Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಾಣಿಜ್ಯ ಶಿಕ್ಷಣ...

Kalaburagi | ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಪ್ರೊ.ರಾಜನಾಳ್ಕರ್ ಲಕ್ಷ್ಮಣರ ಕೊಡುಗೆ ಅನನ್ಯ: ಪ್ರೊ. ಶಶಿಕಾಂತ್ ಎಸ್. ಉಡಿಕೇರಿ

ವಾರ್ತಾಭಾರತಿವಾರ್ತಾಭಾರತಿ1 Aug 2026 7:53 PM IST
share
Kalaburagi | ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಪ್ರೊ.ರಾಜನಾಳ್ಕರ್ ಲಕ್ಷ್ಮಣರ ಕೊಡುಗೆ ಅನನ್ಯ: ಪ್ರೊ. ಶಶಿಕಾಂತ್ ಎಸ್. ಉಡಿಕೇರಿ
ವಿವಿಯಲ್ಲಿ ವಯೋನಿವೃತ್ತಿ ಅಭಿನಂದನಾ ಸಮಾರಂಭ

ಕಲಬುರಗಿ, ಆ.1: ಪರಿಪೂರ್ಣ ವ್ಯಕ್ತಿತ್ವ, ಶೈಕ್ಷಣಿಕ ಬದ್ಧತೆ ಹಾಗೂ ಸರಳತೆಯ ಮೂಲಕ ವಾಣಿಜ್ಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು ಬೋಧನಾ ವೃತ್ತಿಯ ಶ್ರೇಷ್ಠ ಪರಂಪರೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸಿದ್ದಾರೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೇರಿ ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರ ವಯೋನಿವೃತ್ತಿ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸುಮಾರು ನಾಲ್ಕು ದಶಕಗಳ ಕಾಲ ವಿಶ್ವವಿದ್ಯಾಲಯದ ಶೈಕ್ಷಣಿಕ ಬೆಳವಣಿಗೆಗೆ ಅವರು ಸಲ್ಲಿಸಿರುವ ಸೇವೆ ಅನನ್ಯವಾಗಿದೆ ಎಂದು ಪ್ರಶಂಸಿಸಿದರು.

ಬಡತನದ ಹಿನ್ನೆಲೆಯಿಂದ ಬಂದಿದ್ದರೂ ಕಠಿಣ ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಿದ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು 26 ಸಂಶೋಧಕರಿಗೆ ಪಿಎಚ್.ಡಿ. ಹಾಗೂ 17 ವಿದ್ಯಾರ್ಥಿಗಳಿಗೆ ಎಂ.ಫಿಲ್. ಪದವಿಗೆ ಮಾರ್ಗದರ್ಶನ ನೀಡಿದ್ದಾರೆ. ಯುಜಿಸಿ ಅನುದಾನಿತ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ವಾಣಿಜ್ಯ ಹಾಗೂ ನಿರ್ವಹಣಾ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ಕುಲಪತಿ, ಕುಲಸಚಿವ, ವಿತ್ತಾಧಿಕಾರಿ, ಸಿಂಡಿಕೇಟ್ ಸದಸ್ಯ, ವಿದ್ಯಾವಿಷಯಕ ಪರಿಷತ್ ಸದಸ್ಯ ಸೇರಿದಂತೆ ವಿವಿಧ ಜವಾಬ್ದಾರಿಯುತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜ್ಞಾನ, ಅನುಭವ, ಮಾನವೀಯತೆ ಹಾಗೂ ಸರಳ ಜೀವನಶೈಲಿ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ವಿಶ್ರಾಂತ ಡೀನ್ ಹಾಗೂ ಪ್ರಾಧ್ಯಾಪಕ ಡಾ. ಜಿ.ಟಿ. ಗೋವಿಂದಪ್ಪ ಮಾತನಾಡಿ, ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು ಶಾಂತ ಸ್ವಭಾವದ, ಸ್ನೇಹಪರ ಹಾಗೂ ವಿದ್ಯಾರ್ಥಿ ಪರ ಶಿಕ್ಷಕರಾಗಿದ್ದು, ವಾಣಿಜ್ಯ ವಿಭಾಗವನ್ನು ಮಾದರಿ ವಿಭಾಗವನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಪ್ರೊ. ರಮೇಶ ಲಂಡನಕರ್ ಮಾತನಾಡಿ, ಗ್ರಾಮೀಣ ಹಿನ್ನೆಲೆಯಿಂದ ಬಂದಿದ್ದ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರು ತಮ್ಮ ಜ್ಞಾನ, ತಾಳ್ಮೆ, ಪ್ರಾಮಾಣಿಕತೆ ಹಾಗೂ ಆಡಳಿತ ದಕ್ಷತೆಯಿಂದ ವಿಶ್ವವಿದ್ಯಾಲಯದ ಏಳಿಗೆಗೆ ಗಣನೀಯ ಕೊಡುಗೆ ನೀಡಿದ್ದಾರೆ. ಅವರ ವ್ಯಕ್ತಿತ್ವ ಮತ್ತು ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಹೇಳಿದರು.

ವಾಣಿಜ್ಯ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ.ಪಿ. ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೌಲ್ಯಮಾಪನ ಕುಲಸಚಿವ ಡಾ. ಎನ್.ಜಿ. ಕಣ್ಣೂರ, ಪ್ರೊ.ಸಿ.ಸುಲೋಚನಾ, ಪ್ರೊ.ಸಿ.ಬಸವರಾಜು, ಪ್ರೊ.ಬಿ.ವಿಜಯಾ ಹಾಗೂ ಪ್ರೊ.ಬಿ.ಎಂ.ಕನ್ನಳ್ಳಿ ಸೇರಿದಂತೆ ಹಲವು ಗಣ್ಯರು ಅಭಿನಂದನಾ ನುಡಿಗಳನ್ನಾಡಿದರು.

ವಿಜಯಲಕ್ಷ್ಮಿ, ಡಾ.ಅನು ಥಾಮಸ್ ಹಾಗೂ ಡಾ. ವಿಜಯ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಅಪರ್ಣ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅವರ ಜೀವನ ಮತ್ತು ಸಾಧನೆ ಕುರಿತ ಕಿರುಚಿತ್ರ ಪ್ರದರ್ಶಿಸಲಾಯಿತು. ಸಂಗೀತ ವಿಭಾಗದ ಡಾ. ಲಕ್ಷ್ಮಿ ಶಂಕರ್ ಜೋಷಿ, ಡಾ. ಜಯದಾನಮ್ಮ ಹಾಗೂ ತಂಡ ಪ್ರಾರ್ಥನೆ ಮತ್ತು ನಾಡಗೀತೆಯನ್ನು ಪ್ರಸ್ತುತಪಡಿಸಿದರು. ಡಾ. ನಿವೇದಿತಾ ವಂದಿಸಿದರು.

Tags

EducationKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X