Jewargi | ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕ ಮೃತ್ಯು : ಪ್ರಕರಣ ದಾಖಲು

ಜೇವರ್ಗಿ: ತಾಲೂಕಿನ ಆಂದೋಲ ಗ್ರಾಮದ ಸಮೀಪ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 24 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಆಂದೋಲ ತಾಂಡಾ ನಿವಾಸಿ ಆಕಾಶ ತಂದೆ ಮಹಾಂತೇಶ ರಾಠೋಡ (24) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಬೆಳೆಗೆ ಔಷಧಿ ಸಿಂಪಡಿಸಿ ಟ್ರ್ಯಾಕ್ಟರ್‌ನಲ್ಲಿ ಗ್ರಾಮಕ್ಕೆ ವಾಪಸಾಗುತ್ತಿದ್ದ ವೇಳೆ ವಾಹನದ ಮೇಲಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನೀರಿನ ನಾಲೆಗೆ ಟ್ರ್ಯಾಕ್ಟರ್ ಉರುಳಿದೆ. ಈ ವೇಳೆ ಟ್ರ್ಯಾಕ್ಟರ್ ಅವರ ಮೇಲೆಯೇ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜೇವರ್ಗಿ ಪೊಲೀಸ್ ಠಾಣೆಯ ಪಿಎಸ್ಐ ಗಜಾನಂದ ಬಿರಾದಾರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story




