Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬೆಳೆ ವಿಮೆ ಹಣ ಬಿಡುಗಡೆಗೆ...

Kalaburagi | ಬೆಳೆ ವಿಮೆ ಹಣ ಬಿಡುಗಡೆಗೆ ಸರಕಾರ ಕ್ರಮ; ನವಕರ್ನಾಟಕ ರೈತ ಸಂಘ ಕೃತಜ್ಞತೆ

ವಾರ್ತಾಭಾರತಿವಾರ್ತಾಭಾರತಿ10 July 2026 8:14 PM IST
share
Kalaburagi | ಬೆಳೆ ವಿಮೆ ಹಣ ಬಿಡುಗಡೆಗೆ ಸರಕಾರ ಕ್ರಮ; ನವಕರ್ನಾಟಕ ರೈತ ಸಂಘ ಕೃತಜ್ಞತೆ

ಕಲಬುರಗಿ : ರಾಜ್ಯ ಸರ್ಕಾರ ರೈತರ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡುವ ಮೂಲಕ ರೈತರ ಬೇಡಿಕೆಗೆ ಸ್ಪಂದಿಸಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನವಕರ್ನಾಟಕ ರೈತ ಸಂಘ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ದಯಾನಂದ ಪಾಟೀಲ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನ ಬೆಳೆ ವಿಮೆ ಪರಿಹಾರ, ರೈತರ ಸಾಲಮನ್ನಾ ಹಾಗೂ ಬರಗಾಲ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಂಘದ ವತಿಯಿಂದ ಸರ್ಕಾರದ ಗಮನಕ್ಕೆ ತರಲಾಗಿತ್ತು. ಅದರಂತೆ ಬೆಳೆ ವಿಮೆ ಪರಿಹಾರವಾಗಿ 225 ಕೋಟಿ ರೂ. ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ನೀಡಿದ್ದು, ತ್ವರಿತವಾಗಿ ಕ್ರಮ ಕೈಗೊಂಡಿರುವುದು ರೈತಪರ ನಿಲುವಿನ ಪ್ರತೀಕವಾಗಿದೆ ಎಂದು ಹೇಳಿದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿಯೂ ಇದೇ ಬೇಡಿಕೆಗಳನ್ನು ಮನವಿಗಳ ಮೂಲಕ ಸಲ್ಲಿಸಲಾಗಿತ್ತು. ಆದರೆ ಅವುಗಳಿಗೆ ಸೂಕ್ತ ಸ್ಪಂದನೆ ದೊರೆತಿರಲಿಲ್ಲ. ಇದೀಗ ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ ಶೀಘ್ರ ಕ್ರಮ ಕೈಗೊಂಡಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಲಬುರಗಿ ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಮ್ಮುಖದಲ್ಲಿ ನವಕರ್ನಾಟಕ ರೈತ ಸಂಘದ ಪರವಾಗಿ ಹಾಗೂ ಜಿಲ್ಲೆಯ ರೈತರ ಪರವಾಗಿ ಕೃತಜ್ಞತೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ರೈತರ ಇನ್ನೆರಡು ಪ್ರಮುಖ ಬೇಡಿಕೆಗಳಾದ ಸಾಲಮನ್ನಾ ಹಾಗೂ ರಾಜ್ಯದಲ್ಲಿ ಬರಗಾಲ ಘೋಷಣೆ ಕುರಿತು ಸರ್ಕಾರ ಶೀಘ್ರ ನಿರ್ಧಾರ ಕೈಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಮತ್ತಷ್ಟು ನೆರವು ನೀಡಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ನವಕರ್ನಾಟಕ ರೈತ ಸಂಘದ ಮುಖಂಡರಾದ ಭಗವಂತರಾವ ಪಾಟೀಲ್, ಜಗದೇವಪ್ಪ ಪಾಟೀಲ್, ಬಸವರಾಜ ಮುದ್ದಾಣೆ, ಮಲ್ಲಿಕಾರ್ಜುನ ಪಾಟೀಲ್, ಗುಂಡಪ್ಪ ಪಟ್ಟಣ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X