Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಸತಿ ಶಾಲೆಗಳ ಆಹಾರ ವಿಷ...

Kalaburagi | ವಸತಿ ಶಾಲೆಗಳ ಆಹಾರ ವಿಷ ಪ್ರಕರಣಕ್ಕೆ ಸಿಒಡಿ ತನಿಖೆಗೆ ಆಗ್ರಹ; ಆ.11ರಿಂದ ಧರಣಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 Aug 2026 6:58 PM IST
share
Kalaburagi | ವಸತಿ ಶಾಲೆಗಳ ಆಹಾರ ವಿಷ ಪ್ರಕರಣಕ್ಕೆ ಸಿಒಡಿ ತನಿಖೆಗೆ ಆಗ್ರಹ; ಆ.11ರಿಂದ ಧರಣಿ ಎಚ್ಚರಿಕೆ

ಕಲಬುರಗಿ: ದಂಡೋತಿ ಹಾಗೂ ಕರಜಗಿ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣದ ಕುರಿತು ಸಿಒಡಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಈ ಘಟನೆಗೆ ಸಂಬಂಧಿಸಿದಂತೆ ಕೇವಲ ಪ್ರಾಂಶುಪಾಲರು, ವಾರ್ಡನ್‌ಗಳು ಹಾಗೂ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕಾದರೆ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ ತನಿಖೆಗೆ ಆದೇಶಿಸಬೇಕು ಹಾಗೂ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್‌ 11ರಿಂದ ಕಲಬುರಗಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ವಿಳಂಬ, ಹೊರಗುತ್ತಿಗೆ ವ್ಯವಸ್ಥೆಯಲ್ಲಿನ ಅಕ್ರಮಗಳು ಹಾಗೂ ಲಂಚದ ಆರೋಪಗಳಿಂದ ವಸತಿ ಶಾಲೆಗಳ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗಿಂತ ಭ್ರಷ್ಟಾಚಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ದೂರಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿದ ಅವರು, ಸಂಬಂಧಪಟ್ಟ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕರಜಗಿ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ನೇಮಕಾತಿಯಲ್ಲಿಯೂ ಅಕ್ರಮ ನಡೆದಿದೆ ಎಂದು ಆರೋಪಿಸಿದ ಅವರು, ದಂಡೋತಿ ಮತ್ತು ಕರಜಗಿ ವಸತಿ ಶಾಲೆಗಳ ಆಹಾರ ವಿಷ ಪ್ರಕರಣದ ಸಂಪೂರ್ಣ ಸತ್ಯಾಂಶ ಬಹಿರಂಗವಾಗಬೇಕಾದರೆ ಸಿಒಡಿ ತನಿಖೆ ಅನಿವಾರ್ಯ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನರಸಮ್ಮ ಚಂದನಕೆರಾ, ಮೇಘರಾಜ ಕಟಾರೆ, ಪರಶುರಾಮ ಹಡಲಗಿ, ಮುಹಮ್ಮದ್ ಜಮೀರುದ್ದೀನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

protestschoolKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X