ಜೇವರ್ಗಿ | ಡಾ.ಮಲ್ಲಿಕಾರ್ಜುನ್ ಖರ್ಗೆ ಅವರು ಓರ್ವ ವ್ಯಕ್ತಿಯಲ್ಲ, ಅವರೊಂದು ಶಕ್ತಿ : ಶ್ರೀಮಂತ್ ಕಿಲೆದಾರ್

ಕಲಬುರಗಿ: ಡಾ.ಮಲ್ಲಿಕಾರ್ಜುನ್ ಖರ್ಗೆ ಅವರು ತಳಹಂತದಿಂದ ಉನ್ನತ ಅಧಿಕಾರದ ಹುದ್ದೆಯ ಸ್ಥಾನಮಾನಗಳನ್ನು ಪಡೆದುಕೊಂಡಿದ್ದಾರೆ. ಅವರು ಕಲ್ಯಾಣ ಕರ್ನಾಟಕಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಅವರು ಓರ್ವ ವ್ಯಕ್ತಿಯಲ್ಲ, ಒಂದು ಶಕ್ತಿ ಎಂದು ಜಿಲ್ಲಾ ಕಾಂಗ್ರೆಸ್ ಸೇವಾದಳ ಕಲಬುರಗಿ ಯ ಜಂಟಿ ಕಾರ್ಯದರ್ಶಿ ಶ್ರೀಮಂತ ಕಿಲೇದಾರ್ ಅಭಿಮತಪಟ್ಟರು.
ಜೇವರ್ಗಿ ಪಟ್ಟಣದ ಚಿಕ್ಕಜೇವರ್ಗಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಯವರ ಜನ್ಮದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ನೋಟು ಬುಕ್ ವಿತರಣೆ ಮಾಡಲಾಯಿತು.
ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿ ಮಾತನಾಡಿದ ಶ್ರೀಮಂತ್ ಕಿಲೇದಾರ್, ಬಡತನದಲ್ಲಿ ನೊಂದು ಬೆಂದು, ಉತ್ತಮ ಶಿಕ್ಷಣ ಪಡೆದುಕೊಂಡು ರಾಷ್ಟ್ರದ ದೊಡ್ಡ ಪಕ್ಷದ ಅಧ್ಯಕ್ಷರಾಗಿದ್ದಾರೆ. ಜೀವನದಲ್ಲಿ ಹಲವಾರು ನೋವುಗಳನ್ನುಂಡರೂ ಕೂಡ ಎದೆಗುಂದದೆ ಹಲವು ಸಾಧನೆಗಳನ್ನು ಮಾಡಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮುಖಾಂತರ ದೇಶದಲ್ಲಿ ಹೆಸರುವಾಸಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ನಾಗಮ್ಮ ಭೂತಪುರ, ದೇವಿಕಾ, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷ ವಿಶ್ವರಾಧ್ಯ ಗೋಪಾಲ್ಕರ್, ಮುಖಂಡರಾದ ಶ್ರೀಹರಿ ಕರ್ಕಳ್ಳಿ , ಸಿದ್ದು ಕೆರೂರ್, ಶರಣಬಸಪ್ಪ ಲಕಣಪುರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







