ಕಲಬುರಗಿ | ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಪಡೆಯಲು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕಲಬುರಗಿ : 2025-26ನೇ ಸಾಲಿಗೆ ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು (ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಲು) ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. 2024-25ನೇ ಸಾಲಿನ 5ನೇ ತರಗತಿಯಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಅಂಕಗಳನ್ನು ಪಡೆದಿರಬೇಕು. ಸರ್ಕಾರಿ ನೌಕರರ ಮಕ್ಕಳು ಈ ಯೋಜನೆಗೆ ಅರ್ಹರಿರುವುದಿಲ್ಲ. ವಿಶೇಷ ವರ್ಗಗಳಿಗೆ ಸೇರಿರುವ ಮಕ್ಕಳು ಕಡ್ಡಾಯವಾಗಿ ಸಂಬಂಧಿಸಿದ ಪ್ರಾಧಿಕಾರದಿಂದ/ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದು (ಕೋವಿಡ್-19 ನಿಂದ ತಂದೆ/ತಾಯಿಯನ್ನು ಕಳೆದುಕೊಂಡ ಮಕ್ಕಳು, ಜೀತ ವಿಮುಕ್ತ ಮಕ್ಕಳು, ಪೌರಕಾರ್ಮಿಕರ ಮಕ್ಕಳು, ಸಫಾಯಿ ಕರ್ಮಚಾರಿ ಮಕ್ಕಳು, ಸ್ಮಶಾನ ಭೂಮಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಸಾಲದ ಬಾದೆಯಿಂದ ಆತ್ಮಹತ್ಯೆಯಿಂದ ಮೃತರಾದ ರೈತರ ಮಕ್ಕಳು ಇತ್ಯಾದಿ ವಿಶೇಷ ವರ್ಗಗಳಾಗಿರುತ್ತವೆ) ಸಲ್ಲಿಸಬೇಕು.
ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರ ಕಚೇರಿಯಿಂದ ಅಥವಾ ಸಂಬಂಧಪಟ್ಟ ಆಯಾ ತಾಲೂಕಿನಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಗ್ರೇಡ್-1/2, ಕಚೇರಿಯಿಂದ ಪಡೆದು ಭರ್ತಿ ಅವಶ್ಯಕ ದಾಖಲೆಗಳೊಂದಿಗೆ 2025ರ ಮೇ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





