Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕರ್ನಾಟಕ–ಮಧ್ಯಪ್ರದೇಶದ...

Kalaburagi | ಕರ್ನಾಟಕ–ಮಧ್ಯಪ್ರದೇಶದ ಯುವಜನರ ಬಾಂಧವ್ಯಕ್ಕೆ ‘ಯುವ ಸಂಗಮ’ ಕಾರ್ಯಕ್ರಮ : ಪ್ರೊ.ಬಟ್ಟು ಸತ್ಯನಾರಾಯಣ

ಸೆ.28ರಿಂದ ಅ.3ರವರೆಗೆ ಮಧ್ಯಪ್ರದೇಶದ 51 ವಿದ್ಯಾರ್ಥಿಗಳ ಕರ್ನಾಟಕ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ26 Sept 2026 6:09 PM IST
share
Kalaburagi | ಕರ್ನಾಟಕ–ಮಧ್ಯಪ್ರದೇಶದ ಯುವಜನರ ಬಾಂಧವ್ಯಕ್ಕೆ ‘ಯುವ ಸಂಗಮ’ ಕಾರ್ಯಕ್ರಮ : ಪ್ರೊ.ಬಟ್ಟು ಸತ್ಯನಾರಾಯಣ

ಕಲಬುರಗಿ: ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ವಿವಿಧ ರಾಜ್ಯಗಳ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಅಭಿವೃದ್ಧಿಪರ ವೈವಿಧ್ಯತೆಯನ್ನು ಪರಸ್ಪರ ಅರಿತುಕೊಳ್ಳುವ ಜೊತೆಗೆ ಕರ್ನಾಟಕ ಮತ್ತು ಮಧ್ಯಪ್ರದೇಶದ ಯುವಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವಾಲಯದ ‘ಏಕ್ ಭಾರತ್ ಶ್ರೇಷ್ಠ ಭಾರತ್’ ಕಾರ್ಯಕ್ರಮದಡಿ 7ನೇ ಹಂತದ ‘ಯುವ ಸಂಗಮ’ ಆಯೋಜಿಸಲಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.

ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯುವ ಸಂಗಮ’ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 3ರವರೆಗೆ ಮಧ್ಯಪ್ರದೇಶದ 51 ವಿದ್ಯಾರ್ಥಿಗಳ ನಿಯೋಗ ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಲಿದೆ. ಈ ಸಂದರ್ಭದಲ್ಲಿ ರಾಜ್ಯದ ಕಲೆ, ಸಂಸ್ಕೃತಿ, ಶ್ರೀಮಂತ ಪರಂಪರೆ, ಶೈಕ್ಷಣಿಕ ವ್ಯವಸ್ಥೆ, ಕೈಗಾರಿಕೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸುವುದರ ಜೊತೆಗೆ ಸ್ಥಳೀಯರು, ಯುವಜನರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಸಂವಾದ ನಡೆಸಲಿದೆ ಎಂದು ತಿಳಿಸಿದರು.

ಈ ಹಿಂದೆ 2023ರಲ್ಲಿ ನಡೆದ ನಾಲ್ಕನೇ ಹಂತದ ‘ಯುವ ಸಂಗಮ’ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳ ತಂಡಗಳು ಪರಸ್ಪರ ರಾಜ್ಯಗಳಿಗೆ ಭೇಟಿ ನೀಡಿದ್ದವು. ಇದೀಗ ಕರ್ನಾಟಕ ಮತ್ತು ಮಧ್ಯಪ್ರದೇಶದ ಯುವಜನರ ನಡುವೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಬಾಂಧವ್ಯ ಬೆಳೆಸುವ ಉದ್ದೇಶದಿಂದ ಈ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಮಧ್ಯಪ್ರದೇಶದ ವಿದ್ಯಾರ್ಥಿಗಳ ನಿಯೋಗವು ಸೆಪ್ಟೆಂಬರ್ 28ರಂದು ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವ ಮೂಲಕ ಪ್ರವಾಸ ಆರಂಭಿಸಲಿದೆ. ಬಳಿಕ ಆಳಂದ ತಾಲೂಕಿನ ತೆಲ್ಲೂರ ಗ್ರಾಮಕ್ಕೆ ತೆರಳಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದೆ. ನಂತರ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಸಾವಯವ ಬೆಲ್ಲ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಸ್ಥಳೀಯ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದೆ.

ಬಳಿಕ ಬೀದರ್ ಕೋಟೆ ಹಾಗೂ ಬಿದರಿ ಕರಕುಶಲ ಕಲಾವಿದರನ್ನು ಭೇಟಿ ಮಾಡಿ ಅಲ್ಲಿನ ಕಲೆ ಮತ್ತು ಪರಂಪರೆಯ ಕುರಿತು ಮಾಹಿತಿ ಪಡೆಯಲಿದೆ. ನಂತರ ಬೆಂಗಳೂರಿಗೆ ತೆರಳಿ ಲೋಕಭವನ, ಇಸ್ರೋ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ), ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ ಸೇರಿದಂತೆ ವಿವಿಧ ಐತಿಹಾಸಿಕ, ಶೈಕ್ಷಣಿಕ ಹಾಗೂ ಪಾರಂಪರಿಕ ತಾಣಗಳಿಗೆ ಭೇಟಿ ನೀಡಲಿದೆ ಎಂದು ವಿವರಿಸಿದರು.

