ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಶಾಲೆಯ ಮೇಲ್ಛಾವಣಿ ಕುಸಿತ

ಕಲಬುರಗಿ : ಆಳಂದ ತಾಲೂಕಿನ ಸಂಗೋಳಗಿ (ಸಿ) ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಪದರ ರವಿವಾರ ಬೆಳಗ್ಗೆ ಏಕಾಏಕಿ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಶಾಲೆಗೆ ರಜೆ ಇದ್ದ ಕಾರಣ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಇರಲಿಲ್ಲ. ಹೀಗಾಗಿ ಅನಾಹುತ ತಪ್ಪಿದಂತಾಗಿದೆ.
ಇತ್ತೀಚೆಗೆ ಕಲಬುರಗಿ ನಗರದಲ್ಲಿನ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ನಡೆದ ದುರಂತದ ಬಳಿಕ ಜಿಲ್ಲೆಯ ಶಾಲಾ-ಕಾಲೇಜು ಕಟ್ಟಡಗಳ ಸ್ಥಿತಿಗತಿ ಕುರಿತು ಪ್ರಶ್ನೆಗಳು ಉದ್ಭವಿಸಿದ್ದವು. ಇದೀಗ ಮತ್ತೊಂದು ಶಾಲೆಯಲ್ಲಿ ಮೇಲ್ಚಾವಣಿ ಕುಸಿದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿನ ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳನ್ನು ತಕ್ಷಣ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮತ್ತು ಪೋಷಕರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
Next Story




