Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನೋಡುವ ಸಂಸ್ಕೃತಿಗಿಂತ...

Kalaburagi | ನೋಡುವ ಸಂಸ್ಕೃತಿಗಿಂತ ಓದುವ ಸಂಸ್ಕೃತಿ ಹೆಚ್ಚಾದರೆ ಜ್ಞಾನವಂತ ಸಮಾಜ ನಿರ್ಮಾಣ ಸಾಧ್ಯ: ಡಾ.ಸದಾನಂದ ಪೆರ್ಲ

ವಾರ್ತಾಭಾರತಿವಾರ್ತಾಭಾರತಿ16 Oct 2026 6:38 PM IST
share
Kalaburagi | ನೋಡುವ ಸಂಸ್ಕೃತಿಗಿಂತ ಓದುವ ಸಂಸ್ಕೃತಿ ಹೆಚ್ಚಾದರೆ ಜ್ಞಾನವಂತ ಸಮಾಜ ನಿರ್ಮಾಣ ಸಾಧ್ಯ: ಡಾ.ಸದಾನಂದ ಪೆರ್ಲ

ಕಲಬುರಗಿ: ಪ್ರಸಕ್ತ ದಿನಗಳಲ್ಲಿ ನೋಡುವ ಸಂಸ್ಕೃತಿಗಿಂತ ಓದುವ ಸಂಸ್ಕೃತಿ ಹೆಚ್ಚಾದರೆ ಜ್ಞಾನವಂತ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ. ಸದಾನಂದ ಪೆರ್ಲ ಅಭಿಪ್ರಾಯಪಟ್ಟರು.

ಕನ್ನಡ ಪುಸ್ತಕ ಪ್ರಾಧಿಕಾರದ ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದಡಿ ಕಲಬುರಗಿಯ ಹೈಕೋರ್ಟ್ ಸಮೀಪದ ಶಿಕ್ಷಕಿ ಮಮತಾ ಪ್ರವೀಣ್ ಜಾನೆ ಅವರ ಮನೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಮೊಬೈಲ್ ನೋಡುವ ಗೀಳು ಹೆಚ್ಚಾಗುತ್ತಿರುವುದರಿಂದ ಓದುವ ಸಂಸ್ಕೃತಿ ಕುಗ್ಗುತ್ತಿದೆ. ವ್ಯಕ್ತಿಯು ಪರಿಪೂರ್ಣತೆ ಸಾಧಿಸಲು ಪುಸ್ತಕಗಳು ಪ್ರೇರಣೆ ನೀಡುತ್ತವೆ. ಶ್ರೇಷ್ಠ ಸಾಧಕರು ಹಾಗೂ ಮಹನೀಯರ ಬದುಕಿನಲ್ಲಿ ಪುಸ್ತಕಗಳು ಮಹತ್ತರ ಪ್ರೇರಣೆ ನೀಡಿದ್ದು, ಅವರು ಯಶಸ್ವಿ ವ್ಯಕ್ತಿಗಳಾಗಿ ಬೆಳೆಯಲು ಸಹಕಾರಿಯಾಗಿವೆ. ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಎ.ಪಿ.ಜೆ. ಅಬ್ದುಲ್ ಕಲಾಂ ಸೇರಿದಂತೆ ಹಲವು ಗಣ್ಯರ ಬದುಕಿನಲ್ಲಿ ಪುಸ್ತಕಗಳು ಮಹತ್ವದ ತಿರುವು ನೀಡಿವೆ. ಮನೆಮನೆಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸಿ, ಮಕ್ಕಳಲ್ಲಿ ಓದುವ ಸಂಸ್ಕೃತಿಯನ್ನು ಬೆಳೆಸುವ ದೊಡ್ಡ ಜವಾಬ್ದಾರಿ ಹಿರಿಯರು ಮತ್ತು ಪೋಷಕರ ಮೇಲಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್. ನಿರಗುಡಿ, ರಾಜ್ಯದಲ್ಲಿ ಪ್ರತಿವರ್ಷ 7 ಸಾವಿರಕ್ಕೂ ಹೆಚ್ಚು ಪುಸ್ತಕಗಳು ಮುದ್ರಣವಾಗುತ್ತವೆ. ಆದರೆ, ಸರ್ಕಾರ ಅವುಗಳನ್ನು ಖರೀದಿಸುತ್ತಿಲ್ಲ. ಇದರಿಂದ ಲೇಖಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಪುಸ್ತಕಗಳನ್ನು ಖರೀದಿಸುವ ಮೂಲಕ ಲೇಖಕರನ್ನು ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದರು.

ಪುಸ್ತಕ ಓದುಗರ ಸಂಖ್ಯೆ ಕುಸಿಯುತ್ತಿದ್ದು, ಸಾರ್ವಜನಿಕ ಗ್ರಂಥಾಲಯಗಳಿದ್ದರೂ ಓದುಗರ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮದ ಅನುಷ್ಠಾನಕ್ಕೆ ಪ್ರೋತ್ಸಾಹ ನೀಡುತ್ತಿದೆ. ಒಂದು ಲಕ್ಷ ಗ್ರಂಥಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಈಗಾಗಲೇ ರಾಜ್ಯದ 31 ಜಿಲ್ಲೆಗಳಲ್ಲಿ 20 ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳು ನಡೆದಿವೆ. ಕಲಬುರಗಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉತ್ತಮ ಗ್ರಂಥಾಲಯ ನಿರ್ಮಿಸಿರುವ ಶಿಕ್ಷಕಿ ಮಮತಾ ಜಾನೆ ಹಾಗೂ ಪ್ರವೀಣ್ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಶಿಕ್ಷಕಿ ಡಾ. ಪರ್ವೀನಾ ಸುಲ್ತಾನಾ ಪ್ರಾರ್ಥಿಸಿ, ನಿರೂಪಿಸಿದರು. ಅಂಬಾರಾಯ ಕೋಣೆ, ಬಸವರಾಜ್ ಜಾನೆ, ಕಲಾವಿದೆ ಮಂಜುಳಾ ಜಾನೆ ಮತ್ತಿತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X