Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್...

ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಆಗ್ರಹ : ಕಲಬುರಗಿಯಲ್ಲಿ ರೈಲ್ವೆ ಹಳಿಯ ಮೇಲೆ ಎಡಪಕ್ಷಗಳು, ಯುವಜನರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Oct 2026 9:31 PM IST
share
ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಆಗ್ರಹ : ಕಲಬುರಗಿಯಲ್ಲಿ ರೈಲ್ವೆ ಹಳಿಯ ಮೇಲೆ ಎಡಪಕ್ಷಗಳು, ಯುವಜನರಿಂದ ಪ್ರತಿಭಟನೆ

ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಡಪಕ್ಷಗಳು ಮತ್ತು ವಿದ್ಯಾರ್ಥಿ-ಯುವಜನ ಸಂಘಟನೆಗಳ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ರೈಲ್ವೆ ಹಳಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

ಸಿಪಿಐ(ಎಂ), ಸಿಪಿಐ ಹಾಗೂ ಎಸ್‌ಯುಸಿಐ(ಸಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಮಾತನಾಡಿ, ಎಸ್‌ಐಆರ್ ಮೂಲಕ ಕೋಟ್ಯಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿಸುವ ಅಪಾಯವಿದೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕವಾದ ಕ್ರಮವಾಗಿದೆ ಎಂದು ಆರೋಪಿಸಿದರು. ದಿಲ್ಲಿಯಲ್ಲಿ ಪ್ರತಿಭಟನಾಕಾರರ ಸಂಚಾರಕ್ಕೆ ನಿರ್ಬಂಧ ವಿಧಿಸಿ, ಮೆಟ್ರೊ ಹಾಗೂ ರೈಲುಗಳ ಸಂಚಾರಕ್ಕೆ ಅಡ್ಡಿಪಡಿಸುವ ಮೂಲಕ ಜನಾಂದೋಲನವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಮಹೇಶಕುಮಾರ ರಾಠೋಡ್ ಮಾತನಾಡಿ, ಎಸ್‌ಐಆರ್ ಅಸಂವಿಧಾನಿಕವಾಗಿದ್ದು, ಅದನ್ನು ರದ್ದುಗೊಳಿಸುವುದೇ ಪರಿಹಾರವಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಆಡಳಿತಾರೂಢ ಬಿಜೆಪಿಯ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಅಂತ್ಯ ಹಾಡಬೇಕು ಎಂದು ಆಗ್ರಹಿಸಿದರು.

ಎಸ್‌ಯುಸಿಐ(ಸಿ) ಜಿಲ್ಲಾ ಮುಖಂಡ ಶರ್ಮಾ ಮಾತನಾಡಿ, ಪ್ರತಿಭಟನಾಕಾರರ ಮೇಲೆ ಬಲಪ್ರಯೋಗ ಮಾಡುವ ಮೂಲಕ ಹೋರಾಟದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದ್ದು, ಇದರ ವಿರುದ್ಧ ಜನರು ಸಂಘಟಿತ ಹೋರಾಟ ನಡೆಸಬೇಕು ಎಂದರು.

ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಲವಿತ್ರ ಮಾತನಾಡಿ, ಪ್ರತಿಭಟನೆಯಲ್ಲಿ ಜನರು ಪಾಲ್ಗೊಳ್ಳದಂತೆ ಸಾರಿಗೆ ವ್ಯವಸ್ಥೆಗೆ ನಿರ್ಬಂಧ ವಿಧಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು. ರೈಲು ಸಂಚಾರಕ್ಕೆ ಅಡ್ಡಿಪಡಿಸಿದರೂ ರೈಲ್ವೆ ನಿಲ್ದಾಣವನ್ನೇ ಹೋರಾಟದ ಅಂಗಳವನ್ನಾಗಿ ಮಾಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಯುವಜನರು ಹೋರಾಟ ಮುಂದುವರಿಸಲಿದ್ದಾರೆ ಎಂದು ಹೇಳಿದರು.

ಎಸ್‌ಎಫ್‌ಐ ವಿದ್ಯಾರ್ಥಿ ನಾಯಕ ಗಣೇಶ ರಾಠೋಡ್ ಮಾತನಾಡಿ, ಮತದಾನದ ಹಕ್ಕು ಮತ್ತು ಯುವಜನರ ಭವಿಷ್ಯದ ರಕ್ಷಣೆಗೆ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಡಲಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕ ತುಳಜಾರಾಂ, ಮಹಿಳಾ ಸಂಘಟನೆಯ ರಾಧಾ, ಸುಧಾಮ ಧನ್ನಿ, ಭೀಮಶೆಟ್ಟಿ ಯಂಪಳ್ಳಿ, ಪಾಂಡುರಂಗ ಮಾವಿನಕರ್, ನಾಗಪ್ಪ ರಾಯಚೂರಕರ್, ಅಫಜಲ್ ಅಹಮದ್, ಸಾಹಿದ್ ಅಹಮದ್, ಡಾ. ಮೀನಾಕ್ಷಿ ಬಾಳಿ, ಕೋದಂಡರಾಮಪ್ಪ, ಮಹೇಶ ಎಸ್.ಪಿ., ಸುಜಾತಾ ಕುಸನೂರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ವಜಾ ಮತ್ತು ಪ್ರಜಾಸತ್ತಾತ್ಮಕ ಪ್ರತಿಭಟನೆಯ ಹಕ್ಕಿನ ರಕ್ಷಣೆಗೆ ಆಗ್ರಹಿಸಿ ಹೋರಾಟವನ್ನು ಮುಂದುವರಿಸುವುದಾಗಿ ಸಂಘಟನೆಗಳ ಮುಖಂಡರು ತಿಳಿಸಿದರು.

Tags

Jyanesh KumarSIRLeft partiesstudents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X