Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉತ್ತಮ ಪುಸ್ತಕ ನೆಮ್ಮದಿಯ...

Kalaburagi | ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕಾಗುತ್ತದೆ: ಡಾ.ರಿಯಾಝ್ ಅಹ್ಮದ್ ಬೋಡೆ

‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Nov 2026 5:59 PM IST
share
Kalaburagi | ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕಾಗುತ್ತದೆ: ಡಾ.ರಿಯಾಝ್ ಅಹ್ಮದ್ ಬೋಡೆ

ಕಲಬುರಗಿ: ಪುಸ್ತಕಗಳು ಜ್ಞಾನ, ಅನುಭವ ಹಾಗೂ ಜೀವನಕ್ಕೆ ಮಾರ್ಗದರ್ಶನ ನೀಡುತ್ತವೆ. ಉತ್ತಮ ಪುಸ್ತಕ ನೆಮ್ಮದಿಯ ಬದುಕಿಗೆ ಬೆಳಕಾಗುತ್ತದೆ ಎಂದು ಸಾಹಿತಿ ಹಾಗೂ ಅನುವಾದಕ ಡಾ.ರಿಯಾಝ್ ಅಹ್ಮದ್ ಬೋಡೆ ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಜಾಗೃತಿ ಸಮಿತಿ, ಕಲಬುರಗಿ ಸಂಯುಕ್ತ ಆಶ್ರಯದಲ್ಲಿ ನಗರದ ಎಂ.ಎಸ್.ಕೆ. ಮಿಲ್ ಸಮೀಪದ ಲೇಔಟ್‌ನಲ್ಲಿ ಸಾಹಿತಿ ಹಾಗೂ ಶಿಕ್ಷಕಿ ಡಾ. ಪರ್ವೀನ್ ಸುಲ್ತಾನಾ ಅವರ ನಿವಾಸದಲ್ಲಿ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರ ಮನೆಯಲ್ಲೂ ಗ್ರಂಥಾಲಯ ಸ್ಥಾಪಿಸುವ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರ ರೂಪಿಸಿರುವ ಯೋಜನೆ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.

ಪ್ರಾಧಿಕಾರದ ರಾಜ್ಯ ಸದಸ್ಯ ಬಿ.ಎಚ್. ನೀರಗುಡಿ ಮಾತನಾಡಿ, ಪುಸ್ತಕ ಪ್ರದರ್ಶನ, ವಿಚಾರ ಸಂಕಿರಣ, ಅಂಗಳದಲ್ಲಿ ತಿಂಗಳ ಪುಸ್ತಕ, ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಭಾಗದ ಸಾಹಿತಿಗಳ ಕೃತಿಗಳನ್ನು ಪ್ರಕಟಿಸುವುದು, ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಿಸುವುದು ಹಾಗೂ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವವರನ್ನು ಅಭಿನಂದನಾ ಪತ್ರ ನೀಡಿ ಗೌರವಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ಹೂಗಾರ ಮಾತನಾಡಿ, ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ನಿರ್ಮಾಣವಾಗಬೇಕು. ಪುಸ್ತಕ ಓದುವುದರಿಂದ ಮನುಷ್ಯನ ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಗ್ರಂಥಾಲಯ ಸ್ಥಾಪಿಸಿರುವ ಡಾ. ಪರ್ವೀನ್ ಸುಲ್ತಾನಾ ಮಾತನಾಡಿ, ಮನೆಯಲ್ಲಿ ಸಾವಿರಾರು ಸಾಹಿತ್ಯ ಕೃತಿಗಳನ್ನು ಸಂಗ್ರಹಿಸಿದ್ದು, ವಿದ್ಯಾರ್ಥಿಗಳಿಗೆ ಓದಲು ಅವಕಾಶ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಗ್ರಂಥಾಲಯ ನಿರ್ಮಿಸುವ ಯೋಜನೆಯಿದೆ. ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಚಾರಿಕ ಬೆಳವಣಿಗೆಗೆ ನೆರವಾಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಂಬಾರಾಯ ಕೋಣೆ, ಮಲ್ಲಿಕಾರ್ಜುನ ಸಿರಸಗಿ, ಅಹ್ಮದ್ ಮೊಹಿಯುದ್ದೀನ್ ಮಹೇಶ್ವರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

BookKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X