Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಾನೂನು ವೃತ್ತಿಯಲ್ಲಿ...

Kalaburagi | ಕಾನೂನು ವೃತ್ತಿಯಲ್ಲಿ ಯಶಸ್ಸಿಗೆ ಪಠ್ಯಜ್ಞಾನದ ಜತೆಗೆ ಪ್ರಾಯೋಗಿಕ ಅರಿವು ಅಗತ್ಯ: ಸಿ.ಎಂ.ಜೋಶಿ

ವಾರ್ತಾಭಾರತಿವಾರ್ತಾಭಾರತಿ12 Aug 2026 7:17 PM IST
share
Kalaburagi | ಕಾನೂನು ವೃತ್ತಿಯಲ್ಲಿ ಯಶಸ್ಸಿಗೆ ಪಠ್ಯಜ್ಞಾನದ ಜತೆಗೆ ಪ್ರಾಯೋಗಿಕ ಅರಿವು ಅಗತ್ಯ: ಸಿ.ಎಂ.ಜೋಶಿ

ಕಲಬುರಗಿ: ಕಾನೂನು ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಕೇವಲ ಪಠ್ಯಜ್ಞಾನ ಸಾಕಾಗುವುದಿಲ್ಲ. ವಿಷಯದ ಆಳವಾದ ಅಧ್ಯಯನ, ನಿರಂತರ ಕಾನೂನು ಸಂಶೋಧನೆ, ಪ್ರಾಯೋಗಿಕ ಅರಿವು, ಶಿಸ್ತು ಹಾಗೂ ನೈತಿಕ ಮೌಲ್ಯಾಧಾರಿತ ವೃತ್ತಿಪರತೆ ಅತ್ಯಗತ್ಯ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಿ.ಎಂ. ಜೋಶಿ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕಾನೂನು ವಿಭಾಗದ ವತಿಯಿಂದ ಆಯೋಜಿಸಿದ್ದ ‘ಕಾನೂನು ವೃತ್ತಿಯ ಪ್ರಾಯೋಗಿಕ ಆಯಾಮಗಳು, ನ್ಯಾಯಾಲಯದ ಶಿಷ್ಟಾಚಾರ, ವೃತ್ತಿಪರ ನೀತಿಶಾಸ್ತ್ರ, ಕಾನೂನು ಸಂಶೋಧನೆ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (AI) ಪಾತ್ರ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಯುವ ವಕೀಲರನ್ನು ಉದ್ದೇಶಿಸಿ ಅವರು ಮಾತನಾಡಿದರು.

ನ್ಯಾಯಾಲಯದಲ್ಲಿ ಅನಗತ್ಯ ವಾಗ್ವಾದಗಳಿಗೆ ಅವಕಾಶ ನೀಡದೆ, ಪ್ರಕರಣದ ವಾಸ್ತವಾಂಶಗಳು ಹಾಗೂ ಕಾನೂನು ಅಂಶಗಳನ್ನು ಆಳವಾಗಿ ಅಧ್ಯಯನ ಮಾಡಿ, ಸಮಗ್ರ ಸಿದ್ಧತೆಯೊಂದಿಗೆ ಜವಾಬ್ದಾರಿಯುತವಾಗಿ ವಾದ ಮಂಡಿಸುವುದು ವಕೀಲರ ಪ್ರಮುಖ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾನೂನು ಪದವಿ ಪೂರ್ಣಗೊಂಡ ಬಳಿಕ ಅಧ್ಯಯನ ಮುಗಿಯುವುದಿಲ್ಲ. ವಾಸ್ತವವಾಗಿ, ಅಲ್ಲಿಂದಲೇ ವೃತ್ತಿಜೀವನದ ನಿಜವಾದ ಕಲಿಕೆ ಆರಂಭವಾಗುತ್ತದೆ. ಹೀಗಾಗಿ ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮತ್ತು ಜೀವನಪರ್ಯಂತ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾನೂನು ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ ಅವರು, AI ಆಧಾರಿತ ಕಾನೂನು ಸಹಾಯಕ ಸಾಧನಗಳನ್ನು ಅತಿಯಾಗಿ ಅಥವಾ ವಿಮರ್ಶಾತ್ಮಕ ಪರಿಶೀಲನೆಯಿಲ್ಲದೆ ಅವಲಂಬಿಸಬಾರದು. ಕಾನೂನು ಸಂಶೋಧನೆ ಹಾಗೂ ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಮಾಹಿತಿಯ ನಿಖರತೆಯನ್ನು ಪರಿಶೀಲಿಸುವುದರ ಜತೆಗೆ ಮಾನವೀಯ ವಿವೇಕ, ವೃತ್ತಿಪರ ಹೊಣೆಗಾರಿಕೆ ಮತ್ತು ನೈತಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದರು.

ಸಂವಾದದ ಸಂದರ್ಭದಲ್ಲಿ ನ್ಯಾಯಮೂರ್ತಿ ಜೋಶಿ ಅವರು ತಮ್ಮ ಶೈಕ್ಷಣಿಕ ಪಯಣ, ವಕೀಲರು ಹಾಗೂ ನ್ಯಾಯಾಧೀಶರಾಗಿ ಗಳಿಸಿದ ಅನುಭವ, ವೃತ್ತಿಜೀವನದಲ್ಲಿ ಎದುರಿಸಿದ ಸವಾಲುಗಳು ಹಾಗೂ ಯಶಸ್ಸಿನ ಹಿಂದೆ ಇರುವ ಕಠಿಣ ಪರಿಶ್ರಮ, ಶಿಸ್ತು ಮತ್ತು ಪ್ರಾಯೋಗಿಕ ಅನುಭವದ ಮಹತ್ವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮವನ್ನು ಕಾನೂನು ವಿಭಾಗದ ಡೀನ್ ಪ್ರೊ. ಬಸವರಾಜ ಎಂ. ಕುಬಕಡ್ಡಿ ಸಂಯೋಜಿಸಿದರು. ಕಾನೂನು ವಿಭಾಗದ ಮುಖ್ಯಸ್ಥೆ ಡಾ. ಅನಂತ್ ಡಿ. ಚಿಂಚುರೆ ಸ್ವಾಗತಿಸಿದರು. ವಂದಿತಾ ತಿವಾರಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿಜ್ಞಾನೇಶ್ವರ ಟ್ರಸ್ಟ್‌ನ ಕಾರ್ಯಕಾರಿ ಟ್ರಸ್ಟಿ ಮಹಾದೇವಯ್ಯ ಕರದಳ್ಳಿ, ವಿಶ್ವವಿದ್ಯಾಲಯದ ಕಾನೂನು ವಿಭಾಗದ ಪ್ರಾಧ್ಯಾಪಕರಾದ ಡಾ. ಶಶಿರೇಖಾ ಮಾಳಗಿ, ಡಾ. ಜಗದೀಶ್ ಚಂದ್ರ ಟಿ.ಜಿ., ಡಾ. ರೇಣುಕಾ ಎಸ್. ಗುಬ್ಬೇವಾಡ್, ಡಾ. ಜಯಂತ ಬೋರುವಾ, ಡಾ. ಕೆ.ಎಂ. ಕೃಷ್ಣಶೇಖರ್ ಶರ್ಮಾ, ಶ್ರೀಮತಿ ಪಿ. ವೈಷ್ಣವಿ ನಾರಾಯಣ್ ಹಾಗೂ ಜುನು ದಾಸ್ ಸೇರಿದಂತೆ ಸಂಶೋಧನಾ ವಿದ್ಯಾರ್ಥಿಗಳು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

KnowledgeKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X