Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶೇ.98.46 ಗಣತಿ ನಮೂನೆ...

Kalaburagi | ಶೇ.98.46 ಗಣತಿ ನಮೂನೆ ವಿತರಣೆ: ರಾಜಕೀಯ ಪಕ್ಷಗಳಿಗೆ ಎಸ್‌ಐಆರ್ ಪ್ರಗತಿ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ14 July 2026 7:55 PM IST
share
Kalaburagi | ಶೇ.98.46 ಗಣತಿ ನಮೂನೆ ವಿತರಣೆ: ರಾಜಕೀಯ ಪಕ್ಷಗಳಿಗೆ ಎಸ್‌ಐಆರ್ ಪ್ರಗತಿ ಮಾಹಿತಿ
ಜು.29ರವರೆಗೆ ಮನೆ-ಮನೆಗೆ ಭೇಟಿ ಮುಂದುವರಿಕೆ : ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ : ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಪ್ರಗತಿ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಅವರು ಮಂಗಳವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಹಂಚಿಕೊಂಡರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು 23,71,542 ಮತದಾರರ ಪೈಕಿ 23,35,062 (ಶೇ.98.46) ಮಂದಿಗೆ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿದ್ದಾರೆ ಎಂದು ತಿಳಿಸಿದರು.

ಇದುವರೆಗೆ 6,86,812 (ಶೇ.28.96) ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಸಂಗ್ರಹಿಸಿ ಮೊಬೈಲ್ ತಂತ್ರಾಂಶದಲ್ಲಿ ಡಿಜಿಟೈಸ್ ಮಾಡಲಾಗಿದೆ. ಅಲ್ಲದೆ 5,585 (ಶೇ.0.24) ಮತದಾರರು ಸ್ವಯಂಪ್ರೇರಿತವಾಗಿ ಆನ್‌ಲೈನ್ ಮೂಲಕ ಗಣತಿ ನಮೂನೆ ಸಲ್ಲಿಸಿದ್ದಾರೆ. ಮನೆ-ಮನೆಗೆ ಭೇಟಿ ವೇಳೆ 6,156 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಹಾಗೂ 6,924 ಮಂದಿ ನಿಧನ ಹೊಂದಿರುವುದು ವರದಿಯಾಗಿದೆ ಎಂದು ವಿವರಿಸಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಎಸ್‌ಐಆರ್ ಕಾರ್ಯ ನಡೆಯುತ್ತಿದೆ. ಜುಲೈ 29ರವರೆಗೆ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸಂಗ್ರಹಿಸಿ ಡಿಜಿಟೈಸ್ ಮಾಡಲಿದ್ದಾರೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ಮರುಹೊಂದಾಣಿಕೆ (ರೇಷನಲೈಸೇಷನ್) ಕಾರ್ಯವೂ ನಡೆಯಲಿದೆ ಎಂದು ತಿಳಿಸಿದರು.

ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆಗಳನ್ನು ಸ್ವೀಕರಿಸಿ, ಅಕ್ಟೋಬರ್ 3ರೊಳಗೆ ಅವುಗಳನ್ನು ವಿಲೇವಾರಿ ಮಾಡಿ ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಎಸ್‌ಐಆರ್ ವೇಳಾಪಟ್ಟಿಯನ್ನು ವಿವರಿಸಿದರು.

ಜಿಲ್ಲೆಯ 2,400 ಮತಗಟ್ಟೆಗಳಿಗೆ ಬಿಎಲ್‌ಒಗಳನ್ನು ನಿಯೋಜಿಸಲಾಗಿದ್ದು, ಮತದಾರರ ನೆರವಿಗಾಗಿ 2,400 ವೋಟರ್ ಫೆಸಿಲಿಟೇಷನ್ ಸೆಂಟರ್‌ಗಳು ಹಾಗೂ ಬಿಎಲ್‌ಒಗಳಿಗೆ ಸಹಕಾರ ನೀಡಲು 283 ಬಿಎಲ್‌ಒ ಫೆಸಿಲಿಟೇಷನ್ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಕಾರ್ಯವನ್ನು ನಿಖರ, ದೋಷರಹಿತ ಹಾಗೂ ಪಾರದರ್ಶಕವಾಗಿ ಪೂರ್ಣಗೊಳಿಸಲು ಎಲ್ಲ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಐ.ಎ.ಎಸ್.ಪ್ರೊಬೇಷನರ್ ಅಧಿಕಾರಿ ಶಿಖರ್ ಮೋಘಾ ಸೇರಿದಂತೆ ವಿವಿಧ ಪಕ್ಷದ ಪ್ರತಿನಿಧಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X