Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಾರ್ಮಿಕರ ಬೇಡಿಕೆ...

Kalaburagi | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.25ರಿಂದ ಶಾಸಕರು, ಸಚಿವರ ಮನೆ ಮುಂದೆ ಸಿಐಟಿಯು ಪ್ರತಿಭಟನೆ : ಎಸ್.ವರಲಕ್ಷ್ಮಿ

ವಾರ್ತಾಭಾರತಿವಾರ್ತಾಭಾರತಿ22 Sept 2026 7:32 PM IST
share
Kalaburagi | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ.25ರಿಂದ ಶಾಸಕರು, ಸಚಿವರ ಮನೆ ಮುಂದೆ ಸಿಐಟಿಯು ಪ್ರತಿಭಟನೆ : ಎಸ್.ವರಲಕ್ಷ್ಮಿ

ಕಲಬುರಗಿ: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು ಹಾಗೂ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 25ರಿಂದ ರಾಜ್ಯದ ಶಾಸಕರು ಮತ್ತು ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಐಟಿಯು ರಾಜ್ಯ ಸಮಿತಿಯ ನೇತೃತ್ವದಲ್ಲಿ ಕಾರ್ಮಿಕರ ವಿವಿಧ ಬೇಡಿಕೆಗಳಿಗಾಗಿ ರಾಜ್ಯಾದ್ಯಂತ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದರು.

ಸರ್ಕಾರದ ವಿವಿಧ ಇಲಾಖೆಗಳ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಿ ಕನಿಷ್ಠ ವೇತನದ ವ್ಯಾಪ್ತಿಗೆ ತರಬೇಕು ಎಂದು ಅವರು ಆಗ್ರಹಿಸಿದರು. ಅಲ್ಲಿಯವರೆಗೆ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆಯಂತೆ ಬಿಸಿಯೂಟ ನೌಕರರಿಗೆ 7 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಹಾಗೂ ಅಂಗನವಾಡಿ ನೌಕರರಿಗೆ 15 ಸಾವಿರ ರೂ. ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಗುತ್ತಿಗೆ ಮತ್ತು ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ, ಖಾಯಂಗೊಳಿಸಲು ಅಗತ್ಯವಾದ ಕಾನೂನು ಜಾರಿಗೆ ತರಬೇಕು. ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಕೆಸಿಎಸ್‌ಆರ್ ನಿಯಮಗಳಲ್ಲಿ ಅಗತ್ಯ ತಿದ್ದುಪಡಿ ಮಾಡಬೇಕು ಎಂದರು.

ಇಎಸ್‌ಐ, ಪಿಎಫ್, ಗ್ರಾಚ್ಯುಟಿ ಹಾಗೂ ಬೋನಸ್ ಸೌಲಭ್ಯ ಪಡೆಯಲು ವಿಧಿಸಿರುವ ಮಿತಿಗಳನ್ನು ರದ್ದುಪಡಿಸಬೇಕು. ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟು ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಆಹಾರ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸೇವೆಗಳ ಗುಣಮಟ್ಟ ಹೆಚ್ಚಿಸಬೇಕು. ವಿದ್ಯುತ್, ಸಾರಿಗೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಬಾರದು ಎಂದು ಅವರು ಒತ್ತಾಯಿಸಿದರು.

ವಸತಿ ರಹಿತ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರುವ ಆದಾಯ ಮಿತಿಯನ್ನು ಹೆಚ್ಚಿಸಬೇಕು ಎಂದು ಎಸ್. ವರಲಕ್ಷ್ಮಿ ಸರ್ಕಾರವನ್ನು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮೀನಾಕ್ಷಿ ಸುಂದರಂ, ಎಂ.ಬಿ. ಸಜ್ಜನ್, ಶಾಂತಾ ಸೇರಿದಂತೆ ಸಿಐಟಿಯು ಮುಖಂಡರು ಉಪಸ್ಥಿತರಿದ್ದರು.

Tags

KalaburagiCITUprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X