ಇದೇ ರೀತಿಯಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಿಂದ ಆಯ್ಕೆಯಾದ ವಿದ್ಯಾರ್ಥಿಗಳ ಪೈಕಿ ಕಲ್ಯಾಣ ಕರ್ನಾಟಕದ 18 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ ಒಟ್ಟು 50 ವಿದ್ಯಾರ್ಥಿಗಳ ನಿಯೋಗವು ಅಕ್ಟೋಬರ್ 10ರಿಂದ 17ರವರೆಗೆ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದೆ.

ಈ ನಿಯೋಗದಲ್ಲಿ 26 ಮಹಿಳಾ ಹಾಗೂ 24 ಪುರುಷ ವಿದ್ಯಾರ್ಥಿಗಳು ಮತ್ತು ಮೂವರು ಅಧ್ಯಾಪಕ ಸಂಯೋಜಕರು ಇರಲಿದ್ದಾರೆ. ಭೋಪಾಲ್, ಭೋಜ್‌ಪುರ, ಇಂದೋರ್, ರಾಜವಾಡಾ, ಸಾಂಚಿ ಸ್ತೂಪ ಸೇರಿದಂತೆ ವಿವಿಧ ಐತಿಹಾಸಿಕ ಹಾಗೂ ಸಾಂಸ್ಕೃತಿಕ ತಾಣಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಲಿದ್ದಾರೆ. ಅಲ್ಲದೆ, ಲೋಕಭವನ, ವಿಧಾನಸಭೆ ಹಾಗೂ ಮುಖ್ಯಮಂತ್ರಿ ನಿವಾಸಕ್ಕೂ ಭೇಟಿ ನೀಡಿ ಮಧ್ಯಪ್ರದೇಶದ ಆಡಳಿತ ವ್ಯವಸ್ಥೆ, ಸಾಂಸ್ಕೃತಿಕ ಪರಂಪರೆ ಮತ್ತು ಸಂಪ್ರದಾಯಗಳ ಕುರಿತು ತಿಳಿದುಕೊಳ್ಳಲಿದ್ದಾರೆ ಎಂದು ಹೇಳಿದರು.

‘ಯುವ ಸಂಗಮ’ ಕಾರ್ಯಕ್ರಮವು ಪ್ರವಾಸೋದ್ಯಮ, ಪರಂಪರೆ, ಪ್ರಗತಿ, ಪರಸ್ಪರ ಸಂಪರ್ಕ ಮತ್ತು ತಂತ್ರಜ್ಞಾನ ಎಂಬ ಐದು ಪ್ರಮುಖ ಅಂಶಗಳ ಮೇಲೆ ಕೇಂದ್ರೀಕೃತವಾಗಿದೆ. ದೇಶದ ವಿವಿಧ ಭಾಗಗಳ ಯುವಜನರಿಗೆ ಪರಸ್ಪರ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಅಭಿವೃದ್ಧಿಪರ ವೈವಿಧ್ಯತೆಯನ್ನು ನೇರವಾಗಿ ಅನುಭವಿಸಲು ಈ ಕಾರ್ಯಕ್ರಮ ವೇದಿಕೆ ಒದಗಿಸುತ್ತದೆ ಎಂದು ಪ್ರೊ. ಬಟ್ಟು ಸತ್ಯನಾರಾಯಣ ತಿಳಿಸಿದರು.

ಕರ್ನಾಟಕದಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಮಧ್ಯಪ್ರದೇಶದಲ್ಲಿ ಭೋಪಾಲ್ ಸ್ಕೂಲ್ ಆಫ್ ಪ್ಲಾನಿಂಗ್ ಆ್ಯಂಡ್ ಆರ್ಕಿಟೆಕ್ಚರ್ ಸಂಸ್ಥೆಗಳು ಕಾರ್ಯಕ್ರಮದ ಸಮನ್ವಯ ಹಾಗೂ ನಿಯೋಗಗಳ ಆತಿಥ್ಯದ ಜವಾಬ್ದಾರಿಯನ್ನು ವಹಿಸಲಿವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ‘ಯುವ ಸಂಗಮ’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ, ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಗಣಪತಿ ಬಿ. ಸಿನ್ನೂರ್, ಸಹಾಯಕ ಕುಲಸಚಿವ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಕಾಂತ ಎಂ. ಕುಸೂರ, ಕಾನೂನು ನಿಕಾಯದ ಡೀನ್ ಪ್ರೊ. ಬಸವರಾಜ ಎಂ. ಕುಬ್ಬಕಡ್ಡಿ, ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ವೆಂಕಟರಮಣದೊಡ್ಡಿ, ಯುವ ಸಂಗಮದ ನೋಡಲ್ ಅಧಿಕಾರಿ ಡಾ. ಶಿವಾ ಹಾಗೂ ಕಾರ್ಯಕ್ರಮ ಸಂಚಾಲಕ ಡಾ. ಜಗದೀಶ ಬಿರಾದಾರ ಉಪಸ್ಥಿತರಿದ್ದರು.

Tags

Madhya PradeshKarnatakaKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X