Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಭ್ರಷ್ಟಾಚಾರ ಮುಕ್ತ,...

Kalaburagi | ಭ್ರಷ್ಟಾಚಾರ ಮುಕ್ತ, ಪಾರದರ್ಶಕ ನ್ಯಾಯಾಂಗಕ್ಕಾಗಿ ಬಾರ್‌-ಬೆಂಚ್‌ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು : ನ್ಯಾ.ಆರ್.ದೇವದಾಸ

ವಾರ್ತಾಭಾರತಿವಾರ್ತಾಭಾರತಿ15 Aug 2026 5:18 PM IST
share
Kalaburagi | ಭ್ರಷ್ಟಾಚಾರ ಮುಕ್ತ, ಪಾರದರ್ಶಕ ನ್ಯಾಯಾಂಗಕ್ಕಾಗಿ ಬಾರ್‌-ಬೆಂಚ್‌ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು : ನ್ಯಾ.ಆರ್.ದೇವದಾಸ

ಕಲಬುರಗಿ: ನ್ಯಾಯಾಂಗ ರಂಗದಲ್ಲಿ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಹಾಗೂ ಜನಸ್ನೇಹಿ ವ್ಯವಸ್ಥೆ ರೂಪಿಸಲು ಬಾರ್ ಮತ್ತು ಬೆಂಚ್‌ಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ನ್ಯಾಯಾಂಗದ ಮೇಲಿರುವ ಸಾರ್ವಜನಿಕರ ಅಚಲ ನಂಬಿಕೆಯನ್ನು ಕಾಯ್ದುಕೊಳ್ಳುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ಹಿರಿಯ ನ್ಯಾಯಮೂರ್ತಿ ಆರ್. ದೇವದಾಸ ಹೇಳಿದರು.

ನಗರದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ವಿಳಂಬವಾದ ನ್ಯಾಯ, ನ್ಯಾಯ ನಿರಾಕರಣೆಗೆ ಸಮಾನ’ ಎಂದು ಪ್ರತಿಪಾದಿಸಿದ ಅವರು, ಕಲ್ಯಾಣ ಕರ್ನಾಟಕದ ಕಡುಬಡವರು, ರೈತರು ಹಾಗೂ ಶೋಷಿತ ವರ್ಗದ ಜನರು ತಮ್ಮ ಹಕ್ಕುಗಳಿಗಾಗಿ ವರ್ಷಗಟ್ಟಲೆ ಕಾಯುವಂತಾಗಬಾರದು. ವಕೀಲರು ಅನಗತ್ಯವಾಗಿ ಪ್ರಕರಣಗಳ ವಿಚಾರಣೆ ಮುಂದೂಡುವುದನ್ನು ಕಡಿಮೆ ಮಾಡಿ, ಶೀಘ್ರ ನ್ಯಾಯದಾನಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಣ್ಣಪುಟ್ಟ ಜಗಳ ಹಾಗೂ ವಿವಾದಗಳನ್ನು ನ್ಯಾಯಾಲಯಕ್ಕೆ ತರುವ ಬದಲು ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ. ಇದರಿಂದ ಸಮಾಜದಲ್ಲಿ ಸೌಹಾರ್ದತೆ ಹೆಚ್ಚುವುದರ ಜತೆಗೆ ನ್ಯಾಯಾಲಯಗಳ ಮೇಲಿನ ಪ್ರಕರಣಗಳ ಹೊರೆಯೂ ಕಡಿಮೆಯಾಗಲಿದೆ ಎಂದರು.

ಕಲ್ಯಾಣ ಕರ್ನಾಟಕದ ನೆಲದಿಂದ ನ್ಯಾಯದ ಧ್ವನಿ ಎಂದಿಗೂ ಕುಗ್ಗಬಾರದು. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆಯುವ ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೊಡುಗೆ ನೀಡಬೇಕು. 2047ರಲ್ಲಿ ದೇಶ ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸುವುದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಬೇಕು ಎಂದು ಕರೆ ನೀಡಿದರು.

ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಘಟನೆಗಳನ್ನು ಸ್ಮರಿಸಿದ ನ್ಯಾಯಮೂರ್ತಿ ದೇವದಾಸ ಅವರು, ದೇಶಭಕ್ತಿಯ ಕಿಚ್ಚು ಹೊತ್ತಿಸಿದ ‘ವಂದೇ ಮಾತರಂ’ ಗೀತೆ 150 ವರ್ಷಗಳನ್ನು ಪೂರೈಸಿರುವುದನ್ನು ಉಲ್ಲೇಖಿಸಿದರು. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ‘ವಿಕಸಿತ ಭಾರತಕ್ಕಾಗಿ ಯುವಶಕ್ತಿ’ ಎಂಬ ಸಂಕಲ್ಪದೊಂದಿಗೆ ಆಚರಿಸಲಾಗುತ್ತಿದೆ ಎಂದರು.

