Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜೂ.27-28ರಂದು...

Kalaburagi | ಜೂ.27-28ರಂದು ಮಹಾದೇವಿಯಕ್ಕಗಳ 16ನೇ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ25 Jun 2026 7:33 PM IST
share
Kalaburagi | ಜೂ.27-28ರಂದು ಮಹಾದೇವಿಯಕ್ಕಗಳ 16ನೇ ಸಮ್ಮೇಳನ

ಕಲಬುರಗಿ: ಬಸವ ಸಮಿತಿಯ ಅಕ್ಕನ ಬಳಗದ ವತಿಯಿಂದ ಕಳೆದ 16 ವರ್ಷಗಳಿಂದ ನಿರಂತರವಾಗಿ ಆಯೋಜಿಸಲಾಗುತ್ತಿರುವ ಮಹಾದೇವಿಯಕ್ಕಗಳ ಸಮ್ಮೇಳನದ 16ನೇ ಆವೃತ್ತಿಯು ಜೂನ್ 27 ಮತ್ತು 28ರಂದು ನಗರದ ಜಯನಗರದ ಅನುಭವ ಮಂಟಪದಲ್ಲಿ ನಡೆಯಲಿದೆ ಎಂದು ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಹಾಗೂ ಸಂಚಾಲಕಿ ಡಾ. ಜಯಶ್ರೀ ದಂಡೆ ತಿಳಿಸಿದರು.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕಿ ಹಾಗೂ ನಿವೃತ್ತ ಪ್ರಾಧ್ಯಾಪಕಿ ಡಾ. ನೀಲಮ್ಮ ಕತ್ನಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಸಮ್ಮೇಳನದ ಅಂಗವಾಗಿ ಪ್ರತಿಷ್ಠಿತ ಬಿ.ಡಿ. ಜತ್ತಿ ವೈರಾಗ್ಯನಿಧಿ ಅಕ್ಕ ಪ್ರಶಸ್ತಿ–2026 ಅನ್ನು ಹಿರಿಯ ಲೇಖಕಿ ಪ್ರೊ. ಗಂಗಮ್ಮ ಸತ್ಯಂಪೇಟೆ ಅವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ 35ರಿಂದ 50 ವರ್ಷಗಳ ಕಾಲ ಶಿಕ್ಷಕಿಯರಾಗಿ ಹಾಗೂ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಶಾರದಾ ರಾಂಪೂರ, ಶಶಿಕಲಾ ಸಾಲೋಕ್ಯ, ಶಾಂತಾ ಪಾಟೀಲ, ಉಮಾ ಪಾಟೀಲ ಹಾಗೂ ನಂದಾ ಪಾಟೀಲ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಸಮ್ಮೇಳನದ ವಿಶೇಷ ಆಕರ್ಷಣೆಯಾಗಿ 200ಕ್ಕೂ ಹೆಚ್ಚು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಅನುಭವ, ಚಿಂತನೆ ಹಾಗೂ ಪ್ರತಿಭೆಯನ್ನು ಅಭಿವ್ಯಕ್ತಪಡಿಸಲಿದ್ದಾರೆ.

ಜೂನ್ 27ರಂದು ಬೆಳಿಗ್ಗೆ ಭಾಲ್ಕಿಯ ಡಾ. ಗೀತಾ ಖಂಡ್ರೆ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಐದು ಸಾಹಿತ್ಯಿಕ ಗೋಷ್ಠಿಗಳು, ವಿಶೇಷ ಉಪನ್ಯಾಸಗಳು ಹಾಗೂ ವಿವಿಧ ವಿಷಯಾಧಾರಿತ ಚರ್ಚಾಸತ್ರಗಳು ಏಳು ವಿಭಾಗಗಳಲ್ಲಿ ನಡೆಯಲಿವೆ.

ಸಮ್ಮೇಳನಕ್ಕೂ ಮುನ್ನ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಸಮ್ಮೇಳನದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅನಸೂಯಾ ನಡಕಟ್ಟಿ, ಪುಷ್ಪಾ ವಾಲಿ, ಮಂಜುಳಾ ಹೊಟ್ಟಿ ಹಾಗೂ ಅನುರಾಧ ಹಡಗಲಿಮಠ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X