ಕಲಬುರಗಿ | ಅಗ್ನಿ ಅವಘಡದಿಂದ ಜೇವರ್ಗಿಯಲ್ಲಿ 7 ಅಂಗಡಿಗಳು ಸುಟ್ಟು ಭಸ್ಮ

ಕಲಬುರಗಿ : ಜೇವರ್ಗಿ ಪಟ್ಟಣದ ಬುಟ್ನಾಳ ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಗಳು ಅಗ್ನಿ ಅವಘಡದಿಂದಾಗಿ ಸುಮಾರು 7 ಅಂಗಡಿಗಳು ಸುಟ್ಟು ಕರಕಲಾದ ಘಟನೆ ರವಿವಾರ ಮಧ್ಯ ರಾತ್ರಿ ನಡೆದಿದೆ.
ಫರ್ನಿಚರ್ ಅಂಗಡಿಗಳಿಗೆ ಬೆಂಕಿ ಹತ್ತಿದ ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಪ್ರಾರಂಭಿಸಿದರು, ಅದಾಗಲೇ ಸುಮಾರು 7ಕ್ಕೂ ಹೆಚ್ಚು ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಲಕ್ಷಾಂತರ ರೂ. ಬೆಲೆ ಬಾಳು ಎಲೆಕ್ಟ್ರಾನಿಕ್ಸ್ ವಸ್ತುಗಳು ಸಂಪೂರ್ಣ ಸುಟ್ಟು ಬಸ್ಮವಾಗಿವೆ. ಸರಿ ಸುಮಾರು 50 ರಿಂದ 80 ಲಕ್ಷ ರೂ. ಬೆಲೆ ಬಾಳುವ ವಸ್ತುಗಳು ಬೆಂಕಿಯಲ್ಲಿ ನಾಶವಾಗಿವೆ ಎನ್ನಲಾಗುತ್ತಿದೆ.
ಅಗ್ನಿ ಶಾಮಕ ಸಿಬ್ಬಂದಿಗಳು 2 ಗಂಟೆಗೂ ಅಧಿಕ ಕಾಲ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಕೂಡ, ಬಹುತೇಕ ಅಂಗಡಿಗಳು ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಮಲ್ಲಣ್ಣ ಯಲಗೋಡ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಸಿಪಿಐ ರಾಜೇಸಾಹೇಬ್ ನದಾಫ್, ಪಿಎಸ್ಐ ಗಜಾನಂದ ಬಿರಾದಾರ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.







