Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿಶ್ವವಿದ್ಯಾಲಯದ...

Kalaburagi | ಶರಣಬಸವ ವಿಶ್ವವಿದ್ಯಾಲಯದ ವಿಶೇಷ ಉದ್ಯೋಗ ಮೇಳದಲ್ಲಿ 132 ವಿದ್ಯಾರ್ಥಿಗಳಿಗೆ ಉದ್ಯೋಗ

ವಾರ್ತಾಭಾರತಿವಾರ್ತಾಭಾರತಿ16 July 2026 8:13 PM IST
share
Kalaburagi | ಶರಣಬಸವ ವಿಶ್ವವಿದ್ಯಾಲಯದ ವಿಶೇಷ ಉದ್ಯೋಗ ಮೇಳದಲ್ಲಿ 132 ವಿದ್ಯಾರ್ಥಿಗಳಿಗೆ ಉದ್ಯೋಗ

ಕಲಬುರಗಿ : ಶರಣಬಸವ ವಿಶ್ವವಿದ್ಯಾಲಯ ಆಯೋಜಿಸಿದ್ದ ವಿಶೇಷ ಉದ್ಯೋಗ ಮೇಳದಲ್ಲಿ ವಿವಿಧ ವಿಶ್ವವಿದ್ಯಾಲಯಗಳ 132 ವಿದ್ಯಾರ್ಥಿಗಳು ಪ್ರತಿಷ್ಠಿತ ಸಾಫ್ಟ್‌ವೇರ್ ಹಾಗೂ ಹಾರ್ಡ್‌ವೇರ್ ಕಂಪನಿಗಳಲ್ಲಿ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆಯ್ಕೆಯಾದವರಿಗೆ ವಾರ್ಷಿಕ 3 ಲಕ್ಷ ರೂ. ನಿಂದ 4 ಲಕ್ಷ ರೂ. ವರೆಗೆ ವೇತನ ಪ್ಯಾಕೇಜ್ ಲಭಿಸಿದೆ.

ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕುಲಾಧಿಪತಿಗಳಾದ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರ ಮಾರ್ಗದರ್ಶನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ದೇಶದ 10ಕ್ಕೂ ಹೆಚ್ಚು ಪ್ರಮುಖ ಸಾಫ್ಟ್‌ವೇರ್ ಮತ್ತು ಹಾರ್ಡ್‌ವೇರ್ ಕಂಪನಿಗಳು ಭಾಗವಹಿಸಿದ್ದವು. ಶರಣಬಸವ ವಿಶ್ವವಿದ್ಯಾಲಯ, ರೇವಾ ವಿಶ್ವವಿದ್ಯಾಲಯ ಹಾಗೂ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು.

ಆಯ್ಕೆಯಾದ 132 ವಿದ್ಯಾರ್ಥಿಗಳಲ್ಲಿ 127 ಮಂದಿ ಶರಣಬಸವ ವಿಶ್ವವಿದ್ಯಾಲಯದವರಾಗಿದ್ದು, ಬೀದರದ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಮೂವರು ಹಾಗೂ ರೇವಾ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಉದ್ಯೋಗ ಪಡೆದಿದ್ದಾರೆ. ಶರಣಬಸವ ವಿವಿಯ ಆಯ್ಕೆಯಾದ ವಿದ್ಯಾರ್ಥಿಗಳ ಪೈಕಿ 62 ವಿದ್ಯಾರ್ಥಿನಿಯರು ಹಾಗೂ 65 ವಿದ್ಯಾರ್ಥಿಗಳು ಉದ್ಯೋಗ ಗಳಿಸಿರುವುದು ವಿಶೇಷ.

ಸೀಕ್ ನಿಯೋ-ಎಸ್‌ಡಬ್ಲ್ಯೂ, ಟ್ರೀಜೆಂಟ್ ಹಾಗೂ ಟೆಗಾಸಾಫ್ಟ್ ಸಂಸ್ಥೆಗಳು ವಾರ್ಷಿಕ 4 ಲಕ್ಷ ರೂ. ವೇತನದ ಉದ್ಯೋಗ ನೀಡಿದ್ದರೆ, ಎಂಆರ್‌ಎಫ್ ಟೈರ್ಸ್ 38, ಟಿವಿಎಸ್-ಉಪಾಸನೆ 16 ಹಾಗೂ ಕ್ಯಾಡ್‌ಮ್ಯಾಕ್ಸ್ 13 ವಿದ್ಯಾರ್ಥಿಗಳನ್ನು ವಾರ್ಷಿಕ 3 ಲಕ್ಷ ರೂ. ವೇತನದೊಂದಿಗೆ ನೇಮಕ ಮಾಡಿಕೊಂಡಿವೆ. ಜೇನಿತ್ರಾ ಸಂಸ್ಥೆ 45 ವಿದ್ಯಾರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ಹ್ಯಾಪಿ ಮೈಂಡ್ ಎಐ ಸಂಸ್ಥೆ 16 ವಿದ್ಯಾರ್ಥಿಗಳಿಗೆ ವಾರ್ಷಿಕ 2 ಲಕ್ಷ ರೂ. ವೇತನದ ಉದ್ಯೋಗ ನೀಡಿದೆ.

ಈ ಸಾಧನೆಗೆ ಕಾರಣರಾದ ಬೋಧಕ ವೃಂದ ಹಾಗೂ ಅಧಿಕಾರಿಗಳನ್ನು ಕುಲಾಧಿಪತಿಗಳಾದ ಡಾ. ದಾಕ್ಷಾಯಿಣಿ ಅವ್ವಾಜಿ, ಕಾರ್ಯದರ್ಶಿ ಬಸವರಾಜ ದೇಶಮುಖ, ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಸೇರಿದಂತೆ ಆಡಳಿತ ಮಂಡಳಿ ಅಭಿನಂದಿಸಿದ್ದು, ವಿದ್ಯಾರ್ಥಿಗಳ ಸಾಧನೆ ವಿಶ್ವವಿದ್ಯಾಲಯದ ಉದ್ಯೋಗಮುಖಿ ಶಿಕ್ಷಣದ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X