ಆಧುನಿಕ ಯುಗದಲ್ಲಿ ನ್ಯಾಯಾಲಯಗಳು ಡಿಜಿಟಲ್ ಕ್ರಾಂತಿಗೆ ಸಾಕ್ಷಿಯಾಗುತ್ತಿದ್ದು, ಈ-ಕೋರ್ಟ್ಸ್, ವರ್ಚುವಲ್ ವಿಚಾರಣೆ ಹಾಗೂ ಕ್ವಿಕ್ ಇ-ಫೈಲಿಂಗ್‌ನಂತಹ ತಂತ್ರಜ್ಞಾನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದೆ. ಗ್ರಾಮೀಣ ಭಾಗದ ಕಕ್ಷಿದಾರರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿಯೇ ತೀರ್ಪು ನೀಡುವುದು ಹಾಗೂ ಕಲಾಪ ನಡೆಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಜೂನ್ 1, 2026ರಿಂದ ಜಾರಿಗೆ ಬಂದಿರುವ ಹಾರ್ಡ್ ಬೋರ್ಡ್ ಫೈಲಿಂಗ್ ಪ್ರಕ್ರಿಯೆಯನ್ನು ಮೂರು ಪೀಠಗಳ ಪೈಕಿ ಕಲಬುರಗಿ ಪೀಠದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಕಲಬುರಗಿ ಪೀಠ ಆರಂಭವಾದ 2008ರ ಜುಲೈ 7ರಿಂದ 2026ರ ಆಗಸ್ಟ್ 14ರವರೆಗೆ ಒಟ್ಟು 1,78,631 ಪ್ರಕರಣಗಳು ದಾಖಲಾಗಿದ್ದು, 1,54,873 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವಕೀಲರು ಮತ್ತು ನ್ಯಾಯಾಧೀಶರು ನ್ಯಾಯದಾನದ ರಥದ ಎರಡು ಚಕ್ರಗಳಿದ್ದಂತೆ. ಉಚಿತ ಕಾನೂನು ನೆರವು ಹಾಗೂ ಲೋಕ ಅದಾಲತ್‌ಗಳ ಸಕ್ರಿಯ ಬಳಕೆಯ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ದೊರೆಯುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ನೈಜ ದೇಶಭಕ್ತಿ ಕೇವಲ ಗಡಿಯಲ್ಲಿ ನಿಂತು ದೇಶಕ್ಕಾಗಿ ಹೋರಾಡುವುದಕ್ಕೆ ಸೀಮಿತವಾಗಿಲ್ಲ. ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವುದು, ಕಾನೂನನ್ನು ಗೌರವಿಸುವುದು, ಪರಿಸರವನ್ನು ಸ್ವಚ್ಛವಾಗಿಡುವುದು ಹಾಗೂ ಮಹಿಳೆಯರನ್ನು ಗೌರವಿಸುವುದೂ ದೇಶಭಕ್ತಿಯ ಪ್ರಮುಖ ರೂಪಗಳಾಗಿವೆ ಎಂದು ನ್ಯಾಯಮೂರ್ತಿ ಆರ್. ದೇವದಾಸ ಹೇಳಿದರು.

ದ.ರಾ. ಬೇಂದ್ರೆಯವರ ಕವನದ ಸಾಲುಗಳನ್ನು ಸ್ಮರಿಸಿದ ಅವರು, ರಾಷ್ಟ್ರಧ್ವಜವು ಹಿಮಾಲಯದಿಂದ ದಕ್ಷಿಣದ ಜಲರಾಶಿಯವರೆಗೆ ಸದಾ ಹೆಮ್ಮೆಯಿಂದ ಹಾರಾಡಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಗಳಾದ ಎಸ್.ಆರ್. ಕೃಷ್ಣ ಕುಮಾರ್, ಟಿ.ಎನ್. ಇನವಳ್ಳಿ, ಬೃಂಗೇಶ ಎಂ., ಅಪರ ಮಹಾವಿಲೇಖನಾಧಿಕಾರಿ ಬಸವರಾಜ ಚೇಂಗಟಿ, ಅಪರ ವಿಲೇಖನಾಧಿಕಾರಿ (ನ್ಯಾಯಾಂಗ) ಕುಮಾರ ಡಿ.ಕೆ., ಗುಲಬರ್ಗಾ ವಕೀಲರ ಸಂಘದ ಅಧ್ಯಕ್ಷ ಎಸ್.ವಿ. ಪಸಾರ, ಹೈಕೋರ್ಟ್ ಘಟಕದ ಉಪಾಧ್ಯಕ್ಷ ಅನಂತ ಜಹಾಗೀರದಾರ, ಸಂಘದ ಪ್ರಧಾನ ಕಾರ್ಯದರ್ಶಿ ಗೌರೀಶ ಎಸ್. ಕಾಶಂಪೂರ, ಸರ್ಕಾರಿ ವಕೀಲರು, ಕಿರಿಯ ವಕೀಲರು, ಹೈಕೋರ್ಟ್ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X