Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನಗರಕ್ಕೆ ಸರಬರಾಜಾಗುವ...

ಕಲಬುರಗಿ | ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಸ್ಥಿತಿಗತಿ ಅವಲೋಕನ ಮಾಡಿದ ಶಾಸಕ‌ ಅಲ್ಲಮಪ್ರಭು ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ27 Jun 2026 6:18 PM IST
share
ಕಲಬುರಗಿ | ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಸ್ಥಿತಿಗತಿ ಅವಲೋಕನ ಮಾಡಿದ ಶಾಸಕ‌ ಅಲ್ಲಮಪ್ರಭು ಪಾಟೀಲ್‌

ಕಲಬುರಗಿ: ಮುಂಗಾರು ಮಳೆ ಕೈಕೊಟ್ಟ ಕಾರಣ ನಗರದಲ್ಲಿನ ಕುಡಿಯುವ ನೀರಿಗೆ ತುಂಬಾ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ಜಾನೆ, ಉಪ ಮೇಯರ್ ತೃಪ್ತಿ ಲಾಖೆ ಹಾಗೂ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಸರಡಗಿ ಬ್ರಿಡ್ಜ್ ಕಂ ಬ್ಯಾರೇಜಿಗೆ ಭೇಟಿ ನೀಡಿ ಪ್ರಸ್ತುತ ಲಭ್ಯ ಇರುವ ನೀರಿನ ಪ್ರಮಾಣದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ‌ ಶಾಸಕ‌ ಅಲ್ಲಮಪ್ರಭು ಪಾಟೀಲ ಅವರು, ಈ ಬಾರಿ ಮಳೆ ಕೈಕೊಟ್ಟ ಕಾರಣ ನಗರದಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಉಂಟಾಗಿದೆ. ಹೀಗಾಗಿ ಈಗಾಗಲೆ ನಾರಾಯಣಪುರ ಜಲಾಶಯದಿಂದ 0.5 ಟಿ.ಎಂ.ಸಿ. ನೀರು ಹರಿಬಿಡಲಾಗಿದ್ದು, ರವಿವಾರ ಅಥವಾ ಸೋಮವಾರ ಸರಡಗಿ ಬ್ಯಾರೇಜಿಗೆ ತಲುಪಲಿದೆ ಎಂದರು.

ಪ್ರತಿ ವರ್ಷ ಬೇಸಿಗೆಯಲ್ಲಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದ್ದು, ನಾರಾಯಣಪುರ ಜಲಾಶಯದಿಂದ‌ ಶಹಾಪುರ, ನಗನೂರ ಮಾರ್ಗವಾಗಿ ಹರಿಬಿಡುವ ನೀರು ನಮ್ಮಲ್ಲಿ ಬರುವಷ್ಟಿಗೆ ಹೆಚ್ಚಿನ ನೀರು ಭೂಮಿ ಪಾಲಾಗುತ್ತಿದೆ. ಇದರ ಬದಲಾಗಿ ನಾರಾಯಣಪುರದಿಂದ ನೇರವಾಗಿ ಸರಡಗಿಗೆ ನೀರು ಹರಿಸಿದಲ್ಲಿ ಹೆಚ್ಚಿನ ನೀರು ನಮಗೆ ಸಿಗಲಿದೆ. ಇದಕ್ಕಾಗಿ 1,850 ಕೋಟಿ ರೂ. ಮೊತ್ತದ ಡಿ‌.ಪಿ.ಆರ್ ಸಿದ್ದಪಡಿಸಿದ್ದು, ಅಂದುಕೊಂಡಂತೆ ಯೋಜನೆ ಅನುಷ್ಟಾನಕ್ಕೆ ಬಂದಲ್ಲಿ ಮುಂದಿನ‌ ದಿನದಲ್ಲಿ ನಗರಕ್ಕೆ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.

ಇನ್ನು ಸರಡಗಿ ಬ್ಯಾರೇಜಿನಲ್ಲಿ 41 ವರ್ಷ ಹಳೆಯದ 900ಕ್ಕೂ ಹೆಚ್ಚಿನ ಸ್ಟಾಪ್ ಲಾಗ್ ಗೇಟ್ ನಲ್ಲಿ 600 ಹೊಸದಾಗಿ ಅಳವಡಿಸಿದೆ. 150 ದುರಸ್ತಿ ಮಾಡಿದ್ದು, ಇನ್ನುಳಿದ ಗೇಟ್ ಸಹ ಹೊಸದಾಗಿ ಅಳವಡಿಸಿ ಬೇಸಿಗೆಯಲ್ಲಿ ನೀರು ಪೋಲಾಗದಂತೆ ಎಚ್ಚರ ವಹಿಸಲಾಗುತ್ತಿದೆ. ಇದಲ್ಲದೆ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ಹೆಚ್ಚಿನ‌ ಸಂಗ್ರಹಣೆ ಸಾಮರ್ಥ್ಯ ಹೆಚ್ಚಿಸಲು ಬ್ಯಾರೇಜ್ ನಲ್ಲಿ ಹೂಳೆತ್ತುವ ಕಾಮಗಾರಿ ಸಹ ನಡೆಯುತ್ತಿದ್ದು, ಇವೆಲ್ಲ ಕೆಲಸ ಕಾರ್ಯಗಳಿಗೆ 5 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಇದರಿಂದ ಮುಂದಿನ ದಿನದಲ್ಲಿ ಶುದ್ಧ ಕುಡಿಯುವ ನೀರು ನಗರದ ಜನರಿಗೆ ಲಭ್ಯವಾಗಲಿದೆ ಎಂದರು.

