Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Jewargi | ಅಧ್ಯಾಪಕರು ಜ್ಞಾನ, ಬೋಧನಾ...

Jewargi | ಅಧ್ಯಾಪಕರು ಜ್ಞಾನ, ಬೋಧನಾ ಕೌಶಲ್ಯ ನಿರಂತರ ನವೀಕರಿಸಿಕೊಳ್ಳಬೇಕು: ಅಂಜುಮ್ ತಬಸ್ಸುಮ್

ವಾರ್ತಾಭಾರತಿವಾರ್ತಾಭಾರತಿ8 Aug 2026 6:01 PM IST
share
Jewargi | ಅಧ್ಯಾಪಕರು ಜ್ಞಾನ, ಬೋಧನಾ ಕೌಶಲ್ಯ ನಿರಂತರ ನವೀಕರಿಸಿಕೊಳ್ಳಬೇಕು: ಅಂಜುಮ್ ತಬಸ್ಸುಮ್

ಜೇವರ್ಗಿ: ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆದರ್ಶಪ್ರಾಯ ಮಾರ್ಗದರ್ಶಕರಾಗಬೇಕು. ಕಾಲಕ್ಕೆ ತಕ್ಕಂತೆ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ಅಧ್ಯಾಪಕರು ತಮ್ಮ ಜ್ಞಾನ ಹಾಗೂ ಬೋಧನಾ ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸಿಕೊಳ್ಳುವುದು ಅತ್ಯವಶ್ಯಕ ಎಂದು ತಹಶೀಲ್ದಾರ್ ಅಂಜುಮ್ ತಬಸ್ಸುಮ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ (ಐಕ್ಯೂಎಸಿ) ವತಿಯಿಂದ ಆಯೋಜಿಸಿದ್ದ ಒಂದು ವಾರದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅಧ್ಯಾಪಕರಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಅಧ್ಯಾಪಕರನ್ನು ಬೋಧನಾ ವೃತ್ತಿಯಲ್ಲಿ ಮತ್ತಷ್ಟು ಸಶಕ್ತಗೊಳಿಸುವಲ್ಲಿ ಇಂತಹ ಅಭಿವೃದ್ಧಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಕಾರ್ಯಕ್ರಮದಲ್ಲಿ ಕೆಸಿಎಸ್‌ಆರ್, ಒತ್ತಡ ನಿರ್ವಹಣೆ ಸೇರಿದಂತೆ ಉಪಯುಕ್ತ ವಿಷಯಗಳನ್ನು ಆಯ್ಕೆ ಮಾಡಿಕೊಂಡಿರುವುದು ಶ್ಲಾಘನೀಯ. ಇಂತಹ ತರಬೇತಿಗಳ ಮೂಲಕ ಅಧ್ಯಾಪಕರು ತಮ್ಮ ವೃತ್ತಿಪರ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.

ತಮ್ಮ ಬೋಧನಾ ಅವಧಿಯ ದಿನಗಳನ್ನು ಸ್ಮರಿಸಿಕೊಂಡ ಅವರು, ಅಧ್ಯಾಪಕ ವೃತ್ತಿಯ ಮಹತ್ವ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿಯ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಶಾಂತಾ ಅಷ್ಟಗಿ ಮಾತನಾಡಿ, ಅಧ್ಯಾಪಕರು ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮ ಬೋಧನಾ ಕೌಶಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕು. ಕಲಿಕೆಯ ಪ್ರಕ್ರಿಯೆಯಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.

ಐಕ್ಯೂಎಸಿ ಸಂಯೋಜಕ ಡಾ. ಸಂದೀಪ ತಿವಾರಿ ಸ್ವಾಗತಿಸಿದರು. ಹಿಂದಿ ಅಧ್ಯಾಪಕ ಕುಪೇಂದ್ರ ರಾಠೋಡ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಕಾರ್ಯದರ್ಶಿ ಡಾ. ಖಾಜಾವಲಿ ಈಚನಾಳ ವಂದಿಸಿದರು.

ಈ ಸಂದರ್ಭದಲ್ಲಿ ಐಕ್ಯೂಎಸಿ ಸಹ ಸಂಯೋಜಕ ರವೀಂದ್ರ ಸೇರಿದಂತೆ ಕಾಲೇಜಿನ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Tags

TeachersJewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X