Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಭಾರೀ ಮಳೆ, ಪ್ರವಾಹದಿಂದ...

ಕಲಬುರಗಿ | ಭಾರೀ ಮಳೆ, ಪ್ರವಾಹದಿಂದ ಮೂಲಸೌಕರ್ಯಕ್ಕೆ ಹಾನಿ : ಸಮಗ್ರ ವರದಿ ಸಲ್ಲಿಸುವಂತೆ ಡಿಸಿ ಫೌಝಿಯಾ ತರನ್ನುಮ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Oct 2025 10:32 PM IST
share
ಕಲಬುರಗಿ | ಭಾರೀ ಮಳೆ, ಪ್ರವಾಹದಿಂದ ಮೂಲಸೌಕರ್ಯಕ್ಕೆ ಹಾನಿ : ಸಮಗ್ರ ವರದಿ ಸಲ್ಲಿಸುವಂತೆ ಡಿಸಿ ಫೌಝಿಯಾ ತರನ್ನುಮ್ ಸೂಚನೆ

ಕಲಬುರಗಿ : ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿನ ಭಾರಿ ಮಳೆ ಮತ್ತು ಭೀಮಾ ಪ್ರವಾಹದಿಂದ ಜಿಲ್ಲೆಯಾದ್ಯಂತ ಸಾಕಷ್ಟು ಮೂಲಸೌಕರ್ಯ ಹಾನಿಯಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿರುವುದರಿಂದ ಇಲಾಖಾವಾರು ಕೂಡಲೇ ಜಿಲ್ಲಾಡಳಿತಕ್ಕೆ ಸಮಗ್ರ ವರದಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಸೂಚನೆ ನೀಡಿದರು.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ಭೀಮಾ ಪ್ರವಾಹದಿಂದ ಹಾಗೂ ಭಾರಿ ಮಳೆಯಿಂದ ಹಾನಿಯಾದ ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ-ಅಂಗನವಾಡಿ, ಮನೆ, ಬೆಳೆ ಹಾನಿ ಇತ್ಯಾದಿ ಕುರಿತು ಜಂಟಿ ಸಮೀಕ್ಷೆ ವರದಿಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬುಧವಾರವೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ, ತೋಟಗಾರಿಕೆ, ರೇಷ್ಮೆ‌ ಬೆಳೆಗಳ ಹಾನಿ ಕುರಿತು ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು. ಮನೆ ಹಾನಿಯಾಗಿರುವ ಕುರಿತು ರಾಜೀವಗಾಂಧಿ ತಂತ್ರಾಂಶದಲ್ಲಿ ದಾಖಲಿಸಬೇಕು. ರಸ್ತೆ, ಸೇತುವೆ, ಕೆರೆ, ವಿದ್ಯುತ್ ಪರಿವರ್ತಕಗಳು, ಕಂಬಗಳು, ಪೈಪ್ ಲೈನ್ ಹಾನಿ ಕುರಿತು ಆಯಾ ಇಲಾಖೆಯ ಅಧಿಕಾರಿಗಳು ಜಿಯೋ ಟ್ಯಾಗ್ ನೊಂದಿಗಿನ ಭಾವಚಿತ್ರದೊಂದಿಗೆ ವರದಿ ಸಲ್ಲಿಸಬೇಕು ಎಂದರು.

ಇದೀಗ ಪ್ರವಾಹ ಇಲಿಮುಖವಾಗಿದ್ದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಆರೋಗ್ಯ ಇಲಾಖೆಯಿಂದ ಗ್ರಾಮಗಳಲ್ಲಿ ಬ್ಲೀಚಿಂಗ್ ಪೌಡರ್‌ ಸಿಂಪಡಣೆ ಮಾಡಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಲುಷಿತ‌ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಿ ಶುದ್ದ ಕುಡಿಯುವ ನೀರು ಪೂರೈಸಬೇಕು. ವಿದ್ಯುತ್ ಕಂಬ, ಟ್ರಾನ್ಸ್ ಫಾರ್ಮರ್ ಶಿಥಿಲಾವಸ್ಥೆಯಲ್ಲಿದಲ್ಲಿ ಕೂಡಲೇ ಬದಲಾಯಿಸಬೇಕು. ಮಳೆಯಿಂದ ಸೋರಿಕೆಯಾಗುವ ಶಾಲಾ, ಅಂಗನವಾಡಿ ಕಟ್ಟಡ ಗುರುತಿಸಿ ದುರಸ್ತಿ ಕೈಗೊಳ್ಳಬೇಕು ಎಂದು ಡಿಸಿ ಬಿ.ಫೌಝಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಲೋಕೋಪಯೋಗಿ ಇಲಾಖೆಯ ಇ.ಇ. ಸುಭಾಷ ಬಿರಾದಾರ, ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X