Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ | ಮೂಲಸೌಕರ್ಯ ಕಲ್ಪಿಸಲು...

ಜೇವರ್ಗಿ | ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ CPIಯಿಂದ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ9 Aug 2026 7:18 PM IST
share
ಜೇವರ್ಗಿ | ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ CPIಯಿಂದ ಪಾದಯಾತ್ರೆ

ಜೇವರ್ಗಿ: “ಬದಲಾವಣೆ ಅಗತ್ಯವಾಗಿದೆ” ಎಂಬ ಘೋಷಣೆಯೊಂದಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ರಾಜಕೀಯ ಅಭಿಯಾನದ ಅಂಗವಾಗಿ ಆ.10ರಂದು ಖಾದ್ಯಾಪುರದಿಂದ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜೇವರ್ಗಿ ತಾಲೂಕು ಕಾರ್ಯದರ್ಶಿ ಮಹಮ್ಮದ್ ಚೌಧರಿ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 9.30ಕ್ಕೆ ಖಾದ್ಯಾಪುರ ಗ್ರಾಮದ ಅಯ್ಯಣ್ಣ ಮುತ್ಯಾನ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕೊಡಚಿ ಮಾರ್ಗವಾಗಿ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಲಿದೆ. ಪಾದಯಾತ್ರೆಯ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಗುವುದು. ಬಳಿಕ ಸಮಸ್ಯೆಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಯಾಳವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 1.36 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಪಿಐ ಮುಖಂಡರು ಆಗ್ರಹಿಸಿದ್ದಾರೆ. ಸಾರ್ವಜನಿಕರ ಹಣ ದುರುಪಯೋಗವಾಗಿರುವ ಆರೋಪದ ಬಗ್ಗೆ ಪಾರದರ್ಶಕ ತನಿಖೆ ನಡೆಸಿ ವಾಸ್ತವಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲಸೌಕರ್ಯಕ್ಕೆ ಒತ್ತಾಯ

ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಸಾರ್ವಜನಿಕ ಶೌಚಾಲಯ, ಶಾಲೆಗಳಿಗೆ ಅಗತ್ಯ ಶಿಕ್ಷಕರ ನೇಮಕ, ಆರೋಗ್ಯ ಸೌಲಭ್ಯ, ಬಸ್ ವ್ಯವಸ್ಥೆ, ಬೀದಿ ದೀಪ ಹಾಗೂ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಅಲ್ಲದೆ, ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಕೆಲಸ ಒದಗಿಸಬೇಕು. ವಸತಿ ಹಾಗೂ ನಿವೇಶನ ರಹಿತರಿಗೆ ಮನೆ ಮತ್ತು ನಿವೇಶನ ಕಲ್ಪಿಸಬೇಕು. ಬಾಕಿ ಇರುವ ವಿಧವಾ, ವೃದ್ಧಾಪ್ಯ ಹಾಗೂ ವಿಶೇಷಚೇತನರ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಠೋಡ್, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ದೊಡ್ಡಮನಿ, ಮಲ್ಕಪ್ಪ ವಾಗಣಗೇರಿ, ರಾಘವೇಂದ್ರ ಹಂಗರಗ, ಖಾದ್ಯಾಪುರ ಘಟಕದ ರವಿಕುಮಾರ್ ಈರಣ್ಣಗೌಡ, ಕೊಡಚಿ ಘಟಕದ ನಂದಪ್ಪ ಗುರಿಕಾರ್, ಭೀಮನವಾಡಿ, ನಿಂಗಣ್ಣ ಶಹಾಬಾದ್, ಲಾಲ್ ಅಹಮದ್ ಚೌದರಿ, ನಿಂಗಪ್ಪ ಕವಲದಾರ್, ಸಿದ್ದಣ್ಣ ವಾಡಿ, ಮಲ್ಲೇಶಿ ವಡಿಗೇರಿ, ರಫೀಕ್ ಇನಾಮ್ದಾರ್ ಸೇರಿದಂತೆ ನೂರಾರು ಗ್ರಾಮಸ್ಥರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಪ್ರಗತಿಪರರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಪಾದಯಾತ್ರೆಯು ಆ.14ರಂದು ಜೇವರ್ಗಿ ತಾಲೂಕು ಕೇಂದ್ರದಲ್ಲಿ ಸಮಾರೋಪಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮಹಮ್ಮದ್ ಚೌದರಿ ಮನವಿ ಮಾಡಿದ್ದಾರೆ.

Tags

JewargiCPImarch
share
ವಾರ್ತಾಭಾರತಿ
ವಾರ್ತಾಭಾರತಿ
Next Story
X