Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಅಕ್ರಮ ಮದ್ಯ ಸಾಗಣೆ: 16...

ಕಲಬುರಗಿ| ಅಕ್ರಮ ಮದ್ಯ ಸಾಗಣೆ: 16 ಬಾಕ್ಸ್ ಮದ್ಯ ಜಪ್ತಿ; ಇಬ್ಬರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ31 Oct 2026 9:35 PM IST
share
ಕಲಬುರಗಿ| ಅಕ್ರಮ ಮದ್ಯ ಸಾಗಣೆ: 16 ಬಾಕ್ಸ್ ಮದ್ಯ ಜಪ್ತಿ; ಇಬ್ಬರು ಪೊಲೀಸ್‌ ವಶಕ್ಕೆ

ಕಲಬುರಗಿ; ಯಡ್ರಾಮಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಸಾಗಣೆ ಹಾಗೂ ಮಾರಾಟ ಜಾಲ ಸಕ್ರಿಯವಾಗಿರುವ ಆರೋಪದ ನಡುವೆ, ಶನಿವಾರ ಮಾಗಣಗೇರಿ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ದಿಢೀರ್ ಕಾರ್ಯಾಚರಣೆ ನಡೆಸಿ 16 ಬಾಕ್ಸ್ ಮದ್ಯ ಸಹಿತ ವಾಹನವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ನಾಗರಹಳ್ಳಿಯ ವಿಕೆಜಿ ವೈನ್ ಶಾಪ್‌ನಿಂದ ಮಾಗಣಗೇರಿ ಗ್ರಾಮದ ದಿನಸಿ ಅಂಗಡಿಗೆ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ವಾಹನವನ್ನು ತಡೆದಿದ್ದಾರೆ. ಕೆಎ-32 ಎಸಿ 3898 ನೋಂದಣಿ ಸಂಖ್ಯೆಯ ವಾಹನದಲ್ಲಿ ಮದ್ಯದ ಪೆಟ್ಟಿಗೆಗಳನ್ನು ಇಳಿಸುತ್ತಿದ್ದಾಗ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿದ್ದ ವಾಹನ ಚಾಲಕ ಮರೆಪ್ಪ ಹಾಗೂ ವೈನ್ ಶಾಪ್ ಸಿಬ್ಬಂದಿ ಮಹಬೂಬ್ ಅವರನ್ನು ತಡೆದು ಪೊಲೀಸರು ವಶಕ್ಕೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಯಡ್ರಾಮಿ ಪೊಲೀಸರು ವಾಹನ ಸಹಿತ ವಿವಿಧ ಬ್ರಾಂಡ್‌ಗಳ ಒಟ್ಟು 16 ಬಾಕ್ಸ್ ಮದ್ಯವನ್ನು ಜಪ್ತಿ ಮಾಡಿದ್ದಾರೆ. ಜಪ್ತಿಯಾದ ಮದ್ಯದಲ್ಲಿ ಒರಿಜಿನಲ್ ಚಾಯ್ಸ್, ಕಿಂಗ್‌ಫಿಷರ್ ಬಿಯರ್, ಬಿಪಿ, ಎಂಸಿ ಹಾಗೂ ಐಬಿ ಬ್ರಾಂಡ್‌ಗಳ ಮದ್ಯ ಸೇರಿದೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಗರಹಳ್ಳಿಯಿಂದ ಮಾಗಣಗೇರಿ, ಐನಾಪುರ, ಬೀರಾಳ, ಕಾಚಾಪುರ, ದುಮ್ಮದ್ರಿ, ವಡಗೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಜಾಲದ ಮೂಲ ಪತ್ತೆಹಚ್ಚಿ ಅಕ್ರಮಕ್ಕೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.


Tags

KalaburagiIllegalLiquor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X