Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮೂಢನಂಬಿಕೆ, ಮೌಢ್ಯ...

Kalaburagi | ಮೂಢನಂಬಿಕೆ, ಮೌಢ್ಯ ನಿವಾರಣೆಗೆ ನಿರಂತರ ವಿಜ್ಞಾನ ಚಳವಳಿ ಅಗತ್ಯ : ಡಾ.ಶ್ರೀಶೈಲ ಗೂಳಿ

ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ5 Nov 2026 6:50 PM IST
share
Kalaburagi | ಮೂಢನಂಬಿಕೆ, ಮೌಢ್ಯ ನಿವಾರಣೆಗೆ ನಿರಂತರ ವಿಜ್ಞಾನ ಚಳವಳಿ ಅಗತ್ಯ : ಡಾ.ಶ್ರೀಶೈಲ ಗೂಳಿ

ಕಲಬುರಗಿ: ದೇಶದಲ್ಲಿ ದಿನೇದಿನೇ ಹೆಚ್ಚುತ್ತಿರುವ ಮೂಢನಂಬಿಕೆ, ಮೌಢ್ಯತೆ ಹಾಗೂ ಅವೈಜ್ಞಾನಿಕ ಚಿಂತನೆಗಳನ್ನು ಹೋಗಲಾಡಿಸಿ, ಸಮಾಜದ ಪ್ರತಿಯೊಬ್ಬರಲ್ಲೂ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರವಾಗಿ ವಿಜ್ಞಾನ ಚಳವಳಿಗಳು ನಡೆಯಬೇಕಾದ ಅಗತ್ಯವಿದೆ ಎಂದು ವಿಕಾರಾಬಾದ್‌ನ ಮಹಾವೀರ ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಶೈಲ ಗೂಳಿ ಪ್ರತಿಪಾದಿಸಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಇಂದಿಗೂ ಬೇರುಬಿಟ್ಟಿರುವ ಮೂಢನಂಬಿಕೆ, ಅಂಧಶ್ರದ್ಧೆ ಮತ್ತು ಮೌಢ್ಯತೆಯನ್ನು ನಿರ್ಮೂಲನೆ ಮಾಡಬೇಕಾದರೆ ವೈಜ್ಞಾನಿಕ ಮನೋಭಾವ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಬಾರದು. ಅದು ಪ್ರತಿಯೊಬ್ಬರ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಪ್ರಶ್ನಿಸುವ ಮನೋಭಾವ, ವೈಚಾರಿಕ ಚಿಂತನೆ ಮತ್ತು ವೈಜ್ಞಾನಿಕ ದೃಷ್ಟಿಕೋನಗಳನ್ನು ಬೆಳೆಸಿಕೊಳ್ಳುವ ಮೂಲಕ ಮಾತ್ರ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯ. ದೇಶದ ನಿಜವಾದ ಅಭಿವೃದ್ಧಿಯು ವೈಜ್ಞಾನಿಕ ಸಂಶೋಧನೆ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವದ ಬೆಳವಣಿಗೆಯನ್ನು ಅವಲಂಬಿಸಿದೆ ಎಂದು ಅಭಿಪ್ರಾಯಪಟ್ಟರು.

ನಾಟಕವು ಸಮಾಜದೊಂದಿಗೆ ನೇರ ಸಂವಾದ ನಡೆಸುವ ಅತ್ಯಂತ ಪರಿಣಾಮಕಾರಿ ಕಲಾ ಮಾಧ್ಯಮವಾಗಿದೆ. ಎಲ್ಲ ಕಲೆಗಳಲ್ಲಿಯೂ ವಿಶಿಷ್ಟ ಸ್ಥಾನ ಹೊಂದಿರುವ ನಾಟಕದ ಮೂಲಕ ವಿಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸಬಹುದು. ‘ಕಲೆ ಕಲೆಗಾಗಿ ಅಲ್ಲ, ಕಲೆ ಸಮಾಜಕ್ಕಾಗಿ’ ಎಂಬ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಲೆಯನ್ನು ಸಾಮಾಜಿಕ ಪರಿವರ್ತನೆಯ ಪ್ರಬಲ ಸಾಧನವನ್ನಾಗಿ ಬಳಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ವಿಜ್ಞಾನ ನಾಟಕಗಳಲ್ಲಿ ಭಾಗವಹಿಸುವುದನ್ನು ಕೇವಲ ಸ್ಪರ್ಧೆಯಾಗಿ ಪರಿಗಣಿಸದೆ, ವಿಜ್ಞಾನದ ಮಹತ್ವ ಅರಿತುಕೊಳ್ಳುವ ಹಾಗೂ ಸಮಾಜದಲ್ಲಿ ವೈಜ್ಞಾನಿಕ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಪ್ರಯತ್ನವಾಗಿ ಸ್ವೀಕರಿಸಬೇಕು. ನಾಟಕಗಳ ಮೂಲಕ ಜನಸಾಮಾನ್ಯರಲ್ಲಿರುವ ಮೌಢ್ಯತೆ ಮತ್ತು ಅವೈಜ್ಞಾನಿಕ ನಂಬಿಕೆಗಳನ್ನು ಹೋಗಲಾಡಿಸಿ, ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ತಾವು ಕಲಿತ ವೈಜ್ಞಾನಿಕ ವಿಚಾರಗಳನ್ನು ನಿತ್ಯಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ವಿಜ್ಞಾನ ಕೇಂದ್ರದ ಅಧಿಕಾರಿ ಎನ್. ಪೊನ್ನರಸ್ ಮಾತನಾಡಿದರು. ಡಯಟ್‌ನ ನೋಡಲ್ ಅಧಿಕಾರಿ ಗಿರೀಶ್ ಕಡ್ಲೆವಾಡ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯ ಆಶಯ, ಉದ್ದೇಶ ಹಾಗೂ ಶೈಕ್ಷಣಿಕ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಡಯಟ್‌ನ ಉಪನ್ಯಾಸಕರಾದ ಬಿನಾಜಿ ಸೂರ್ಯವಂಶಿ, ಸಿದ್ದಮ್ಮ ಕಲಶೆಟ್ಟಿ, ಮಲ್ಕಮ್ಮ ರಾಣೆ, ಎಂ.ಜಿ. ಸತೀಶ್, ನಾಟಕ ಶಿಕ್ಷಕರಾದ ರಾಘವೇಂದ್ರ ಹಳಿಪೇಠ ಹಾಗೂ ಸಂತೋಷ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X