Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿಠ್ಠಲ ಹೇರೂರ ಮೂರ್ತಿ...

ಕಲಬುರಗಿ | ವಿಠ್ಠಲ ಹೇರೂರ ಮೂರ್ತಿ ಪ್ರತಿಷ್ಠಾಪನೆಗೆ ಸಹಮತ: ಅ.16ರ ಪ್ರತಿಭಟನೆ ಹಿಂಪಡೆತ

ವಾರ್ತಾಭಾರತಿವಾರ್ತಾಭಾರತಿ11 Oct 2026 7:24 PM IST
share
ಕಲಬುರಗಿ | ವಿಠ್ಠಲ ಹೇರೂರ ಮೂರ್ತಿ ಪ್ರತಿಷ್ಠಾಪನೆಗೆ ಸಹಮತ: ಅ.16ರ ಪ್ರತಿಭಟನೆ ಹಿಂಪಡೆತ

ಕಲಬುರಗಿ: ನಗರದ ಅಫಜಲಪುರ ರಸ್ತೆಯ ಹೈಕೋರ್ಟ್ ವೃತ್ತದ ಸಮೀಪ ದಿವಂಗತ ವಿಠ್ಠಲ ಹೇರೂರ ಅವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ವೃತ್ತ ನಿರ್ಮಾಣಕ್ಕೆ ಕುರುಬ–ಗೊಂಡ ಸಮುದಾಯದ ಮುಖಂಡರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 16ರಂದು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ನಮ್ಮ ನಡೆ–ಕಾರ್ಪೊರೇಷನ್ ಕಡೆ’ ಬೃಹತ್ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಸ್ವಾಭಿಮಾನಿ ವಿಠ್ಠಲ ಹೇರೂರ ಅಭಿಮಾನಿಗಳ ಸಂಘದ ಮುಖಂಡರು ತಿಳಿಸಿದ್ದಾರೆ.

ವಿಠ್ಠಲ ಹೇರೂರ ಅವರ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಎರಡೂ ಸಮುದಾಯಗಳ ನಡುವೆ ಉಂಟಾಗಿದ್ದ ಗೊಂದಲವನ್ನು ನಿವಾರಿಸಿ, ಪರಸ್ಪರ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 5ರಂದು ನಗರದ ಅಭಿಶ್ರೀ ಹೋಟೆಲ್‌ನಲ್ಲಿ ಕುರುಬ–ಗೊಂಡ ಹಾಗೂ ಕೋಲಿ ಸಮಾಜದ ಮುಖಂಡರ ಸಭೆ ನಡೆಸಲಾಯಿತು. ಸುದೀರ್ಘ ಚರ್ಚೆಯ ಬಳಿಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ವೃತ್ತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಮ್ಮತ ಮೂಡಿತು ಎಂದು ಸಂಘದ ಮುಖಂಡರು ತಿಳಿಸಿದ್ದಾರೆ.

ಸಭೆಯಲ್ಲಿ ನಗರದ ಹೈಕೋರ್ಟ್ ವೃತ್ತದ ಸಮೀಪ ವಿಠ್ಠಲ ಹೇರೂರ ಅವರ ಮೂರ್ತಿ ಪ್ರತಿಷ್ಠಾಪಿಸಿ ವೃತ್ತ ನಿರ್ಮಿಸಲು ಸಹಮತ ವ್ಯಕ್ತವಾಯಿತು. ಇದೇ ವೇಳೆ, ನಗರದ ಪ್ರತಿಷ್ಠಿತ ಸ್ಥಳವೊಂದರಲ್ಲಿ ಕುರುಬ ಸಮಾಜ ಗುರುತಿಸುವ ಜಾಗದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ಪ್ರತಿಷ್ಠಾಪಿಸಿ ವೃತ್ತ ನಿರ್ಮಿಸುವ ಕಾರ್ಯಕ್ಕೂ ಎರಡೂ ಸಮುದಾಯಗಳು ಪರಸ್ಪರ ಸಹಕಾರ ನೀಡಲು ನಿರ್ಧರಿಸಲಾಯಿತು.

ಸಭೆಯಲ್ಲಿ ಅಣ್ಯ ಮಾಕೇರಿ, ಲಕ್ಷ್ಮಣ ಜಮಾದಾರ್, ಶರಣಪ್ಪ ತಳವಾರ, ರಮೇಶ್ ನಾಟಿಕರ್, ಅಣ್ಯಗೌಡ ಪಾಟೀಲ್, ಬಸವರಾಜ ಬೂದಿಹಾಳ, ಶಾಂತಪ್ಪ ಕೂಡಿದ, ಬಸವರಾಜ ಹರವಾಳ, ಪಿಡ್ಡಪ್ಪ ಜಾಳಗರ್, ಸಂತೋಷ ತಳವಾರ, ರಾಮಲಿಂಗ ನಾಟಿಕರ್, ಗುರುನಾಥ ಹೇರೂರ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.

Tags

Kalaburagiprotestwithdrawn
share
ವಾರ್ತಾಭಾರತಿ
ವಾರ್ತಾಭಾರತಿ
Next Story
X