Kalaburagi | ಜಿಲ್ಲೆಯಾದ್ಯಂತ ಶೇ.89.72ರಷ್ಟು ಗಣತಿ ನಮೂನೆ ವಿತರಣೆ : ಡಿಸಿ ಇಕ್ರಮ್ ಶರೀಫ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಲ್ಲಿ ಭರದಿಂದ ಸಾಗಿದ್ದು, ಜಿಲ್ಲೆಯಾದ್ಯಂತ ಶುಕ್ರವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 21,27,753 (ಶೇ.89.72)ರಷ್ಟು ಗಣತಿ ನಮೂನೆ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಇದುವರೆಗೆ ಬಿ.ಎಲ್.ಓ. ಗಳು 2,26,519 (ಶೇ.09.54) ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆ ಪಡೆದು ಮೊಬೈಲ್ ತಂತ್ರಾಂಶದಲ್ಲಿ ಡಿಜಿಟೈಸ್ ಮಾಡಿದ್ದಾರೆ. ಇನ್ನು 4,913 (ಶೇ.0.21) ಮತದಾರರು ಸ್ವಯಂ ಪ್ರೇರಿತವಾಗಿ ಆನ್ ಲೈನ್ ಮೂಲಕ ಗಣತಿ ನಮೂನೆ ಸಲ್ಲಿಸಿದ್ದಾರೆ. ಬಿ.ಎಲ್.ಓ. ಗಳು ಮನೆ-ಮನೆ ಭೇಟಿ ಕೊಟ್ಟಾಗ ಇಲ್ಲಿಯವರೆಗೆ 2,020(ಶೇ.0.09) ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಮತ್ತು 2,515(ಶೇ.0.11) ಜನ ಮತದಾರರು ನಿಧನ ಹೊಂದಿರುವ ಬಗ್ಗೆ ವರದಿಯಾಗಿದೆ.
Next Story




