Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉತ್ತಮ ಪುಸ್ತಕ ನೆಮ್ಮದಿಯ...

Kalaburagi | ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕು: ಡಾ.ಕೆ.ಎಸ್.ಬಂಧು

‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ15 Nov 2026 6:46 PM IST
share
Kalaburagi | ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕು: ಡಾ.ಕೆ.ಎಸ್.ಬಂಧು

ಕಲಬುರಗಿ: ಪುಸ್ತಕಗಳು ಜ್ಞಾನ, ಅನುಭವ ಹಾಗೂ ಜೀವನಕ್ಕೆ ಮಾರ್ಗದರ್ಶನ ನೀಡುತ್ತವೆ. ಒಂದು ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕಾಗುತ್ತದೆ ಎಂದು ಖ್ಯಾತ ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕ ಡಾ. ಕೆ.ಎಸ್. ಬಂಧು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹಾಗೂ ಕಲಬುರಗಿ ಜಿಲ್ಲಾ ಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಗರದ ಬಿದ್ದಾಪುರ ಕಾಲೋನಿಯ ಘಾಟಗೆ ಲೇಔಟ್‌ನಲ್ಲಿರುವ ಸಾಹಿತಿ ಹಾಗೂ ಪತ್ರಕರ್ತ ಸುರೇಶ್ ಬಡಿಗೇರ್ ಅವರ ಮನೆಯಲ್ಲಿ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಪುಸ್ತಕ ಪ್ರಾಧಿಕಾರವು ‘ಮನೆಗೊಂದು ಗ್ರಂಥಾಲಯ’ ಎಂಬ ಉತ್ತಮ ಯೋಜನೆಯನ್ನು ರೂಪಿಸಿ, ಪ್ರತಿಯೊಬ್ಬರ ಮನೆಯಲ್ಲೂ ಗ್ರಂಥಾಲಯ ಇರುವಂತೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಈ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಸಂಸ್ಕೃತಿ ಹೆಚ್ಚಬೇಕು ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ರಾಜ್ಯ ಸದಸ್ಯ ಬಿ.ಎಚ್. ನಿರಗುಡಿ, ಪುಸ್ತಕ ಪ್ರಾಧಿಕಾರವು ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ, ಅಂಗಳದಲ್ಲಿ ತಿಂಗಳ ಪುಸ್ತಕ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಭಾಗದ ಸಾಹಿತಿಗಳ ಕೃತಿಗಳ ಸಂಪುಟಗಳನ್ನು ಹೊರತರುವುದರ ಜೊತೆಗೆ ಶಾಲಾ-ಕಾಲೇಜುಗಳಲ್ಲಿ ‘ನನ್ನ ನೆಚ್ಚಿನ ಪುಸ್ತಕ’ ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಭಾಗದ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸುವ ಕಾರ್ಯವೂ ನಡೆಯುತ್ತಿದೆ. ಮನೆ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಮೂಲಕ ಪುಸ್ತಕ ಸಂಸ್ಕೃತಿಯನ್ನು ಬೆಳೆಸೋಣ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಚಾಮರಾಜ ದೊಡ್ಡಮನಿ ಮಾತನಾಡಿ, ಪುಸ್ತಕಗಳು ಜ್ಞಾನವನ್ನು ನೀಡುವುದರ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನೂ ನೀಡುತ್ತವೆ ಎಂದರು.

ಸಾಹಿತಿ ಹಾಗೂ ಪತ್ರಕರ್ತ ಸುರೇಶ್ ಬಡಿಗೇರ್ ಮಾತನಾಡಿ, ತಮ್ಮ ಮನೆಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದು, ಓದುಗರಿಗೆ ಅವುಗಳನ್ನು ಓದಲು ಅವಕಾಶ ಕಲ್ಪಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಸಜ್ಜಿತ ಹಾಗೂ ಬೃಹತ್ ಗ್ರಂಥಾಲಯ ನಿರ್ಮಿಸುವ ಕನಸಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಿ ಐಪಿಎಸ್, ಐಎಎಸ್ ಅಧಿಕಾರಿಗಳಾಗಬೇಕು ಎಂಬ ಆಶಯದಿಂದ ಇಷ್ಟೊಂದು ಪುಸ್ತಕಗಳನ್ನು ಸಂಗ್ರಹಿಸಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಮೇಶ್ ಬಡಿಗೇರ್, ಅಂಬಾರಾಯ ಕೋಣೆ, ರೇವಣಸಿದ್ದಪ್ಪ ವಕೀಲ್, ಡಾ. ಶರಬಯ್ಯಸ್ವಾಮಿ, ಬಂಡೆಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

BookKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X