Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದಲಿತ, ದೃಷ್ಟಿವಿಕಲಚೇತನ...

Kalaburagi | ದಲಿತ, ದೃಷ್ಟಿವಿಕಲಚೇತನ ಅಧಿಕಾರಿಗೆ ಅನ್ಯಾಯ: ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಭೀಮ್ ಆರ್ಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 July 2026 8:29 PM IST
share
Kalaburagi | ದಲಿತ, ದೃಷ್ಟಿವಿಕಲಚೇತನ ಅಧಿಕಾರಿಗೆ ಅನ್ಯಾಯ: ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಭೀಮ್ ಆರ್ಮಿ ಆಗ್ರಹ

ಕಲಬುರಗಿ: ನಿಷ್ಠಾವಂತ, ದಲಿತ ಹಾಗೂ ದೃಷ್ಟಿವಿಕಲಚೇತನ ಅಧಿಕಾರಿಯಾಗಿರುವ ಶ್ರೀನಿವಾಸ ಬಾಳುವಾಲೆ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ ವ್ಯವಸ್ಥಿತವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಭೀಮ್ ಆರ್ಮಿ ಜಿಲ್ಲಾ ಸಮಿತಿ, ಈ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿಷ್ಪಕ್ಷಪಾತ ಇಲಾಖಾ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಸೂರ್ಯಕಾಂತ ಜಿಡಗಾ ಅವರ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್, ಮಾಜಿ ಸಿಡಿಪಿಒಗಳಾದ ಶಿವಶರಣಪ್ಪ ಬುಶೆಟ್ಟಿ ಹಾಗೂ ಭೀಮರಾಯ ಕಣ್ಣೂರ ಅವರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಶ್ರೀನಿವಾಸ ಬಾಳುವಾಲೆ ಅವರು ಕಲಬುರಗಿ ನಗರ ಸಿಡಿಪಿಒ ಹುದ್ದೆ ವಹಿಸಿಕೊಳ್ಳುವ ಮುನ್ನ ನಡೆದ ನೇಮಕಾತಿ ಪ್ರಕ್ರಿಯೆಗಳಿಗೂ ಅವರ ಹೆಸರನ್ನು ಅನಗತ್ಯವಾಗಿ ಜೋಡಿಸಿ, ಇಲಾಖಾ ಕ್ರಮಕ್ಕೆ ಒಳಪಡಿಸುವ ಉದ್ದೇಶದಿಂದ ಪಿತೂರಿ ನಡೆಸಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಶ್ರೀನಿವಾಸ ಬಾಳುವಾಲೆ ಅವರ ವಿರುದ್ಧದ ಎಲ್ಲಾ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಅವರಿಗೆ ನ್ಯಾಯ ಒದಗಿಸಬೇಕು. ಅಧಿಕಾರ ದುರ್ಬಳಕೆ, ದಾಖಲೆಗಳ ಅಕ್ರಮ ನಿರ್ವಹಣೆ ಹಾಗೂ ಸುಳ್ಳು ದೂರುಗಳ ಮೂಲಕ ಕಿರುಕುಳ ನೀಡಿದ ಆರೋಪದಡಿ ರಾಜಕುಮಾರ ರಾಠೋಡ್, ಶಿವಶರಣಪ್ಪ ಬುಶೆಟ್ಟಿ ಹಾಗೂ ಭೀಮರಾಯ ಕಣ್ಣೂರ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭೀಮ್ ಆರ್ಮಿ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಸೂರ್ಯಕಾಂತ ಜಿಡಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಂಗರಗಿ, ಜಿಲ್ಲಾ ಕಾರ್ಯದರ್ಶಿ ಸುಧೀರ ಹೊನ್ನಳ್ಳಿ, ಮುಖಂಡ ರಾಜಕುಮಾರ ಮೋಘಾ ಹಾಗೂ ಅಂಬೇಡ್ಕರ್ ಜನಪರ ವೇದಿಕೆಯ ಉಪಾಧ್ಯಕ್ಷ ಸಿದ್ಧಾರ್ಥ ಎಂ.ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X