ಜೇವರ್ಗಿ | ಕಾಲು ಜಾರಿ ಕಾಲುವೆಗೆ ಬಿದ್ದು ಬಾಲಕ ಮೃತ್ಯು

ಜೇವರ್ಗಿ: ತಾಲ್ಲೂಕಿನ ಚಿಗರಹಳ್ಳಿ ಗ್ರಾಮದಲ್ಲಿ ಹೊಲಕ್ಕೆ ನೀರು ಹರಿಸುವ ಸಂದರ್ಭದಲ್ಲಿ ಕಾಲುವೆ ಬಳಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು 17 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ಬಾಲಕನನ್ನು ಚಿಗರಹಳ್ಳಿ ಗ್ರಾಮದ ಮುಹಮ್ಮದ್ ಸುಫಿಯಾನ್ (17) ಎಂದು ಗುರುತಿಸಲಾಗಿದೆ.
ಸುಫಿಯಾನ್ ಹೊಲಕ್ಕೆ ನೀರು ಬಿಡುವ ಕಾರ್ಯದಲ್ಲಿ ತೊಡಗಿದ್ದಾಗ ಕಾಲುವೆಯ ಸಮೀಪ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪರಿಣಾಮ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




