗಿದೆ ಎಂದರು.

ಜೇವರ್ಗಿ ತಾಲೂಕಿನ ತತ್ವಪದಕಾರರ ಕುರಿತು ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ವಿಶೇಷ ಅಧ್ಯಯನ ಕೇಂದ್ರ ಆರಂಭಿಸಬೇಕು. ಕರ್ನಾಟಕ ಜಾನಪದ ಅಕಾಡೆಮಿಯಲ್ಲಿ ಕಡಕೋಳ ಮಡಿವಾಳಪ್ಪ ಅವರ ಹೆಸರಿನಲ್ಲಿ ದತ್ತಿ ಪ್ರಶಸ್ತಿ ಸ್ಥಾಪಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಇರುವ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳ ಮಾದರಿಯಲ್ಲಿ ಕಡಕೋಳ ಮಡಿವಾಳಪ್ಪ ಅವರ ಹೆಸರಿನಲ್ಲಿ ಸರ್ಕಾರದಿಂದ ಟ್ರಸ್ಟ್ ಸ್ಥಾಪಿಸಬೇಕು ಎಂದು ಪ್ರಕಾಶ ಅಂಗಡಿ ಒತ್ತಾಯಿಸಿದರು.

ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್. ನಿರಗುಡಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತತ್ವಪದಕಾರರ ಸಾಹಿತ್ಯದ ಕುರಿತು ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು. ಎಂಫಿಲ್ ಹಾಗೂ ಪಿಎಚ್‌ಡಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಜೇವರ್ಗಿ ತಾಲೂಕಿನ ತತ್ವಪದಕಾರರ ಕುರಿತು ವಿಶೇಷ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಜಾನಪದ ಪರಿಷತ್ತಿನ ಕಲಬುರಗಿ ಜಿಲ್ಲಾಧ್ಯಕ್ಷ ಸಿ.ಎಸ್. ಮಾಲಿಪಾಟೀಲ ಮಾತನಾಡಿ, ಜಾನಪದ ಹಾಗೂ ತತ್ವಪದ ಸಾಹಿತ್ಯ ನಮ್ಮ ತಲೆಮಾರಿನ ಅಮೂಲ್ಯ ಆಸ್ತಿಯಾಗಿದೆ. ವಿದ್ಯಾರ್ಥಿಗಳು ಪಠ್ಯಕ್ಕೆ ಮಾತ್ರ ಸೀಮಿತರಾಗದೆ ಇಂತಹ ಪಠ್ಯೇತರ ವಿಷಯಗಳು ಹಾಗೂ ಸ್ಥಳೀಯ ಇತಿಹಾಸದ ಕುರಿತು ಅಧ್ಯಯನ ನಡೆಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಡಾ. ಶಾಂತಾ ಬಿ. ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಸ್ಪಂದನ ಮಹಿಳಾ ಮತ್ತು ಮಕ್ಕಳ ಸೇವಾ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಮಂದೇವಾಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಂತರ ನಡೆದ ಮೊದಲ ಗೋಷ್ಠಿಯಲ್ಲಿ ‘ಜೇವರ್ಗಿ ತಾಲೂಕಿನ ತತ್ವಪದಕಾರರು’ ವಿಷಯ ಕುರಿತು ಸಾಹಿತಿ ಡಾ. ಧರ್ಮಣ್ಣ ಬಡಿಗೇರ ಉಪನ್ಯಾಸ ನೀಡಿದರು. ಹಿರಿಯ ಸಾಹಿತಿ ಡಾ. ಗೋವಿಂದರಾಜ ಆಲ್ದಾಳ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನಾಗಣ್ಣ ಕಿಲಾರಿ ಸಮಾರೋಪ ನುಡಿಗಳನ್ನಾಡಿದರು. ಕನ್ನಡ ಪ್ರಾಧ್ಯಾಪಕರಾದ ಡಾ. ಖಾಜಾವಲಿ ಈಚನಾಳ ಹಾಗೂ ಭೀಮಣ್ಣ ಬೇಡಕಪ್ಪಳ್ಳಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಆಕಾಶವಾಣಿ ಕಲಾವಿದರಾದ ಮನೋಹರ ವಿಶ್ವಕರ್ಮ ಸಾಗರ ಹಾಗೂ ಬಸವರಾಜ ಜಾಯಿ ಅವರ ತಂಡವು ಕಡಕೋಳ ಮಡಿವಾಳಪ್ಪ ಅವರ ತತ್ವಪದಗಳನ್ನು ಸುಮಧುರವಾಗಿ ಹಾಡಿ ಕಾರ್ಯಕ್ರಮಕ್ಕೆ ಮೆರುಗು ತಂದಿತು. ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಸುಮಾರು 300 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಡಾ. ಖಾಜಾವಲಿ ಈಚನಾಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X