Kalaburagi | ಗಣೇಶ ಮೂರ್ತಿ ವೀಕ್ಷಣೆಗೆ ತೆರಳಿದ್ದ ವೇಳೆ ಅಪಘಾತ : ಯುವಕ ಮೃತ್ಯು, ಮತ್ತೋರ್ವನಿಗೆ ಗಾಯ

ಪ್ರಶಾಂತ ಪೊಲೀಸ್ ಬಿರಾದಾರ
ಕಲಬುರಗಿ: ಗಣೇಶ ಮೂರ್ತಿ ವೀಕ್ಷಣೆಗೆ ತೆರಳಿದ್ದ ಯುವಕರು ಬೈಕ್ ರೇಸಿಂಗ್ ನಡೆಸುತ್ತಿದ್ದ ವೇಳೆ ಎರಡು ಬೈಕ್ಗಳು ಪರಸ್ಪರ ಢಿಕ್ಕಿ ಹೊಡೆದು ಓರ್ವ ಯುವಕ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಸೋಮವಾರ ರಾತ್ರಿ ನಗರದ ಹೀರಾಪುರದ ಡಾ.ಬಿ.ಆರ್.ಅಂಬೇಡ್ಕರ್ ಮೇಲ್ಸೇತುವೆ ಬಳಿ ನಡೆದಿದೆ.
ಮೃತ ಯುವಕನನ್ನು ನಗರದ ಹೊರವಲಯದ ಕೋಟನೂರ (ಡಿ) ಗ್ರಾಮದ ಪ್ರಶಾಂತ ಪೊಲೀಸ್ ಬಿರಾದಾರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಲಿಂಗರಾಜ್ ಪೂಜಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿದರು. ಈ ಘಟನೆ ಸಂಚಾರಿ-1 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು,ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.
Next Story




