Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಾ.11ರಂದು ಕರ್ನಾಟಕ...

ಕಲಬುರಗಿ | ಮಾ.11ರಂದು ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ : ಪ್ರೊ.ಬಟ್ಟು ಸತ್ಯನಾರಾಯಣ

36 ಜನರಿಗೆ ಚಿನ್ನದ ಪದಕ‌ ಸೇರಿದಂತೆ 824 ಅಭ್ಯರ್ಥಿಗಳಿಗೆ ಸ್ನಾತಕ, ಸ್ನಾತಕೊತ್ತರ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 March 2025 6:32 PM IST
share
Photo of Press meet

ಕಲಬುರಗಿ : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 8 ನೇ ಘಟಿಕೋತ್ಸವ ಮಾ.11 ರಂದು ವಿವಿ ಆವರಣದಲ್ಲಿ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ಹೆಚ್ಚಿನ ಅಂಕಗಳಿಸಿದ 36 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಸೇರಿದಂತೆ 824 ಅಭ್ಯರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೊತ್ತರ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ವಿವಿ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.

ರವಿವಾರ ವಿಶ್ವವಿದ್ಯಾಲಯದ ಅತಿಥಿಗೃಹದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9:30 ಗಂಟೆಗೆ ವಿವಿ ಆವರಣದ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿ ಕುಲಾಧಿಪತಿ ವಿಜಯ ಕೇಶವ ಗೋಖಲೆ ಅವರ ಸಮಕ್ಷಮ ವಿವಿಧ ವಿಷಯಗಳ ಮೇಲೆ‌ ಪ್ರಬಂಧ ಮಂಡಿಸಿದ್ದಕ್ಕಾಗಿ 38 ಜನರಿಗೆ ಪಿ.ಎಚ್.ಡಿ ಪದವಿ ಸಹ ಪ್ರದಾನ ಮಾಡಲಾಗುತ್ತಿದೆ ಎಂದರು.

ಇನ್ನು ಶೈಕ್ಷಣಿಕ ಮತ್ತು ಕಾರ್ಯನಿರ್ವಾಹಕ ಮಂಡಳಿಯಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾದ ಕಾರಣ ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡುತ್ತಿಲ್ಲ ಎಂದು ಪ್ರೊ.ಬಟ್ಟು ಸತ್ಯನಾರಾಯಣ ಸ್ಪಷ್ಟಪಡಿಸಿದರು.

2009ರಲ್ಲಿ ಸ್ಥಾಪನೆಯಾದ ಕರ್ನಾಟಕ ಕೇಂದ್ರೀಯ ವಿ.ವಿ.ಯಲ್ಲಿ ಪ್ರಸ್ತುತ 2,800 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ 4 ರಂತೆ ಒಟ್ಟು 8 ವಸತಿ ನಿಲಯಗಳಿವೆ. ಪ್ರಸ್ತುತ 540 ಸಂಖ್ಯೆಯ 2 ಹಾಸ್ಟೆಲ್ ನಿರ್ಮಾಣದ ಹಂತದಲ್ಲಿವೆ. ಮುಂದಿನ 2-3 ವರ್ಷದಲ್ಲಿ ವಿ.ವಿ. ಪ್ರವೇಶಾತಿ ಪ್ರಮಾಣ 5,000 ಸಂಖ್ಯೆಗೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದಕ್ಕೆ ಪೂರಕವಾಗಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ 540 ಸಂಖ್ಯೆಯ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣಕ್ಕೆ ಈಗಾಗಲೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅದಕ್ಕೆ ಅನುಮೋದನೆ ದೊರೆಯಲಿದೆ ಎಂದರು.

ಇನ್ನು ವಿ.ವಿ.ಯ ಗುಣಮಟ್ಟದ ಶಿಕ್ಷಣ ಕುರಿತಂತೆ ಮಾತನಾಡಿದ ಕುಲಪತಿಗಳು, ದೇಶದ 151-200 ವಿ.ವಿ. ಯಲ್ಲಿ ಸಿಯುಕೆ ಸ್ಥಾನ ಪಡೆದುಕೊಂಡಿದೆ. ಭಾರತದ ಅಗ್ರ ವಿವಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಇನ್ನು ಸಮಯವಾಕಾಶ ಬೇಕಿದೆ. ವಿವಿಗೆ ಮಂಜೂರಾತಿ ದೊರೆತ 206ರಲ್ಲಿ 175 ಪ್ರಾಧ್ಯಾಪಕರನ್ನು ನೇಮಕ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ‌ ಪ್ರಾಧ್ಯಾಪಕರ ಅವಶ್ಯಕತೆ ಇದ್ದು, ಹೀಗಾಗಿ ತಮ್ಮ‌ ಅವಧಿಯಲ್ಲಿ ಇದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ‌ ಎಂದ ಅವರು, ಹೊಸದಾಗಿ ಸಸ್ಯ ವಿಜ್ಞಾನ, ಪ್ರಾಣಿ ವಿಜ್ಞಾನ, ಜೆನಿಟಿಕ್ & ಜಿನೋಮ್ಸ್, ಹಾಗೂ ಸ್ಟ್ಯಾಟಿಸ್ಟಿಕ್ಸ್ ವಿಭಾಗ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ವಿಶ್ವವಿದ್ಯಾಲಯದ ಅವರಣದಲ್ಲಿ ಹಸರೀಕರಣ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸಲು ಕೇಂದ್ರ ಸರ್ಕಾರವು ಪ್ರಾರಂಭಿಕವಾಗಿ 1.21 ಕೋಟಿ ರೂ. ಹಣ ನೀಡಿದೆ. ಇದನ್ನು ಸದ್ಬಳಕೆ ಮಾಡಿ ಹೆಚ್ಚಿನ ಅನುದಾನ ಕೇಳಲಾಗುವುದು. ಆವರಣದಲ್ಲಿ ಬೊಟಾನಿಕಲ್ ಗಾರ್ಡನ್ ಮಾದರಿಯಲ್ಲಿ ವಿವಿಧ ಜಾತಿಯ ಔಷಧಿಗಳ ಸಸ್ಯ ನೆಡಲು ಅಯುಷ್ ಇಲಾಖೆಯನ್ನು ಸಂಪರ್ಕಿಸಲಾಗಿದೆ. ಸದ್ಯ ಅಮರ್ಜಾನಿಂದ ವಿವಿಗೆ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಲ್ಲಿ ನೀರಿನ ಸಮಸ್ಯೆ ಕಂಡುಬರಲಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕುಡಿಯುವ ನೀರಿನ ಶಾಶ್ವತ ಸಮಸ್ಯೆ ಪರಿಹಾರಕ್ಕೆ ಚರ್ಚಿಸಲಾಗಿದೆ‌ ಎಂದರು.