ಇನ್ನು ಕಲಬುರಗಿ ಮಹಾನಗರದಲ್ಲಿ ಎಲ್ & ಟಿ ಸಂಸ್ಥೆಯಿಂದ 24 ಗಂಟೆ‌ ನಿರಂತರ ಕುಡಿಯುವ ನೀರು ಪೂರೈಕೆ ಸ್ಕೀಮ್ 'ಎ' ಯೋಜನೆಯಡಿ 700 ಕಿ.ಮೀ ಪೈಪ್ ಲೈನ್ ಕಾಮಗಾರಿ ನಡೆದಿದ್ದು, 'ಬಿ' ಸ್ಕೀಮ್ ನಲ್ಲಿ ಇನ್ನು 500 ಕಿ.ಮೀ ವಿಸ್ತರಣೆ ಮಾಡಲಾಗುತ್ತಿದೆ. ಇದರಿಂದ ನಗರದಾದ್ಯಂತ ನೀರು ಸರಬರಾಜು ಜಾಲ ವಿಸ್ತರಣೆಯಾಗಲಿದೆ. ಪ್ರಸ್ತುತ ಕಲಬುರಗಿ ದಕ್ಷಿಣ ಮತ್ತು ಉತ್ತರ ಕ್ಷೇತ್ರದಲ್ಲಿ ಎಲ್ಲಿಯೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದಲ್ಲಿ ಕೂಡಲೆ ನೀರು ಪೂರೈಕೆಗೆ

ಸುಮಾರು‌ 200 ಟ್ಯಾಂಕರ್ ಪಡೆಯಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲಾ‌ ಮುನ್ನೆಚ್ಚರಿಕೆ ಕ್ರಮಗಳನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದರು.

8 ದಿನಕ್ಕೆ ನೀರು ಲಭ್ಯ:

ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಮಾತನಾಡಿ ಪ್ರಸ್ತುತ ಕಲಬುರಗಿ ನಗರಕ್ಕೆ ಮುಂದಿನ 8-10 ದಿನಗಳ ಕಾಲ ನೀರು ಪೂರೈಕೆಗೆ ನೀರಿನ ಪ್ರಮಾಣ ಲಭ್ಯ ಇದೆ. ನಾರಾಯಣಪುರ ಜಲಾಶಯದಿಂದ ನೀರು ಹರಿಬಿಟ್ಟಿದ್ದು, ಒಂದೆರಡು ದಿನ‌ ಬ್ಯಾರೇಜಿಗೆ ನೀರು ಬಂದು ಸೇರಲಿದ್ದು, ಅಲ್ಲಿಗೆ ಸದ್ಯದ ಮಟ್ಟಿಗೆ ಕುಡಿಯುವ ನೀರು ಪೂರೈಕೆಗೆ ಯಾವುದೇ ಸಮಸ್ಯೆ ಇಲ್ಲ. ಕಳೆದ ವರ್ಷ ಅತಿವೃಷ್ಠಿ, ಈ ವರ್ಷ ಒಂದು ತಿಂಗಳು ಕಳೆದರು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕುಡಿಯುವ ನೀರು ಪೂರೈಕೆ ನಮಗೆ ಸವಾಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಒಂದೆರಡು‌ ದಿನದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ವರುಣನ ಆಗಮನಕ್ಕೆ ಕಾತುರರಾಗಿದ್ದೇವೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಕಲಬುರಗಿ ಮಹಾನಗರದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಚರಂಡಿ ನೀರು ಸೇರದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ‌ ಸೂಚನೆ ನೀಡಲಾಗಿದೆ. ರಸ್ತೆ, ಬಿ.ಎಸ್.ಎನ್.ಎಲ್., ವಿದ್ಯುತ್ ಕಾಮಗಾರಿ ಕೈಗೊಳ್ಳುವವರಿಗೂ ರಸ್ತೆ ನಿರ್ಮಾಣ ಮಾಡುವ ಮುನ್ನವೆ ಇವೆಲ್ಲ ಕೆಲಸಗಳನ್ನು, ದುರಸ್ತಿ ಕಾರ್ಯಗಳನ್ನು ಮಾಡಿಕೊಳ್ಳುವಂತೆ ಅನಗತ್ಯ ರಸ್ತೆ ತೋಡುವುದನ್ನು ತಡೆಯಲು ಸೂಚಿಸಲಾಗಿದೆ. ಎನ್.ಎಂ.ಪಿ.ಸಿ, 15ನೇ ಹಣಕಾಸು ಯೋಜನೆಯಡಿ ಬೇಡಿಕೆ ಇದ್ದ ಕಡೆ 60-70 ಬೋರವೆಲ್ ಕೊರೆಯಲು ಸಹ ಯೋಜನೆ ರೂಪಿಸಿದೆ ಎಂದು ಅವಿನಾಶ ಶಿಂಧೆ ತಿಳಿಸಿದರು.

ಕೆ.ಯು.ಐ.ಡಿ.ಎಫ್.ಸಿ ಅಧೀಕ್ಷಕ ಅಭಿಯಂತ ಆರ್.ಪಿ.ಜಾಧವ, ಸಣ್ಣ ಮತ್ತು ಮಧ್ಯಮ‌ ನೀರಾವರಿ ಯೋಜನೆ ಇಲಾಖೆಯ ಎ.ಇ.ಇ. ರಾಜಶೇಖರ‌ ಸಜ್ಜನಶೆಟ್ಟಿ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.


Tags

KalaburagiMLAAllam Prabhu Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X