ಜೇವರ್ಗಿ | ತಾಲೂಕು ಆಡಳಿತದಿಂದ ಕನಕದಾಸ ಜಯಂತಿ ಆಚರಣೆ

ಜೇವರ್ಗಿ: ಪಟ್ಟಣದ ತಾಲೂಕು ಆಡಳಿತದ ವತಿಯಿಂದ ಭಕ್ತ ಕನಕದಾಸರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜೇವರ್ಗಿ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಎಪಿಎಂಸಿ ಕಾರ್ಯದರ್ಶಿ ಸುಮಂಗಲಾ, ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಹುಲಕಂಠರಾಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಮುಖಂಡರಾದ ನಿಂಗಪ್ಪ ಮಾಸ್ಟರ್, ನಿಂಗಪ್ಪ ರೇಡವಾಡಗಿ, ರವಿಚಂದ್ರ ಗುತ್ತೇದಾರ್, ಡಿ.ಬಿ. ಪಾಟೀಲ್ ಸೇರಿದಂತೆ ಅನೇಕ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಕನಕದಾಸರ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡರು.
Next Story