ಸೆಮಿ ಕಂಡಕ್ಟರ್ ಸ್ಥಾಪನೆ :

ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್‌ ಕೋರ್ಸ್ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅನುಕೂಲಾಗುವ ನಿಟ್ಟಿನಲ್ಲಿ ಕೇಂದ್ರಿಯ ವಿ.ವಿ. ಅವರಣದಲ್ಲಿ ಸೆಮಿಕಂಡಕ್ಟರ್ ಡೆವಲೆಪ್‌ ಮೆಂಟ್ ಸೆಂಟರ್ ಸ್ಥಾಪನೆ ಮಾಡಲಾಗುತ್ತಿದೆ. 45 ಕೋಟಿ ರೂ. ಮೊತ್ತದ ಉಪಕರಣಗಳು‌ ಜಪಾನ್‌ ನಿಂದ ತರಿಸಲಾಗಿದ್ದು ಇನಸ್ಟಾಲೇಷನ್ ಕಾರ್ಯ ನಡೆದಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಬಿಟ್ಟರೆ ರಾಜ್ಯದಲ್ಲಿ ಇಂತಹ ಯಂತ್ರ ಇರುವುದು ಸಿಯುಕೆ ನಲ್ಲಿ ಇನ್ನೆರಡು ತಿಂಗಳಲ್ಲಿ ಈ ಸೆಂಟರ್ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಕುಲಪತಿಗಳು ಮಾಹಿತಿ ನೀಡಿದರು.

ಪರಿಶಿಷ್ಟ ಪಂಗಡ ರೈತರಿಗೆ ನೆರವು :

ವಿವಿ ಸುತ್ತಮುತ್ತಲಿನ ಪರಿಶಿಷ್ಟ ಪಂಗಡ ರೈತರಿಗೆ ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ದೃಷ್ಠಿಯಿಂದ ಹೈದ್ರಾಬಾದಿನ ಇಂಡಿಯನ್‌ ಇನ್ಸಟಿಟ್ಯೂಸ್ ಆಫ್ ಮಿಲೆಟ್ಸ್ ಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲೆಯ ಆಳಂದ, ಜೇವರ್ಗಿ ಮತ್ತು ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮಗಳನ್ನು ಆಯ್ದುಕೊಂಡು ಅರ್ಹ ಫಲಾನುಭವಿಗಳನ್ನು ಆಯ್ಕೆ‌ ಮಾಡಲಾಗುವುದು.‌ 35 ಲಕ್ಷ ರೂ. ವ್ಯಯ ಮಾಡಿ ಎಫ್.ಪಿ.ಓ ನಲ್ಲಿಯೇ ಬ್ರ್ಯಾಂಡಿಂಗ್, ಗ್ರೇಡಿಂಗ್, ಪ್ಯಾಕೇಜಿಂಗ್ ಹಾಗೂ ಮಾರ್ಕೆಟಿಂಗ್ ಗೆ ಪೂರಕವಾಗಿ ಅಗತ್ಯ ಯಂತ್ರೋಪಕರಣಗಳು ಸರಬರಾಜು ಮಾಡಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕ ಡಾ.ಕೋಟಾ ಸಾಯಿ ಕೃಷ್ಣ, ಕುಲಸಚಿವ ಪ್ರೊ.ಆರ್.ಆರ್.ಬಿರಾದರ, ಸಂಶೋಧನಾ ಮತ್ತು ಇನ್ಕುಬೇಷನ್ ಸೆಲ್‌ ಮುಖ್ಯಸ್ಥ ರಾಜೀವ ಜೋಷಿ, ಪಿ.ಆರ್.ಓ ಗಣಪತಿ ಬಿ.ಸಿನ್ನೂರ, ಎ.ಪಿ.ಆರ್.ಓ ಪ್ರಕಾಶ ಬಾಳಿಕಾಯಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X