ಕಲಬುರಗಿ | ಕೋರವಾರ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ
ಕಲಬುರಗಿ : ಕೋರವಾರ (ಕಲಬುರಗಿ-02) ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ಹಾಗೂ 11ನೇ ತರಗತಿಗಳ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಅ.21 ರವರೆಗೆ ವಿಸ್ತರಿಸಲಾಗಿದೆ ಎಂದು ಕೋರವಾರ (ಕಲಬುರಗಿ-02) ಜವಾಹರ ನವೋದಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಕೋರವಾರ ನವೋದಯ ವಿದ್ಯಾಲಯಕ್ಕೆ ಒಳಪಡುವ ತಾಲೂಕುಗಳಾದ ಚಿಂಚೋಳಿ, ಚಿತ್ತಾಪೂರ ಹಾಗೂ ಸೇಡಂ ಶೈಕ್ಷಣಿಕ ವರ್ಷ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 8ನೇ ತರಗತಿಯಲ್ಲಿ ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
9ನೇ ತರಗತಿಯ ಪ್ರವೇಶ ಪರೀಕ್ಷೆಗೆ https://cbseitms.nic.in/2025/nvsix_9 ಲಿಂಕ್ ಮೂಲಕ ಹಾಗೂ 11ನೇ ತರಗತಿಗೆ ಪ್ರವೇಶ ಪರೀಕ್ಷೆಗೆ https://cbseitms.nic.in/2025/nvsxi_11 ಲಿಂಕ್ ಮೂಲಕ 2025ರ ಅ.21 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಅಕ್ಟೋಬರ್ 7 ರಂದು ನಿಗದಿಪಡಿಸಲಾಗಿತ್ತು.
ಈ ಪ್ರವೇಶ ಪರೀಕ್ಷೆಯು ದಿನಾಂಕ: 07-02-2026 ರಂದು ಜರುಗಲಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕೋರವಾರ ಜವಾಹರ ನವೋದಯ ವಿದ್ಯಾಲಯದ ಮೊಬೈಲ್ ಸಂಖ್ಯೆ 8951741851, 8618468593, 9648963192 ಹಾಗೂ 8495866274 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.







