Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಕ್ಕಳ ಗಣಿತ ಕಲಿಕೆ...

Kalaburagi | ಮಕ್ಕಳ ಗಣಿತ ಕಲಿಕೆ ಸುಧಾರಣೆಗೆ ‘ಊರ ಜನರ ನಡಿಗೆ–ಮಕ್ಕಳ ಕಲಿಕೆಯ ಕಡೆಗೆ’ ಕಾರ್ಯಕ್ರಮ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:42 PM IST
share
Kalaburagi | ಮಕ್ಕಳ ಗಣಿತ ಕಲಿಕೆ ಸುಧಾರಣೆಗೆ ‘ಊರ ಜನರ ನಡಿಗೆ–ಮಕ್ಕಳ ಕಲಿಕೆಯ ಕಡೆಗೆ’ ಕಾರ್ಯಕ್ರಮ

ಕಲಬುರಗಿ: ಸರ್ಕಾರಿ ಶಾಲಾ ಮಕ್ಕಳ ಗಣಿತ ಕಲಿಕೆಯ ಗುಣಮಟ್ಟ ಹೆಚ್ಚಿಸುವುದರ ಜತೆಗೆ ಶಿಕ್ಷಣದಲ್ಲಿ ಸಮುದಾಯದ ಪಾಲುದಾರಿಕೆಯನ್ನು ಬಲಪಡಿಸುವ ಉದ್ದೇಶದಿಂದ ಅಕ್ಷರ ಫೌಂಡೇಶನ್ ಹಾಗೂ ಸ್ಥಳೀಯ ಸಮುದಾಯದ ಸಹಭಾಗಿತ್ವದಲ್ಲಿ ಕಲಬುರಗಿ ತಾಲೂಕಿನ ಪಾಳ ಗ್ರಾಮದ ಹನುಮಾನ್ ದೇವಸ್ಥಾನದ ಸಭಾಂಗಣದಲ್ಲಿ ನ. 16 ಮತ್ತು 17ರಂದು ಎರಡು ದಿನಗಳ ಕಾಲ ‘ಊರ ಜನರ ನಡಿಗೆ–ಮಕ್ಕಳ ಕಲಿಕೆಯ ಕಡೆಗೆ’ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಅಕ್ಷರ ಫೌಂಡೇಶನ್ ಜಿಲ್ಲಾ ಕ್ಷೇತ್ರ ಸಂಯೋಜಕ ಪ್ರದೀಪ್ ರೆಡ್ಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಗಣಿತ ಕಲಿಕೆಯ ಸುಧಾರಣೆಯಲ್ಲಿ ಪೋಷಕರು ಮತ್ತು ಸಮುದಾಯದ ಸಕ್ರಿಯ ಪಾತ್ರ ಮಹತ್ವದ್ದಾಗಿದೆ. ಗ್ರಾಮದ ತಾಯಂದಿರು, ಪೋಷಕರು ಹಾಗೂ ಯುವ ಸಮೂಹ ಸೇರಿದಂತೆ ಒಟ್ಟು 93 ಸಮುದಾಯದ ಸದಸ್ಯರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ವಿವಿಧ ಗಣಿತ ಚಟುವಟಿಕೆಗಳ ಮೂಲಕ ಮಕ್ಕಳ ಕಲಿಕೆಯ ಮಹತ್ವದ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮಕ್ಕಳ ಶಿಕ್ಷಣದ ಕುರಿತು ಪೋಷಕರು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸುವ ಇಂತಹ ಪ್ರಯತ್ನಗಳು ಅರ್ಥಪೂರ್ಣವಾಗಿವೆ. ಮಕ್ಕಳ ಗುಣಮಟ್ಟದ ಕಲಿಕೆಯ ಪ್ರಗತಿಗಾಗಿ ಗ್ರಾಮದ ಪ್ರತಿಯೊಬ್ಬರೂ ಜವಾಬ್ದಾರಿಯುತ ಪಾಲುದಾರರಾಗಿ ಕೈಜೋಡಿಸಬೇಕು ಎಂದು ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಗಣಿತ ಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಸಮುದಾಯದ ಸದಸ್ಯರಿಗೆ ಅಭಿನಂದನಾ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಪ್ರೌಢಶಾಲೆಯ ಮುಖ್ಯಗುರು ನೀಲಕಂಠ ಸಿಂದೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆರೋಗ್ಯ ಅಧಿಕಾರಿ ಪೂಜಾ ದೊಡ್ಮನಿ, ಕಲಬುರಗಿ ಕ್ಷೇತ್ರ ವಿಭಾಗೀಯ ವ್ಯವಸ್ಥಾಪಕ ಅಡವೇಶಪ್ಪ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಲವಕುಶ ಉಪಸ್ಥಿತರಿದ್ದರು. ಕಿಶನ್ ರಾವ್ ಸ್ವಾಗತಿಸಿ, ವಂದಿಸಿದರು.

ಗ್ರಾಮದ ಹಿರಿಯರು, ತಾಯಂದಿರು, ಪೋಷಕರು ಹಾಗೂ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

KalaburagiWalkChildrenmathematics
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X