Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಕೃಷಿ ಯಂತ್ರೋಪಕರಣಗಳ...

ಕಲಬುರಗಿ| ಕೃಷಿ ಯಂತ್ರೋಪಕರಣಗಳ ಲೋಕಾರ್ಪಣೆ, ವಿಕಲಚೇತನರಿಗೆ ಯಂತ್ರಗಳ ವಿತರಣೆ

ವಾರ್ತಾಭಾರತಿವಾರ್ತಾಭಾರತಿ11 Jan 2026 5:33 PM IST
share
ಕಲಬುರಗಿ| ಕೃಷಿ ಯಂತ್ರೋಪಕರಣಗಳ ಲೋಕಾರ್ಪಣೆ, ವಿಕಲಚೇತನರಿಗೆ ಯಂತ್ರಗಳ ವಿತರಣೆ

ಕಲಬುರಗಿ: ಡಾ.ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಇತ್ತೀಚೆಗೆ ಉನ್ನತಿಕರಿಸಿದ ಕೃಷಿ ಯಂತ್ರೋಪಕರಣಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದರು.‌

ಈ ವೇಳೆ ಮಾತನಾಡಿದ ಅವರು, ಈ ಮುಂಚೆ ಯಂತ್ರಗಳಿಂದ ರಾಶಿ ಮಾಡಲಾಗಿದ್ದರೂ ಸಮರ್ಪಕವಾಗಿ ಸಂಸ್ಕರಣೆಯಾಗುತ್ತಿರಲಿಲ್ಲ. ಹೀಗಾಗಿ ಸರಿಯಾದ ಬೆಲೆ ಸಿಗುತ್ತಿರಲಿಲ್ಲ. ಆದರೆ ಉನ್ನತೀಕರಿಸಿದ ಯಂತ್ರಗಳಿಂದ ಸಂಪೂರ್ಣ ಕ್ಲಿನಿಂಗ್ , ಗ್ರೇಡಿಂಗ್ ಮತ್ತು ಪ್ಯಾಕಿಂಗ್ ಆಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ಎಫ್.ಪಿ.ಓ ಕೇಂದ್ರದ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿಯಲ್ಲಿ ಕೃಷಿ ಉತ್ಪನ್ನಗಳನ್ನು ಪ್ರಾಥಮಿಕವಾಗಿ ಕ್ಲೀನಿಂಗ್, ಗ್ರೇಡಿಂಗ್ ಹಾಗೂ ಪ್ಯಾಕಿಂಗ್ ಮಾಡಲು ಈಗಾಗಲೆ ಜಿಲ್ಲೆಯಾದ್ಯಂತ 11 ಯಂತ್ರೋಪಕರಣ ಬಾಡಿಗೆ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕೇಂದ್ರದ‌ ಮೂಲಕ ಈ ಎಲ್ಲಾ‌‌ ಯಂತ್ರಗಳನ್ನು ರೈತರು ಬಾಡಿಗೆ ಮೂಲಕ ಪಡೆಯಬಹುದಾಗಿದೆ. ಇದಕ್ಕಾಗಿ ಸರಕಾರ 5.50 ಕೋಟಿ ರೂ. ವ್ಯಯ ಮಾಡಿದೆ.

ಅಫಜಲಪುರ ತಾಲೂಕಿನ ಅಫಜಲಪುರ, ಅತನೂರ, ಕಲಬುರಗಿ ತಾಲೂಕಿನಲ್ಲಿ ಕಲಬುರಗಿ, ಸೇಡಂ ತಾಲೂಕಿನ ಸೇಡಂ ಪಟ್ಟಣ ಹಾಗೂ ಕೋಡ್ಲಾ, ಚಿತ್ತಾಪುರ ತಾಲೂಕಿನ ಚಿತ್ತಾಪುರ ಪಟ್ಟಣ, ಗುಂಡಗುರ್ತಿ, ಅಲ್ಲೂರ ಬಿ, ಡಿಗ್ಗಾಂವ, ಹೆಬ್ಬಾಳ ಹಾಗೂ ರಾವೂರ ಗ್ರಾಮದಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ.

ಇದೇ‌ ಸಂದರ್ಭದಲ್ಲಿ ಕೃಷಿಯಲ್ಲಿ ಸ್ವಯಂ ಉದ್ಯೋಗದ‌ ಮೂಲಕ ಆದಾಯ ಗಳಿಸಲು 2024-25ನೇ ಸಾಲಿನ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆ ಅಡಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಅನುದಾನದಡಿಯಲ್ಲಿ ತಲಾ‌ 5 ಲಕ್ಷ‌ ರೂ. ವೆಚ್ಚದಲ್ಲಿ ಕಲಬುರಗಿ ತಾಲೂಕಿನ ಕೆರಿಭೋಸಗಾ ಗ್ರಾಮದ ವಿಠಲ್ ಭಿಮಶಾ ಪೂಜಾರಿ, ಭೀಮಳ್ಳಿ ಗ್ರಾಮದ ಸಂತೋಷ ಗಣಪತಿ ಎಂಬ ವಿಕಲಚೇತನರಿಗೆ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಲಶ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್‌, ಕಲಬುರಗಿ ಉತ್ತರ ಶಾಸಕರಾದ ಕನೀಜ್ ಫಾತಿಮಾ, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಎಂ.ವೈ.ಪಾಟೀಲ್‌, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ‌ ಕಮಕನೂರು, ಜಗದೇವ ಗುತ್ತೇದಾರ್, ಕುಡಾ ಅಧ್ಯಕ್ಷ ಮಜಹರ್ ಆಲಂ‌ ಖಾನ್, ಜೆಸ್ಕಾಂ‌ ಅಧ್ಯಕ್ಷ ಪ್ರವೀಣ್ ಹರವಾಳ್, ಮೇಯರ್ ವರ್ಷಾ ರಾಜೀವ ಜಾನೆ, ಜಿಲ್ಲಾ ಗ್ಯಾರಂಟಿ‌ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X