Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 1 ಲಕ್ಷ ಲಂಚ ಪಡೆದ...

Kalaburagi | 1 ಲಕ್ಷ ಲಂಚ ಪಡೆದ ಪ್ರಕರಣ: ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ9 July 2026 7:17 PM IST
share
Kalaburagi | 1 ಲಕ್ಷ ಲಂಚ ಪಡೆದ ಪ್ರಕರಣ: ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು ಶಿಕ್ಷೆ

ಕಲಬುರಗಿ : ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ತಹಸೀಲ್ದಾರ್ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ಖಾಸಗಿ ವ್ಯಕ್ತಿ ಶಿವಾನಂದ ಜಮಖಂಡಿ ಅವರಿಗೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ತಲಾ ನಾಲ್ಕು ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರದಂತೆ, ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರನ್ನು ಬಗೆಹರಿಸಲು ಸಹಾಯ ಮಾಡುವುದಾಗಿ ಹೇಳಿ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲಂಚ ನೀಡದಿದ್ದರೆ ಕೆಲಸದ ಸ್ಥಳದಿಂದ ತೆರವುಗೊಳಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಶಿವಲಿಂಗಯ್ಯ ಅವರು 2017ರ ಆಗಸ್ಟ್ 31ರಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಬಲೆ ಬೀಸಿ, ಶಶಿಕಲಾ ಪಾದಗಟ್ಟಿ ಅವರ ಸೂಚನೆಯಂತೆ ಶಿವಾನಂದ ಜಮಖಂಡಿ ಮೂಲಕ ಲಂಚದ ಹಣ ಸ್ವೀಕರಿಸುವ ವೇಳೆ ಇಬ್ಬರನ್ನೂ ಬಂಧಿಸಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದರು.

ಶಶಿಕಲಾ ಪಾದಗಟ್ಟಿ ಅವರಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 7 ಹಾಗೂ 13(1)(ಡಿ) ಓದು 13(2)ರಡಿ, ಶಿವಾನಂದ ಜಮಖಂಡಿ ಅವರಿಗೆ ಕಲಂ 8ರಡಿ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಜುಲೈ 8ರಂದು ತೀರ್ಪು ಪ್ರಕಟಿಸಿದರು.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಲೋಕಾಯುಕ್ತ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠ ವಾದ ಮಂಡಿಸಿದರು. ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹಣಮಂತರಾಯ ಹಾಗೂ ಗುಂಡುರಾವ್ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X