Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೆ.22ರಿಂದ ಲಾಡ್ಲೆ ಮಶಾಖ್...

Kalaburagi | ಸೆ.22ರಿಂದ ಲಾಡ್ಲೆ ಮಶಾಖ್ ಅನ್ಸಾರಿ (ರಹ) ದರ್ಗಾದ 671ನೇ ವಾರ್ಷಿಕ ಉರೂಸ್

ವಾರ್ತಾಭಾರತಿವಾರ್ತಾಭಾರತಿ18 Sept 2026 7:04 PM IST
share
Kalaburagi | ಸೆ.22ರಿಂದ ಲಾಡ್ಲೆ ಮಶಾಖ್ ಅನ್ಸಾರಿ (ರಹ) ದರ್ಗಾದ 671ನೇ ವಾರ್ಷಿಕ ಉರೂಸ್

ಕಲಬುರಗಿ : ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಸಂತ ಲಾಡ್ಲೆ ಮಶಾಖ್ ಅನ್ಸಾರಿ (ರಹ.) ದರ್ಗಾ ಶರೀಫ್* ನಲ್ಲಿ 671ನೇ ವಾರ್ಷಿಕ ಉರೂಸ್ ಶರೀಫ್ ಅಂಗವಾಗಿ ಸೆ.22 ಮತ್ತು 23ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದರ್ಗಾ ಮ್ಯಾನೇಜಿಂಗ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಬ್ಬಾನಿ ಅನ್ಸಾರಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.22ರಂದು ಸಂಜೆ 4 ಗಂಟೆಗೆ ಸಂದಲ್ (ಗಂಧ) ಶರೀಫ್ ಜಲೂಸ್ ನಡೆಯಲಿದೆ. ಹೊಸ ತಹಶೀಲ್ದಾರ್ ಕಚೇರಿಯಿಂದ ಮೆರವಣಿಗೆ ಆರಂಭವಾಗಲಿದ್ದು, ತಹಶೀಲ್ದಾರ್ ಅವರು ಸಂದಲ್ ಅನ್ನು ತಲೆಯ ಮೇಲೆ ಹೊತ್ತುಕೊಂಡು ಹಳೆಯ ತಹಶೀಲ್ದಾರ್ ಕಚೇರಿಗೆ ತಂದು ದರ್ಗಾದ ಮುತವಲ್ಲಿಗೆ ಹಸ್ತಾಂತರಿಸಲಿದ್ದಾರೆ. ಬಳಿಕ ಮೆರವಣಿಗೆಯ ಮೂಲಕ ಸಂದಲ್ ತಡರಾತ್ರಿ ದರ್ಗಾ ಶರೀಫ್ ತಲುಪಲಿದೆ. ಈ ಕಾರ್ಯಕ್ರಮದಲ್ಲಿ ಶಾಸಕ ಬಿ.ಆರ್. ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸೆಪ್ಟೆಂಬರ್ 23ರಂದು ಜಷ್ನ್-ಎ-ಚಿರಾಗಾನ್ (ದೀಪೋತ್ಸವ) ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಖುರಾನ್ ಪಠಣ, ಮಧ್ಯಾಹ್ನ 2 ಗಂಟೆಗೆ ದುರೂದ್-ಓ-ಸಲಾಮ್ ಹಾಗೂ ಫಾತಿಹಾ ಖ್ಯಾನಿ ನೆರವೇರಲಿದೆ. ರಾತ್ರಿ ಇಶಾ ನಮಾಜ್ ಬಳಿಕ ದರ್ಗಾ ಆವರಣದಲ್ಲಿ ಮುಂಬೈನ ಖ್ಯಾತ ಕವ್ವಾಲಿ ಗಾಯಕರಿಂದ ಕವ್ವಾಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಉರುಸ್ ಶರೀಫ್‌ನಲ್ಲಿ ವಿವಿಧ ರಾಜ್ಯಗಳಿಂದ ಸಜ್ಜಾದ ನಶೀನ್‌ಗಳು ಹಾಗೂ ಧಾರ್ಮಿಕ ಗಣ್ಯರು ಭಾಗವಹಿಸಲಿದ್ದು, ವಿವಿಧ ಧರ್ಮಗಳ ಜನರು ಸೌಹಾರ್ದತೆಯಿಂದ ಪಾಲ್ಗೊಳ್ಳುವುದು ಈ ಉತ್ಸವದ ವಿಶೇಷತೆ ಎಂದು ಹೇಳಿದರು. ದರ್ಗಾಕ್ಕೆ ಮೊದಲ ಹೂವು ಅರ್ಪಿಸುವುದು ಸೇರಿದಂತೆ ಹಲವು ಸೇವಾ ಕಾರ್ಯಗಳಲ್ಲಿ ಅನ್ಯಧರ್ಮೀಯರೂ ಭಾಗಿಯಾಗುತ್ತಾರೆ ಎಂದು ತಿಳಿಸಿದರು.

ಉರೂಸ್ ಶರೀಫ್ ಸಮಾಪ್ತಿಯ ಬಳಿಕ ಭಕ್ತರಿಂದ ಗ್ಯಾರಹವಿ ಕಾರ್ಯಕ್ರಮವೂ ನಡೆಯಲಿದೆ. ಆಳಂದ ದರ್ಗಾ ಶರೀಫ್ ಆವರಣದಲ್ಲಿ ನಡೆಯುವ ಉರುಸ್ ಶರೀಫ್‌ಗೆ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದರ್ಗಾ ಮ್ಯಾನೇಜಿಂಗ್ ಕಮಿಟಿ ಮನವಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಯುನೂಸ್ ಅನ್ಸಾರಿ, ನೋಹಿದ್ ಅನ್ಸಾರಿ, ಖಮರುದ್ದೀನ್ ಅನ್ಸಾರಿ, ಮಝಾರ್ ಅನ್ಸಾರಿ ಹಾಗೂ ಮಶಾಖ್ ಅನ್ಸಾರಿ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X