Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನ.15ರಂದು 10ನೇ ತಾಲೂಕು...

Kalaburagi | ನ.15ರಂದು 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಡಾ.ಬಸವರಾಜ ಕೋಣೆಕ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ4 Nov 2026 5:16 PM IST
share
Kalaburagi | ನ.15ರಂದು 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಡಾ.ಬಸವರಾಜ ಕೋಣೆಕ್ ಆಯ್ಕೆ

ಕಲಬುರಗಿ: 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನ.15ರಂದು ನಗರದ ಕನ್ನಡ ಭವನದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪುಸ್ತಕೋದ್ಯಮಿ ಹಾಗೂ ಪ್ರಕಾಶಕ ಡಾ. ಬಸವರಾಜ ಕೋಣೆಕ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಹಾಗೂ ತಾಲೂಕು ಅಧ್ಯಕ್ಷೆ ಶಿವಲೀಲಾ ಕಲಗುರ್ಕಿ ತಿಳಿಸಿದ್ದಾರೆ.

ಡಾ. ಬಸವರಾಜ ಕೋಣೆಕ್ ಅವರು ಮೂಲತಃ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದವರಾದರೂ, ಕಳೆದ ಹಲವು ದಶಕಗಳಿಂದ ಕಲಬುರಗಿಯನ್ನು ತಮ್ಮ ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಪುಸ್ತಕದಂಗಡಿಯಲ್ಲಿ ನೌಕರರಾಗಿ ಅನುಭವ ಪಡೆದ ಅವರು, ಬಳಿಕ ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೋ ಹಾಗೂ ಪ್ರಕಾಶನ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ಪುಸ್ತಕ ಸಂಸ್ಕೃತಿಯ ಬೆಳವಣಿಗೆಗೆ ನಾಲ್ಕೂವರೆ ದಶಕಗಳ ಕಾಲ ನಿರಂತರವಾಗಿ ಶ್ರಮಿಸಿದ್ದಾರೆ. ಕಾಯಕಯೋಗಿಯಾಗಿ ತನು-ಮನದಿಂದ ದುಡಿದ ಅವರು, ಶೋರೂಮ್ ಹಾಗೂ ಬುಕ್ ಮಹಲ್ ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಅತಿದೊಡ್ಡ ಪುಸ್ತಕ ಮಳಿಗೆಗಳಲ್ಲಿ ಒಂದಾದ ಬುಕ್ ಮಹಲ್‌ನ್ನು ಆರಂಭಿಸಿದ ಅವರು, ನೂರಾರು ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರ ಪ್ರತಿಭೆಯನ್ನು ಗುರುತಿಸಿ ಪುಸ್ತಕ ಬರೆಯಲು ಪ್ರೋತ್ಸಾಹಿಸಿದ್ದಾರೆ. ಅವರಲ್ಲಿ ಹಲವರು ಇಂದು ನಾಡಿನ ಪ್ರಮುಖ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಪ್ರಕಾಶನ ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ಪ್ರೊ. ಬಾಲಚಂದ್ರ ಜಯಶೆಟ್ಟಿ ಹಾಗೂ ಡಾ. ಗವಿಸಿದ್ದಪ್ಪ ಪಾಟೀಲ ಅವರ ಸಲಹೆಯಂತೆ 2002ರಲ್ಲಿ ಏಕಕಾಲಕ್ಕೆ 25 ಕೃತಿಗಳನ್ನು ಪ್ರಕಟಿಸುವ ಮೂಲಕ ಹೊಸ ಪ್ರಯತ್ನಕ್ಕೆ ನಾಂದಿ ಹಾಡಿದರು. ಅಂದಿನಿಂದ ಇಂದಿನವರೆಗೂ ಈ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಇದುವರೆಗೆ ಸುಮಾರು 3,700 ಪುಸ್ತಕಗಳನ್ನು ಪ್ರಕಟಿಸಿರುವ ಅವರು, ಕರ್ನಾಟಕ ಮಾತ್ರವಲ್ಲದೆ ದೇಶದ ಉತ್ತಮ ಪ್ರಕಾಶಕರಲ್ಲಿ ಒಬ್ಬರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜನಪ್ರಿಯ ಮಾಲಿಕೆ, ಸಾಹಿತಿಗಳ ಮಾಲಿಕೆ, ತಾಲೂಕು ದರ್ಶನ ಮಾಲಿಕೆ, ವಾಚಿಕೆಗಳು, ಸಾಹಿತ್ಯ ಕೃತಿಗಳು, ಸಂಪಾದಿತ ಕೃತಿಗಳು ಹಾಗೂ ಸಮಗ್ರ ಸಂಪುಟಗಳನ್ನು ಪ್ರಕಟಿಸಿದ್ದಾರೆ. ರಾಜ್ಯದ ಹಲವು ವಿಶ್ವವಿದ್ಯಾಲಯಗಳ ಪಠ್ಯಪುಸ್ತಕಗಳನ್ನೂ ತಮ್ಮ ಪ್ರಕಾಶನದ ಮೂಲಕ ಹೊರತಂದಿದ್ದಾರೆ.

ಪ್ರಕಾಶನ ಕ್ಷೇತ್ರದ ಸೇವೆಯನ್ನು ಗುರುತಿಸಿ ಕನ್ನಡ ಪುಸ್ತಕ ಪ್ರಾಧಿಕಾರದ ಅತ್ಯುತ್ತಮ ಪ್ರಕಾಶಕ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯೋತ್ಸವ ಅತ್ಯುತ್ತಮ ಪ್ರಕಾಶಕ ಪ್ರಶಸ್ತಿ ಹಾಗೂ ಶ್ರೀ ಚನ್ನ ರತ್ನ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಅವರಿಗೆ ಲಭಿಸಿವೆ. ಶರಣಬಸವ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ. ಜಿಲ್ಲಾ ಗಡಿನಾಡ ಸಮ್ಮೇಳನದ ಅಧ್ಯಕ್ಷರಾಗಿಯೂ, ಪ್ರಥಮ ರಾಜ್ಯಮಟ್ಟದ ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರ ಗೌರವಾರ್ಥ ‘ಬಸವ ಸಿರಿ’ ಅಭಿನಂದನಾ ಗ್ರಂಥವನ್ನೂ ಬಿಡುಗಡೆ ಮಾಡಲಾಗಿದೆ. ಅವರ ಪ್ರಕಾಶನ ಸಂಸ್ಥೆಯ ಕುರಿತು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಎಂಫಿಲ್ ಹಾಗೂ ಪಿಎಚ್‌ಡಿ ಅಧ್ಯಯನಗಳೂ ನಡೆದಿವೆ.

‘ಥಾಯ್’ ಎಂಬ ಪ್ರವಾಸ ಕಥನ ಸೇರಿದಂತೆ ಹಲವು ಲೇಖನಗಳನ್ನು ಅವರು ಸಾಂದರ್ಭಿಕವಾಗಿ ಬರೆದಿದ್ದಾರೆ. ಪುಸ್ತಕ ಸಂಸ್ಕೃತಿಯ ಬೆಳವಣಿಗೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರನ್ನು 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಪದಾಧಿಕಾರಿಗಳು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X