ಕಲಬುರಗಿ | 30 ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು ಬೆಂಕಿಗಾಹುತಿ

ಕಲಬುರಗಿ : ಸುಮಾರು 30 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗಾಹುತಿಯಾದ ಘಟನೆ ಫರತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಹೇರೂರು ಗ್ರಾಮದಲ್ಲಿ ನಡೆದಿದೆ.
ಹೇರೂರು ಗ್ರಾಮದ ಬಸವರಾಜ ಸಿದ್ದಣ್ಣನವರ ಎಂಬುವರಿಗೆ ಸೇರಿದ ಜಮೀನಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನು, ಸ್ಥಳಕ್ಕೆ ದೌಡಾಯಿಸಿದ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಷ್ಟಪಟ್ಟು ಬೆಳೆದ ಬೆಳೆ ಸುಟ್ಟು ಕರಕಲಾಗಿದ್ದು, ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Next Story





