ಕಲಬುರಗಿ: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ; ಮೃತದೇಹ ಪತ್ತೆ

ಕಲಬುರಗಿ: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಮೃತದೇಹ ಪತ್ತೆಯಾಗಿದೆ.
ಕಮಲಾಪುರ ತಾಲೂಕಿನ ಭುಸಣಗಿ ಗ್ರಾಮದ ಸಾಕ್ಷಿ ಉಪ್ಪಾರ್(22), ಅಭಿಷೇಕ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಹೊಸ ಕುರಿಕೋಟ ಸೇತುವೆ ಸಮೀಪದ ಬೆಣ್ಣೆತೋರ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.
ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯಿಂದ ಮೃತದೇಹ ಕೊನೆಗೂ ಪತ್ತೆಯಾಗಿದೆ. ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





