Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೋಲಿ, ಕಬ್ಬಲಿಗ, ಅಂಬಿಗ,...

Kalaburagi | ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಮೊಗವೀರ, ಬಾರಿಕೇರ ಪದಗಳನ್ನೂ ಸೇರಿಸಿ: ತಿಪ್ಪಣಪ್ಪ ಕಮಕನೂರ್

ವಾರ್ತಾಭಾರತಿವಾರ್ತಾಭಾರತಿ8 Aug 2026 5:59 PM IST
share
Kalaburagi | ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಮೊಗವೀರ, ಬಾರಿಕೇರ ಪದಗಳನ್ನೂ ಸೇರಿಸಿ: ತಿಪ್ಪಣಪ್ಪ ಕಮಕನೂರ್

ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ ಹಾಗೂ ಬೆಸ್ತ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನದ ವ್ಯಾಪ್ತಿಗೆ ಮೊಗವೀರ ಹಾಗೂ ಬಾರಿಕೇರ ಪದಗಳನ್ನೂ ಸೇರಿಸಿ ಸಮಗ್ರ ಅಧ್ಯಯನ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ್ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಿ, ಕಬ್ಬಲಿಗ, ಅಂಬಿಗ ಹಾಗೂ ಬೆಸ್ತ ಸಮುದಾಯಗಳು ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಟೋಕರೆಕೋಳಿ, ಕೋಯಾ, ಕೋಳಿಡೋರ ಹಾಗೂ ಕೋಲ್ಚಾ ಸಮುದಾಯಗಳ ಪರ್ಯಾಯ ಪದಗಳೇ ಎಂಬುದನ್ನು ಪರಿಶೀಲಿಸಲು ಸರ್ಕಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಅಧ್ಯಯನಕ್ಕೆ ಅಂದಾಜು 17.45 ಲಕ್ಷ ರೂ. ವೆಚ್ಚವಾಗಲಿದ್ದು, 2026–27ನೇ ಸಾಲಿನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಯೋಜನೆಗಳಡಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಅಧ್ಯಯನದ ವ್ಯಾಪ್ತಿಯಲ್ಲಿ ಮೊಗವೀರ ಹಾಗೂ ಬಾರಿಕೇರ ಪದಗಳನ್ನೂ ಸೇರಿಸುವ ಅಗತ್ಯವಿದೆ ಎಂದು ಹೇಳಿದರು.

ಈ ಕುರಿತು ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರಿಗೆ ಹೆಚ್ಚುವರಿ ಪ್ರಸ್ತಾವನೆ ಕಳುಹಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಹಿಂದೆ ವಾಪಸ್ ಬಂದಿದ್ದ ಪ್ರಸ್ತಾವನೆಯನ್ನು ಮತ್ತೊಮ್ಮೆ ಪರಿಶೀಲಿಸಿ, ಅಗತ್ಯ ಪದಗಳನ್ನು ಒಳಗೊಂಡ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ತಳವಾರ ಸಮುದಾಯಕ್ಕೆ ಪ್ರಮಾಣಪತ್ರದ ಸಮಸ್ಯೆ ನಿವಾರಣೆಗೆ ಮನವಿ :

ಕಲಬುರಗಿ ಹಾಗೂ ಅಫಜಲಪುರದಲ್ಲಿ ತಳವಾರ ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ತೊಂದರೆ ಎದುರಾಗುತ್ತಿದೆ. ತಳವಾರ ಸಮುದಾಯವು ಪ್ರವರ್ಗ–1ರಲ್ಲಿ ಇದ್ದ ಸಂದರ್ಭದಲ್ಲಿ ತಂದೆ ಅಥವಾ ತಾಯಿ ಹೆಸರಿನೊಂದಿಗೆ ‘ತಳವಾರ’ ಎಂದು ದಾಖಲಾಗಿದ್ದರೆ, ಅಂತಹ ಅರ್ಹರಿಗೆ ಜಾತಿ ಪ್ರಮಾಣಪತ್ರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಈ ಕುರಿತು ಸೂಕ್ತ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಕಮಕನೂರ್ ತಿಳಿಸಿದರು.

ಕುಲಶಾಸ್ತ್ರೀಯ ಅಧ್ಯಯನವನ್ನು ಪರಿಣಾಮಕಾರಿಯಾಗಿ ನಡೆಸಲು ರಾಜ್ಯದ 31 ಜಿಲ್ಲೆಗಳ ಸಮುದಾಯದ ಪ್ರಮುಖರನ್ನು ಒಳಗೊಂಡ ಸಭೆ ನಡೆಸಿ, ಅವರೊಂದಿಗೆ ಸಮಾಲೋಚನೆ ಬಳಿಕ ಮುಖ್ಯಮಂತ್ರಿಗಳಿಗೆ ಸಮಗ್ರ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಅಂಬಿಗರ ಚೌಡಯ್ಯ ಅವರ ಮೂರ್ತಿ ಸ್ಥಾಪಿಸುವುದರ ಜೊತೆಗೆ ಕೋಲಿ–ಅಂಬಿಗ ಸಮುದಾಯ ಭವನ ನಿರ್ಮಾಣಕ್ಕೂ ಸರ್ಕಾರದ ಗಮನ ಸೆಳೆಯಲಾಗುವುದು. ಸಮುದಾಯದ ಎಲ್ಲರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಲಬುರಗಿಯಲ್ಲಿ ಸುಮಾರು 8ರಿಂದ 10 ಅಧಿಕಾರಿಗಳು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ದೂರವಾಣಿ ಕರೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಕಚೇರಿ ಕೆಲಸಗಳಿಗಾಗಿ ಸಂಪರ್ಕಿಸಿದರೂ ಸೂಕ್ತ ಪ್ರತಿಕ್ರಿಯೆ ನೀಡದೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿರುವುದಾಗಿ ತಿಪ್ಪಣಪ್ಪ ಕಮಕನೂರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಮೇಶ್ ನಾಟೇಕರ್, ವಿಜಯಕುಮಾರ, ಚಂದ್ರಶೇಖರ ಅಲಗಟಿ, ನೀಲಕಂಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X