ಕಲಬುರಗಿ | ಮಳಸಾಪೂರದಲ್ಲಿ 2.7 ತೀವ್ರತೆಯ ಭೂಕಂಪನ : ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಕಲಬುರಗಿ: ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಸಾಪೂರ ಗ್ರಾಮದ ಸಮೀಪ ಭೂ ಕಂಪನ ಆಗಿರುವ ಕುರಿತು KSNDMC ಮಾಹಿತಿ ನೀಡಿದೆ.
ಭೂಕಂಪನ ಮಾಪನದಲ್ಲಿ 2.7 ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿ ಕಂಪಿಸಿರುವ ಹಿನ್ನೆಲೆ ಜನರು ಭಯಭೀತರಾಗಿ ಮನೆಗಳಿಂದ ಹೊರಬಂದಿದ್ದಾರೆ.
ಈ ಕುರಿತು ಮಾಹಿತಿ ಅರಿತ ಕಮಲಾಪುರ ತಾಲ್ಲೂಕು ತಹಶೀಲ್ದಾರ್ ಅವರು ಮಳಸಾಪೂರ ಮತ್ತು ಪಟವಾದ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಭೂಕಂಪನ ಕುರಿತು ವಿಚಾರಿಸಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹೇಳಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು, ಗ್ರಾಮದ ಗ್ರಾಮ ಲೆಕ್ಕಾಧಿಕಾರಿ, ಗ್ರಾಮದ ಮುಖಂಡರು ಹಾಜರಿದ್ದರು.
Next Story





