Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿವಿಯ 11...

Kalaburagi | ಶರಣಬಸವ ವಿವಿಯ 11 ವಿದ್ಯಾರ್ಥಿನಿಯರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ

ವಾರ್ತಾಭಾರತಿವಾರ್ತಾಭಾರತಿ13 Oct 2026 8:02 PM IST
share
Kalaburagi | ಶರಣಬಸವ ವಿವಿಯ 11 ವಿದ್ಯಾರ್ಥಿನಿಯರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಬಿಬಿಎ (ಮಹಿಳೆಯರಿಗೆ ಮಾತ್ರ) ವಿಭಾಗದ ಅಂತಿಮ ವರ್ಷದ 11 ವಿದ್ಯಾರ್ಥಿನಿಯರು ಬೆಂಗಳೂರಿನ ಪ್ರತಿಷ್ಠಿತ ಲಾಜಿಸ್ಟಿಕ್ಸ್ ಕಂಪನಿ ಗ್ಲೋಲಾಜಿಕ್ಸ್ ಸೊಲ್ಯೂಷನ್ಸ್‌ನಲ್ಲಿ ಉದ್ಯೋಗಾವಕಾಶ ಗಿಟ್ಟಿಸಿಕೊಳ್ಳುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಬಿಬಿಎ ವಿದ್ಯಾರ್ಥಿನಿಯರಿಗಾಗಿ ವಿಶೇಷವಾಗಿ ಆಯೋಜಿಸಲಾಗಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಈ ವಿದ್ಯಾರ್ಥಿನಿಯರು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಅವರು ಮಂಗಳವಾರ ಕಲಬುರಗಿಯಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆಯಾದ 11 ವಿದ್ಯಾರ್ಥಿನಿಯರಲ್ಲಿ ಏಳು ಮಂದಿ ವಾರ್ಷಿಕ 6.20 ಲಕ್ಷ ರೂ. ವೇತನದ ಪ್ಯಾಕೇಜ್‌ನೊಂದಿಗೆ ‘ಇನ್‌ಸೈಡ್ ಸೇಲ್ಸ್ ರೆಪ್ರೆಸೆಂಟೇಟಿವ್’ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಉಳಿದ ನಾಲ್ವರು ವಾರ್ಷಿಕ 3.64 ಲಕ್ಷ ರೂ. ವೇತನದ ಪ್ಯಾಕೇಜ್‌ನೊಂದಿಗೆ ಮಾನವ ಸಂಪನ್ಮೂಲ ಮತ್ತು ಪ್ರತಿಭಾ ನೇಮಕಾತಿ (ಎಚ್‌ಆರ್/ಟ್ಯಾಲೆಂಟ್ ಅಕ್ವಿಸಿಷನ್) ವಿಭಾಗದ ಹುದ್ದೆಗಳನ್ನು ಪಡೆದುಕೊಂಡಿದ್ದಾರೆ.

ಬಿಬಿಎ ವಿಭಾಗದ ಮುಖ್ಯಸ್ಥೆ ಪ್ರೊ. ಶಿಲ್ಪಾ ಕಂದಗೋಳ ಅವರು ಮಾಹಿತಿ ನೀಡಿ, ಸಹನಾ ತಡಕಲ್, ಪ್ರಿಯಾಂಕಾ, ಹಫ್ಸಾ ಶಿರೀನ್ ಶೇಕ್, ಸುಷ್ಮಿತಾ, ಬಾಬನ್‌ಬೀ, ಅಫ್ರೀನ್ ಕೌಸರ್ ಹಾಗೂ ಮಧುಮತಿ ಹಿರೇಮಠ ಅವರು ಇನ್‌ಸೈಡ್ ಸೇಲ್ಸ್ ರೆಪ್ರೆಸೆಂಟೇಟಿವ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಅದೇ ರೀತಿ, ಮುಸ್ಕಾನ್ ಅಂಜುಮ್, ಭವ್ಯಾ, ಮಹೇಶ್ವರಿ ಹಾಗೂ ಅಸ್ರಾ ನೌಸೀನ್ ಅವರು ಮಾನವ ಸಂಪನ್ಮೂಲ ಮತ್ತು ಪ್ರತಿಭಾ ನೇಮಕಾತಿ ವಿಭಾಗದ ಹುದ್ದೆಗಳನ್ನು ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.

ವಿದ್ಯಾರ್ಥಿನಿಯರ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಶರಣಬಸವೇಶ್ವರ ಸಂಸ್ಥಾನದ ಒಂಬತ್ತನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪ ಅವರು ಆಶೀರ್ವದಿಸಿ ಶುಭ ಹಾರೈಸಿದ್ದಾರೆ.

Tags

Sharanabasava UniversitystudentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X