Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿವಿ ಕ್ಯಾಂಪಸ್...

Kalaburagi | ಶರಣಬಸವ ವಿವಿ ಕ್ಯಾಂಪಸ್ ನೇಮಕಾತಿಯಲ್ಲಿ 30 ವಿದ್ಯಾರ್ಥಿಗಳು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ7 Oct 2026 5:32 PM IST
share
Kalaburagi | ಶರಣಬಸವ ವಿವಿ ಕ್ಯಾಂಪಸ್ ನೇಮಕಾತಿಯಲ್ಲಿ 30 ವಿದ್ಯಾರ್ಥಿಗಳು ಆಯ್ಕೆ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯ ಹಾಗೂ ಸುರಪುರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ಒಟ್ಟು 30 ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದು, ವಾರ್ಷಿಕ 3 ಲಕ್ಷ ರೂ. ವೇತನ ಪ್ಯಾಕೇಜ್‌ನೊಂದಿಗೆ ಉದ್ಯೋಗಾವಕಾಶ ಪಡೆದಿದ್ದಾರೆ.

ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಎಕೋ ಬ್ರೇನ್ ಟೆಕ್ನಾಲಜೀಸ್ ಹಾಗೂ ಡೆಕ್ಸ್ಟ್ರಿಸ್ ಇನ್ಫೋ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಕ್ಯಾಂಪಸ್ ನೇಮಕಾತಿ ಆಯೋಜಿಸಲಾಗಿತ್ತು. ವಿಶ್ವವಿದ್ಯಾಲಯದ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಸುಮಾರು 500 ವಿದ್ಯಾರ್ಥಿಗಳು ಹಾಗೂ ಸುರಪುರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ 70 ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ನೇಮಕಾತಿಯಲ್ಲಿ ಶರಣಬಸವ ವಿಶ್ವವಿದ್ಯಾಲಯದ 26 ವಿದ್ಯಾರ್ಥಿಗಳು ಹಾಗೂ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಎಂಜಿನಿಯರಿಂಗ್ ಪದವಿ ಕೋರ್ಸ್‌ನ ಭಾಗವಾಗಿ ಬೆಂಗಳೂರಿನ ಎಕೋ ಬ್ರೇನ್ ಟೆಕ್ನಾಲಜೀಸ್ ಸಂಸ್ಥೆಯಲ್ಲಿ ಮೂರು ತಿಂಗಳ ಕಡ್ಡಾಯ ಇಂಟರ್ನ್‌ಶಿಪ್ ಪೂರ್ಣಗೊಳಿಸಬೇಕು. ಇಂಟರ್ನ್‌ಶಿಪ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ಸಂಸ್ಥೆಯಲ್ಲಿ ಖಾಯಂ ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರು ಶುಭ ಹಾರೈಸಿದ್ದಾರೆ.

ವಿಶ್ವವಿದ್ಯಾಲಯದ ಕುಲಸಚಿವೆ ಡಾ. ಲಕ್ಷ್ಮಿ ಪಾಟೀಲ ಮಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ ಹಾಗೂ ಹಣಕಾಸು ಅಧಿಕಾರಿ ಡಾ. ಕಿರಣ ಮಕಾ ಅವರು ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ಬೋಧಕ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.

Tags

Sharanabasava UniversitystudentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X